ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …
Read More »ಈಗ ೨೦೨೩ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಮತ್ತೆ ಟಿಕೆಟ್‌ಗೆ ಫೈಟ್ ಶುರುವಾಗಿದೆ. ಇತ್ತೀಚೆಗೆ ಬೈಲಹೊಂಗಲಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಿಎಸ್‌ವೈ ಈ ವೇಳೆ ಜಾಣನಡೆ ಪ್ರದರ್ಶನ ಮಾಡಿದ್ದಾರೆ. ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದರು. ಬೈಲಹೊಂಗಲದ ಪೃಥ್ವಿ ಗಾರ್ಡನ್‌ನಲ್ಲಿ ಮೊನ್ನೆ ನಡೆದಿದ್ದ ಕಾರ್ಯಕ್ರಮ ಹಿನ್ನೆಲೆ ಬೈಲಹೊಂಗಲಕ್ಕೆ ಬರುತ್ತಿದ್ದಂತೆ ಬಿಎಸ್‌ವೈ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಮನೆಯಲ್ಲಿ ಉಪಹಾರ ಸೇವಿಸಿ ಕಾರ್ಯಕ್ರಮಕ್ಕೆ ತೆರಳಿದ್ದರು.
ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ಮಾಜಿ ಸಿಎಂ ಬಿಎಸ್‌ವೈ ಬೈಲಹೊಂಗಕ್ಕೆ ಆಗಮಿಸಿದ್ದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬೈಲಹೊಂಗಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಕಿಚ್ಚು ಇನ್ನೂ ಆರಿಲ್ಲ. ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಜಗದೀಶ್ ಮೆಟಗುಡ್ ಹಾಗೂ ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಡಾ. ವಿಶ್ವನಾಥ್ ಪಾಟೀಲ್ …
Read More »ಬೆಳಗಾವಿ| ವರ್ಷ ಮುಗಿದರೂ ಪಾಲಿಕೆಗೆ ಬಿಡದ ಗ್ರಹಣ: ಅಧಿಕಾರ ಸ್ವೀಕರಿಸದ ಚುನಾಯಿತರು
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಮುಗಿದು ವರ್ಷ ಕಳೆದರೂ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಕೂಡಿಬಂದಿಲ್ಲ. ಇದೇ ಮೊದಲಬಾರಿಗೆ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ನಡೆದಿದ್ದರಿಂದ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ, ವರ್ಷದ ಬಳಿಕವೂ ಅಧಿಕಾರ ಕೈಗೆ ಸಿಗದ ಕಾರಣ ಹೊಸ ಸದಸ್ಯರು ಇದ್ದೂ ಇಲ್ಲದಂತಾಗಿದೆ. ತಾವು ಪ್ರತಿನಿಧಿಸುವ ವಾರ್ಡ್‌ನ ಜನರು ಒಂದಿಲ್ಲೊಂದು ಸಮಸ್ಯೆ ಹೊತ್ತು ಮನೆಬಾಗಿಲಿಗೆ ಬರುತ್ತಲೇ ಇದ್ದಾರೆ. ಆದರೆ, ಅವುಗಳನ್ನು ಬಗೆಹರಿಸಲು …
Read More »ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ
ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು. ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ ಮಸೂದೆಯನ್ನು ಪರಿಷತ್ನಲ್ಲಿ ವಿರೋಧಿಸಿದ್ದರು. ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ …
Read More »ಕೆಎಸ್ಆರ್ಟಿಸಿ ಬಸ್, ಬೈಕ್ ಮಧ್ಯೆ ಭೀಕರ ಅಪಘಾತ; ಸವಾರರಿಬ್ಬರೂ ಸಾವು..
ಬಾಗಲಕೋಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರರಾದ ಶ್ರೀನಿವಾಸ ಹಂಸನೂರು (32), ಈಶ್ವರ ಮಾಚಕನೂರು (54) ಸಾವಿಗೀಡಾದವರು. ಬಾಗಲಕೋಟೆ ತಾಲೂಕಿನ ಸೀಗಿಕೇರಿ ಕ್ರಾಸ್ನಲ್ಲಿ ಈ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಮುದ್ದೇಬಿಹಾಳದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದು, ಬೈಕ್ ಸವಾರರು ಬಾಗಲಕೋಟೆಯಿಂದ ಸೀಗಿಕೇರಿ ಕಡೆಗೆ ಸಾಗುತ್ತಿದ್ದರು. ಅಪಘಾತದಲ್ಲಿ ಶ್ರೀನಿವಾಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ …
Read More »ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಅಪ್ರಾಪ್ತ …
Read More »ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ ಆರೋಗ್ಯ ವಿಚಾರಿಸಿದ್ದಾರೆ.
ಬೆಳಗಾವಿ: ಡೆಪ್ಯುಟಿ ಸ್ಪೀಕರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ(Anand Mamani) ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಚೆನ್ನೈನಿಂದ ಬೆಂಗಳೂರು ಮನಿಪಾಲ ಆಸ್ಪತ್ರೆಗೆ(Manipal Hospital) ಆನಂದ ಮಾಮನಿ ಅವರನ್ನು ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ಸ್ವಾಮೀಜಿ, ಶಾಸಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ …
Read More »ಬೆಳಗಾವಿಯಲ್ಲಿ ಮಹಿಳೆಯರಿಂದ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡಗೆ ತರಾಟೆ
ಬೆಳಗಾವಿ: ಕಳೆದ ನಾಲ್ಕು ದಶಕಗಳಿಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಮಾಡದ ಹಿನ್ನೆಲೆ ರಾಮದುರ್ಗ ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಹಿಳೆಯರ ತರಾಟೆ ತೆಗೆದುಕೊಂಡ ಹಿನ್ನೆಲೆ ಶಾಸಕರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ರಾಮದುರ್ಗ ತಾಲೂಕಿನಲ್ಲಿ ನಾಲ್ಕು ದಶಕ ಕಳೆದರೂ ರಸ್ತೆ ಅಭಿವೃದ್ಧಿಗೊಂಡಿಲ್ಲ. ಇದರಿಂದ ಕೊಚ್ಚಿಗೆದ್ದ ಮಹಿಳೆಯರು ಬಿಜೆಪಿ ಶಾಸಕ ಮಹಾದೇವಪ್ಪ ಯಾದವಾಡಗೆ ತರಾಟೆಗೆ ತೆಗೆದುಕೊಂಡರು. ಈ ಘಟನೆ ರಾಮದುರ್ಗ ತಾಲೂಕಿನ ಚಿಕೊಪ್ಪ ಕೆಎಸ್ ಗ್ರಾಮದಲ್ಲಿ ನಡೆದಿದೆ. …
Read More »ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್‌ವೈ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದೆ. ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ …
Read More »ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ
ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ …
Read More »
Laxmi News 24×7