Breaking News

ಜಿಲ್ಲೆ

ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ

ಶಿಗ್ಗಾವಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಮೀಸಲಾತಿ ನೀಡದಂತೆ ಒತ್ತಡ ತರುತ್ತಿದ್ದಾರೆ’ ಎಂದು ಆರೋಪಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ರಾಜ್ಯದ ಪಂಚಮಸಾಲಿ ಸಮಾಜ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಬೇಕು’ ಎಂದು ಸೂಚನೆ ನೀಡಿದರು.   2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಶಿಗ್ಗಾವಿ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ …

Read More »

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …

Read More »

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ.   ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …

Read More »

ಡಿಸೆಂಬರ್ ಅಧಿವೇಶನದ ವೇಳೆ ಮಲ್ಟಿ ಸೂಪರ್ ಸ್ಪೇಷಾಲಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ

ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್ ಸ್ಪೇಷಾಲಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ …

Read More »

ಪಂಚಮಸಾಲಿ ಮೀಸಲಾತಿ ಬಗ್ಗೆ ಸದನದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ಯತ್ನಾಳ್​​

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದು ಕಾನೂನು ಬದ್ದವಾಗಿರಬೇಕು. ಹಾಗಾಗಿ ಯಾರಿಗೂ ಕೂಡ ಅನ್ಯಾಯವಾಗದಂತೆ ಕ್ರಮ …

Read More »

ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ

ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.   ಪೊಲೀಸ್‌ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …

Read More »

ರಾಮದುರ್ಗ: ಅನೈತಿಕ ಸಂಬಂಧ, ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ

ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಕೊಲೆಯಾದವರ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹೊಸೂರ ನಿವಾಸಿ ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಇವರ ಪತ್ನಿ ಲಕ್ಷ್ಮಿ ಜಟಕನ್ನವವರ (30) ಹಾಗೂ ಪ್ರಿಯಕರ ಎನ್ನಲಾದ ರಮೇಶ ಬಡಿಗೇರ (36) ಬಂಧಿತರು. ಅನೈತಿಕ ಸಂಬಂಧ ಕಾರಣ: ‘ಪಾಂಡಪ್ಪ ಹಾಗೂ ಲಕ್ಷ್ಮಿ ಕೆಲ ವರ್ಷಗಳಿಂದ ಹೊಸೂರ ಹೊರವಲಯದ ತಮ್ಮ ಜಮೀನಿನಲ್ಲಿ …

Read More »

ಬೈಲಹೊಂಗಲ: ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಬೈಲಹೊಂಗಲ: ಮಲಪ್ರಭಾ ಏತ ನೀರಾವರಿಗಾಗಿ ಭೂ ಸ್ವಾಧೀನಗೊಂಡ ಪ್ರದೇಶವನ್ನು 50 ವರ್ಷಗಳ ನಂತರ 2022 ರಲ್ಲಿ ದಾಖಲಿಸಿರುವ ತಹಶೀಲ್ದಾರ್ ಕ್ರಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತರು ಸೋಮವಾರ ಪ್ರತಿಭಟನೆ ನಡೆಸಿದರು.   ಹೊಸೂರು ಮಡಿವಾಳೇಶ್ವರ ಮಠದ ಗಂಗಾಧರ ಮಹಾಸ್ವಾಮೀಜಿ, ವೇದಮೂರ್ತಿ ಮಾಹಾಂತಯ್ಯ ಆರಾದ್ರಿಮಠ ಶಾಸ್ತ್ರಿಗಳು, ಪಟ್ಟಣದ ಬೆಳಗಾವಿ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಚನ್ನಮ್ಮ ವೃತ್ತದಿಂದ ಇಂಚಲ …

Read More »

ಚಿಕ್ಕೋಡಿ: ಅಕ್ರಮ ಮದ್ಯ ಮಾರಾಟ ಮಾಡಿದ ವ್ಯಕ್ತಿಗೆ 3 ವರ್ಷ ಕಠಿಣ ಶಿಕ್ಷೆ; 20 ಸಾವಿರ ದಂಡ

ಚಿಕ್ಕೋಡಿ: ಅಕ್ರಮ ಸಾರಾಯಿ ಮಾರಾಟ ಮಾಡಿದ ವ್ಯಕ್ತಿಗೆ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಆನಂದ ಮಹಾದೇವ ಗರಬುಡೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಕಳೆದ 24-09- 2015 ರಂದು ಜೈನಾಪೂರ ಕ್ರಾಸ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುವ ಕುರಿತು ಆರೋಪಿ ಮೇಲೆ ಅಬಕಾರಿ ಉಪ ನಿರೀಕ್ಷಕ ವಿ.ಎ.ಕಳ್ಳಿಕದ್ದಿ …

Read More »

ಖಿಲಾರದಡ್ಡಿಗೆ ಕೊನೆಗೂ ಬಂತು ಬಸ್‌!

ತೆಲಸಂಗ: ಸಮೀಪದ ಖಿಲಾರದಡ್ಡಿ ಗ್ರಾಮಕ್ಕೆ ಕೊನೆಗೂ ಸೋಮವಾರ ಬಸ್‌ ಬಂದಿದ್ದು, ಬಸ್ಸೇ ಕಾಣದ ಗ್ರಾಮಸ್ಥರಲ್ಲಿ ಸಂಭ್ರಮವೋ ಸಂಭ್ರಮ. ಸ್ವಾತಂತ್ರ್ಯ ದೊರೆತು 75 ವರ್ಷವಾದರೂ ಖಿಲಾರದಡ್ಡಿ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಇರಲಿಲ್ಲ. ಸದ್ಯ ಬಸ್‌ ಗ್ರಾಮದಲ್ಲಿ ಬರುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಚಾಲಕ, ನಿರ್ವಾಹಕ, ನಿಯಂತ್ರಣಾಧಿಕಾರಿಯನ್ನು ಸತ್ಕರಿಸಿ ಬಸ್‌ ಗೆ ಪೂಜೆ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.   280ಕ್ಕೂ ಹೆಚ್ಚು ಶಾಲಾ ಮಕ್ಕಳು ಬಂದು ಹೋಗುವುದು ಸೇರಿ 16 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ …

Read More »