ಚಿಕ್ಕೋಡಿ: ನವರಾತ್ರಿ (Navaratri) ಹಿನ್ನೆಲೆಯಲ್ಲಿ ಆಯೋಜಿಸಿದ್ದ ದಾಂಡಿಯಾ (Dandiya) ಉತ್ಸವ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಸಕತ್ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ. ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಆಯೋಜಿಸಿದ್ದ ದಾಂಡಿಯಾ ಉತ್ಸವದಲ್ಲಿ ಮಹಿಳೆಯರು ಹಾಗೂ ಕುಟುಂಬಸ್ಥರೊಂದಿಗೆ ಶಶಿಕಲಾ ಜೊಲ್ಲೆ ದಾಂಡಿಯಾ ನೃತ್ಯ ಮಾಡಿದ್ದಾರೆ. ರಾಜಸ್ಥಾನಿ ವೇಷಭೂಷಣ ತೊಟ್ಟು ಮಿಂಚಿದ್ದಾರೆ. ಶಶಿಕಲಾ ಜೊತೆಗೆ ಅವರ ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಅವರ ಪುತ್ರ …
Read More »ಹೆಂಡತಿ ತಂಗಿ ಮೇಲೆ ಕಣ್ಣಿಟ್ಟವನ ಕೈ ಕತ್ತರಿಸಿದ್ದ ಭಾವ, ಮೂವರು ಅಂದರ್.!
ಬೆಂಗಳೂರು: ಹೆಂಡತಿ ತಂಗಿ ಮೇಲೆ ಕಣ್ಣು ಹಾಕಿದ್ದ ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ಯುವತಿಯ ಭಾವ ಸೇರಿ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ ಖಾನ್, ಮಹಮ್ಮದ್ ಸಲೀಂ, ಅಬೂಬಕ್ಕರ್ ಸಿದ್ಧಿಕಿ ಕಂಬಿ ಈಗ ಮುದ್ದೆ ಮುರಿಯುತ್ತಿರುವವರು. ತಂಟೆ ತಕರಾರು ಮಾಡಿಕೊಂಡು ಓಡಾಡಿಕೊಂಡಿದ್ದ ಶೋಯೆಬ್ ಎಂಬಾತ ಬಂಧಿತ ಮುಬಾರಕ್ ಹೆಂಡತಿಯ ತಂಗಿ ಹಿಂದೆ ಬಿದ್ದು ಪ್ರೀತ್ಸೆ ಪ್ರೀತ್ಸೆ ಅಂತಾ ಕಾಟ ಕೊಡುತ್ತಿದ್ದನಂತೆ. ಹೀಗಾಗಿ ಶೋಯೊಬ್‌ಗೆ ಮುಬಾರಕ್ ಹಲವು …
Read More »ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ
ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು …
Read More »ದಸರಾ ಹಬ್ಬಕ್ಕೆಂದು ಊರಿಗೆ ವಾಪಸ್ ಆಗುವಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯ ,
ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13) ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ …
Read More »ಮುಜರಾಯಿ ಇಲಾಖೆ ಅನುದಾನ ನಮ್ಮ ರಾಜ್ಯದ ದೇವಸ್ಥಾನಕ್ಕೆ ನೀಡದೇ ಬೇರೆ ರಾಜ್ಯದ ದೇವಸ್ಥಾನಗಳಿಗೆ ಬಿಡುಗಡೆ: ಮಾಜಿ ಶಾಸಕ ರಾಜು ಕಾಗೆ ಆರೋಪ
ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬೇರೆ ರಾಜ್ಯಗಳ ದೇವಸ್ಥಾನಕ್ಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಗ್ರಾಮದ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಶಾಸಕ ರಾಜು ಕಾಗೆ, ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸಂಬಂಧಿಸಿ ಅನುದಾನವನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ನೀಡಲಾಗುತ್ತಿದೆ. ಆದರೆ, ನಮಗೆ ಸರಿಯಾಗಿ ಅನುದಾನ …
Read More »ಮತ್ತೆ ಕಬ್ಬಿಗರ ದರ ಸಂಘರ್ಷ; ಹೆಚ್ಚುವರಿ ದರ ನೀಡಲು ಅನ್ನದಾತರ ಒತ್ತಾಯ
ಬೆಳಗಾವಿ: ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ನುರಿಸುವ ಕಾರ್ಯ ಆರಂಭ, ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಎಫ್‌ಆರ್‌ಪಿ ಪ್ರಕಾರ ದರ ನಿಗದಿ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೆ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆಗಳ ಮಧ್ಯೆ ದರ ಸಂಘರ್ಷ’ ಉಂಟಾಗುವ ಲಕ್ಷಣಗಳು ಕಾಣುತ್ತಿವೆ. ಸರ್ಕಾರ ದರ ನಿಗದಿ ಮಾಡಿ ಹೊರಡಿಸಿರುವ ಆದೇಶವನ್ನು ರಾಜ್ಯದ ಕಬ್ಬು ಬೆಳೆಗಾರರು ಒಪ್ಪುತ್ತಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಆದೇಶದ ಹಿಂದೆ ಸಕ್ಕರೆ ಕಾರ್ಖಾನೆಗಳ ಲಾಬಿ ಇದೆ. …
Read More »ಹಬ್ಬದ ಸಂಭ್ರಮದಲ್ಲೇ ಬೆಳಗಾವಿಯಲ್ಲಿ ಡೆಂಘೀ ದಾಂಗುಡಿ.. ಜ್ವರದಿಂದ ತಪ್ಪಿಸಿಕೊಳ್ಳಲು ಹೀಗೆಲ್ಲ ಮಾಡಿ
ಬೆಳಗಾವಿ: ಕೋವಿಡ್ ಕಾರಣಕ್ಕೆ ಎರಡು ವರ್ಷಗಳ ಕಾಲ ಮಂಕಾಗಿದ್ದ ಹಬ್ಬಗಳನ್ನು ಈ ಸಲ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಎಂಬ ಖುಷಿಯಲ್ಲಿರುವಾಗಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಡೆಂಘೀ ದಾಂಗುಡಿ ಆತಂಕ ಸೃಷ್ಟಿಸಿದೆ. ಬೆಳಗಾವಿಯಲ್ಲಿ ಪ್ರಸಕ್ತ ಜನವರಿಯಿಂದ ಸೆಪ್ಟೆಂಬರ್‌ವರೆಗೆ 207 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 1,683ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿ ತಪಾಸಣೆ ನಡೆಸಲಾಗಿದೆ. ಡೆಂಘೀಯಿಂದಾಗಿ ನೆರೆ ರಾಜ್ಯದಲ್ಲಿ ಚಿಕಿತ್ಸೆಗೆ ಒಳಗಾಗಿ ಮೃತಪಟ್ಟವರ ಮಾಹಿತಿ ಇದೆ. ಈ ಮಧ್ಯೆ …
Read More »ಉಸಿರುಗಟ್ಟಿ ಜೋಡೆತ್ತು ಸಾವು: ಮುಗಿಲು ಮುಟ್ಟಿದ ಬಡ ರೈತ ಕುಟುಂಬಸ್ಥರ ಆಕ್ರಂದನ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲಪಟ್ಟಣದ ಪ್ರಭುನಗರ ನಾಲ್ಕನೇ ಅಡ್ಡ ರಸ್ತೆ ನಿವಾಸಿ, ರೈತ ಮಹಿಳೆ ಸಾಬವ್ವ ಹುಡೇದ ಕುಟುಂಬಸ್ಥರಿಗೆ ಸೇರಿದ ಜೋಡೆತ್ತುಗಳು ಉಸಿರುಗಟ್ಟಿ ಸಾವಿಗೀಡಾಗಿವೆ. ದನದ ಕೊಟ್ಟಿಗೆಯಲ್ಲಿ ಬೆಲಗ (ಕಂಬ) ಮುರಿದ ಪರಿಣಾಮ ಜೋಡೆತ್ತುಗಳ ಹಗ್ಗ ಒಂದಕ್ಕೊಂದು ಸಿಲುಕಿಕೊಂಡಿವೆ. ಪರಿಣಾಮ ಅವು ಉಸಿರುಗಟ್ಟಿ ಕೊನೆಯುಸಿರೆಳೆದಿವೆ. ಮಾಲೀಕರಿಗೆ ವಿಷಯ ತಿಳಿಯುವಷ್ಟರಲ್ಲಿ ಜೋಡೆತ್ತುಗಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸುಮಾರು ಆರು ಲಕ್ಷ ಮೌಲ್ಯದ …
Read More »ಬೆಳಗಾವಿ: ನಿಷೇಧಿತ ಪಿಎಫ್ಐ ಕಾರ್ಯಕರ್ತರಿಗೆ ಷರತ್ತುಬದ್ಧ ಜಾಮೀನು ಮಂಜೂರು
ಬೆಳಗಾವಿ: ಎಸ್‌ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಹಾಗೂ ನಿಷೇಧಿತ ಪಿಎಫ್ಐನ 6 ಮಂದಿ ಕಾರ್ಯಕರ್ತರಿಗೆ ಒಂದು ವಾರದ ಬಳಿಕ ಜಾಮೀನು ಸಿಕ್ಕಿದೆ.ಒಟ್ಟು 7 ಜನರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾಡಿ ಆದೇಶ ಹೊರಡಿಸಿದ್ದಾರೆ. ಎಸ್‌ಡಿಪಿಐ ಬೆಳಗಾವಿ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ನಿಷೇಧಿತ ಪಿಎಫ್ಐ ಕಾರ್ಯಕರ್ತರಾದ ಝಕೀವುಲ್ಲಾ ಫೈಜಿ, ಸಲಾವುದ್ದೀನ್ ಖಿಲೆವಾಲೆ, ಬದ್ರುದ್ದೀನ್ ಪಟೇಲ್, ಸಮೀವುಲ್ಲಾ ಪೀರ್ಜಾದೆ, ಜಹೀರ್ ಘೀವಾಲೆ ರೆಹಾನ್ …
Read More »ಹುಬ್ಬಳ್ಳಿಯಲ್ಲಿ ರಸ್ತೆ ಸಮಸ್ಯೆ ಕಂಡು ಧರೆಗಿಳಿದ ದೇವತೆ..!
ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ರಸ್ತೆಗಳ ಪರಿಸ್ಥಿತಿ ನೋಡಿದರೆ ಭಯ ಮೂಡುವಂತಿದೆ. ಇಲ್ಲಿನ ರಸ್ತೆಗಳ ದುಸ್ಥಿತಿ ಬಗ್ಗೆ ಬಾಲಕಿಯೊಬ್ಬಳು ವಿನೂತನ ರೀತಿಯಲ್ಲಿ ಸಮಾಜಕ್ಕೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾಳೆ. ಹುಬ್ಬಳ್ಳಿಯ ಹರ್ಷಿತಾ ಮೆಹರವಾಡೆ ಎಂಬ ಬಾಲಕಿ ರಾಜಧಾನಿ ಕಾಲೋನಿಯಲ್ಲಿರುವ ರಸ್ತೆ ಅವ್ಯವಸ್ಥೆ ಕುರಿತು ದೇವತೆ ವೇಷದಲ್ಲಿ ಸಾಕ್ಷ್ಯಚಿತ್ರದ ಮೂಲಕ ಜನಪ್ರತಿನಿಧಿಗಳ ಗಮನ ಸೆಳೆದಿದ್ದಾಳೆ. ದಸರಾ ಸಂದರ್ಭದಲ್ಲಿ ಹದಗೆಟ್ಟ ರಸ್ತೆಗಳ ಪರಿಸ್ಥಿತಿಯ ವಿಡಂಬನಾತ್ಮಕ ಪ್ರದರ್ಶನ ಮಾಡಲಾಗಿದೆ. ದುರ್ಗಾ ದೇವಿ ವೇಶ ಧರಿಸಿರುವ ಬಾಲಕಿ …
Read More »
Laxmi News 24×7