ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಗಂಗವ್ವ ರಾಮಣ್ಣ ಮೂಲಿಮನಿ (55) ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ವಿವಿಧ ಕಡೆ ವರುಣನ ಆರ್ಭಟ ಜೋರಾಗಿಯೇ ಇದೆ. ಹೂಲಿಕಟ್ಟಿ ಗ್ರಾಮದಲ್ಲಿಯೂ ಸಹ ಮಳೆ ಸಾಕಷ್ಟು ಹಾನಿ ಮಾಡಿದೆ. ಇಂದು …
Read More »ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*
ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …
Read More »ಕೊಚ್ಚಿ ಹೋಗಿದ್ದ ಯುವಕನ ಶವ 3 ದಿನ ಆದ್ಮೇಲೆ ಪತ್ತೆ
ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ. ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ. ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ. ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ …
Read More »ಬೊಮ್ಮಾಯಿ ಧಮ್ ಎಂದರೆ ‘ಧಮ್ ಬಿರಿಯಾನಿ’ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, ಸೆ.11: ‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಛೇಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧಮ್ ಎಂದರೆ ಧಮ್ ಬಿರಿಯಾನಿ ಎಂದು ಬೊಮ್ಮಾಯಿ ತಿಳಿದುಕೊಂಡ ಹಾಗಿದೆ. ನಮಗೆ …
Read More »S.R..ಪಾಟೀಲ್ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಮುಖಂಡರು
ಬೆಂಗಳೂರು, ಸೆ. 10: ‘ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಸಕ್ರಿಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್.ಪಾಟೀಲ್ ಅವರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ. ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವೊಲಿಕೆ …
Read More »ಬೆಳಗಾವಿ | ಮಕ್ಕಳ ಕಳ್ಳರೆಂಬ ಸಂಶಯ: ಮೂವರು ವಶಕ್ಕೆ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್ ಬುಟ್ಟಿಗಳನ್ನು ಮಾರಲು ಆರು ಜನ ವಾಹನದಲ್ಲಿ ಬಂದಿದ್ದರು. ರಸ್ತೆ ಬದಿ ಸೈಕಲ್ ಓಡಿಸುತ್ತಿದ್ದ ಬಾಲಕನನ್ನು ವಾಹನದಲ್ಲಿ ಹತ್ತಿಸಿಕೊಳ್ಳಲು ಯತ್ನಿಸಿದರು. ಇದರಿಂದ ಕಿರುಚಿದ 12 ವರ್ಷದ ಬಾಲಕ ಮನೆಗೆ ಓಡಿದ. ಇದನ್ನು …
Read More »ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ
ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …
Read More »ಮತ್ತೆ ಅಧಿಕಾರದ ಕಹಳೆ ಮೊಳಗಿಸಿದ ಕಮಲ ಪಡೆ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸಾರಿದೆ. “ಜನಸ್ಪಂದನ’ದ ವೇದಿಕೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯ ಕಮಲ ಅರಳಿಸುವ ಸಂಕಲ್ಪವನ್ನು ಮಾಡಿದೆ. ಆ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂಬ ಸಂದೇಶವನ್ನೂ ಬಿಜೆಪಿ ನಾಯಕರು ನೀಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮ ದಿನಾಚರಣೆಯ …
Read More »ನಾಳೆಯಿಂದ ವಿಧಾನಮಂಡಲ ಅಧಿವೇಶನ;
ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್ ಕಮಿಷನ್, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ. ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್‌ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ …
Read More »
Laxmi News 24×7