Breaking News

ಜಿಲ್ಲೆ

ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಸಜ್ಜು

ಬೆಳಗಾವಿ: ಶತಮಾನದ ಇತಿಹಾಸ ಹೊಂದಿರುವ ಗಣೇಶೋತ್ಸವಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗಿದೆ. ವಿಘ್ನ ನಿವಾರಕನನ್ನು ಬುಧವಾರ ಜನರು ಅದ್ದೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. 1905ರಿಂದ ಇಲ್ಲಿ ಪ್ರತಿವರ್ಷ ಸಾರ್ವಜನಿಕ ಗಣೇಶನನ್ನು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದೆ. ಕಳೆದ ಎರಡು ವರ್ಷ ‘ಚೌತಿ’ ಮೇಲೆ ಕೋವಿಡ್‌-19 ಬರೆ ಎಳೆದಿತ್ತು. ಈ ಬಾರಿ ಕೊರೊನಾ ಉಪಟಳ ಇಲ್ಲದೇ ಹಬ್ಬದ ಸಂಭ್ರಮ ಇಮ್ಮಡಿಗೊಂಡಿದೆ. ಸರ್ವಭಾಷಿಕರು ಮತ್ತು ಸರ್ವಧರ್ಮೀಯರು ಸಡಗರದಿಂದ ಗಣೇಶ ಚತುರ್ಥಿ ಆಚರಣೆಗೆ ತಯಾರಿ ನಡೆಸಿದ್ದಾರೆ. 378 ಕಡೆ ಸಾರ್ವಜನಿಕ ಗಣೇಶ: …

Read More »

ಬೆಳಗಾವಿ ಗಣೇಶೋತ್ಸವ: ಮಹಾಪುರುಷರ ಪೋಸ್ಟರ್‌ಗೆ ಅನುಮತಿ ಕಡ್ಡಾಯ -ಅಲೋಕ್‌ಕುಮಾರ್‌

ಬೆಳಗಾವಿ: ‘ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ಯಾವುದೇ ಮಹಾಪುರುಷರು, ವ್ಯಕ್ತಿಗಳ ಪೋಸ್ಟರ್‌ ಹಾಕಲು ಆಯಾ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಎಡಿಜಿಪಿ ಅಲೋಕ್‌ಕುಮಾರ್‌ ತಿಳಿಸಿದರು. ಈ ಬಾರಿ ನಗರದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆದ ಹಿನ್ನೆಲೆಯಲ್ಲಿ, ಮಂಗಳವಾರ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅವರು, ಮಧ್ಯಮಗಳೊಂದಿಗೆ ಮಾತನಾಡಿದರು.   ‘ಮಂಟಪಗಳಲ್ಲಿ ವೀರ ಸಾವರ್ಕರ್‌ ಭಾವಚಿತ್ರ ಹಾಕುವಂತೆ ಕೆಲವರು ಅಭಿಯಾನ ನಡೆಸಿದ್ದಾರೆ. ಸಾವರ್ಕರ್‌, ನೆಹರೂ, ಬಾಲಗಂಗಾಧರ ತಿಲಕ್‌, ಭಗತ್‌ ಸಿಂಗ್‌ …

Read More »

ವಿಘ್ನನಾಶಕನ ಹಬ್ಬ ಆರೋಗ್ಯಪೂರ್ಣವಾಗಿರಲಿ:

ಕೊರೊನಾದಂಥ ಮಹಾವಿಘ್ನದಿಂದಾಗಿ ಎರಡು ವರ್ಷಗಳಲ್ಲಿ ಗಣಪನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶ ಆಗಲೇ ಇಲ್ಲ. ಈಗ ಸಾರ್ವಜನಿಕವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಲು ಕೊನೆಯ ಹಂತದ ಸಿದ್ಧತೆಗಳು ನಡೆದಿವೆ. ಈ ಸಂಭ್ರಮದ ಕ್ಷಣದಲ್ಲೇ ನಾವು ಮೈ ಮರೆಯುವ ಹಾಗಿಲ್ಲ. ಈ ವರ್ಷವೂ ನಾವೆಲ್ಲರೂ ಎಚ್ಚರಿಕೆಯಿಂದ ಹಬ್ಬವನ್ನು ಆಚರಿಸ ಬೇಕಾಗಿದೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೊರೊನಾ ಸೋಂಕಿನ ಹಾವಳಿ ನಿಧಾನವಾಗಿ ಇಳಿಕೆಯಾಗುತ್ತಿದೆ ಮತ್ತು ಸೋಂಕಿನ ಪ್ರಭಾವದಿಂದ ಉಂಟಾಗಿರುವ ಆರ್ಥಿಕ …

Read More »

ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ-ನಿರ್ಮಲಕುಮಾರ್ ಸುರಾನಾ ಕರೆ

ಬೆಳಗಾವಿ ನಗರದಲ್ಲಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಹೌದು ಇಂದು ಬೆಳಗಾವಿ ನಗರದ ಗೊಮಟೇಶ ಸಭಾಗೃಹದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ, ಬೆಳಗಾವಿ ಸಂಸದರಾದ ಮಂಗಳಾ ಸಂಗಡಿ, ಶಾಸಕರಾದ ಅಭಯ್ ಪಾಟೀಲ್, …

Read More »

ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧಿಸಿ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು

ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಜಮೀನಿನಲ್ಲಿ ಆರೋಪಿಯೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಜಮೀನಿನಲ್ಲಿ ಬೆಳೆದಿದ್ದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. …

Read More »

ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು

ರಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ? ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ. ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ …

Read More »

ಮುರುಘಾ ಶ್ರೀಗೆ ಮತ್ತೊಂದು ‘ಬಿಗ್‌ ಶಾಕ್‌’: ‘ಅಟ್ರಾಸಿಟಿ’ ಪ್ರಕರಣ ದಾಖಲು

ಚಿತ್ರದುರ್ಗ: ಮುರುಘಾ ಶ್ರೀಗೆ ಮತ್ತೊಂದು ತೊಂದರೆ ಎದುರಾಗಿದೆ. ಹೌದು, ಲೈಂಗಿಕ ಕಿರುಕುಳದ ಬಗ್ಗೆ ಆರೋಪ ಮಾಡಿರುವ ಒಬ್ಬರಲ್ಲಿ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಹಿನ್ನಲೆಯಲ್ಲಿ ಶ್ರೀಗಳ ವಿರುದ್ದ , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.   ಆಗಸ್ಟ್‌ 28ರ (ಭಾನುವಾರ)ದಂದು ಪ್ರಕರಣದ ವಿಚಾರಣೆ ವೇಳೆಯಲ್ಲಿ ಬಾಲಕಿಯ ಹೇಳಿಕೆ ಮೇರೆಗೆಶ್ರೀಗಳ ವಿರುದ್ದ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. …

Read More »

ಬೆಳಗಾವಿ ನಗರದ ಮಾರುಕಟ್ಟೆಯಲ್ಲಿ ಜನಸಾಗರ

ನಾಳೆ ಬೆಳಗಾದರೆ ಸಾಕು ಮನೆ ಮನಮನೆಗೆ ಗಣೇಶನ ಆಗಮನವಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜನತೆ ಗಣೇಶ ಹಬ್ಬದ ಆಚರಣೆಗೆ ಬೇಕಾದ ಎಲ್ಲಾ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಈ ವೇಳೆ ಬೆಳಗಾವಿ ನಗರದ ಮಾರುಕಟ್ಟೆಯಲ್ಲಿ ಜನಸಾಗರ ತುಂಬಿ ತುಳುಕುತ್ತಿತ್ತು ಹೌದು ನಾಳೆ ಬೆಳಗಾಗುವುದಷ್ಟೇ ತಡ, ಮನೆ ಮನೆಗೆ ಗಣೇಶನ ಆಗಮನವಾಗುತ್ತದೆ. ಇನ್ನು ಬೆಳಗಾವಿ ಎಂದರೆ ಕೇಳಬೇಕೆ, ನಗರದಲ್ಲಿ ಗಣೇಶೋತ್ಸವ ಆಚರಣೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಹಾಗಾಗಿ ಗಣೇಶೋತ್ಸವ ಆಚರಣೆಗೆ ಬೇಕಾದ …

Read More »

ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಜನಮನ ಸೆಳೆದ‌ ನಿಕಾಲಿ ಜಂಗಿ ಕುಸ್ತಿ

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು… ಕಳೆದ 2 ವರ್ಷಗಳಿಂದ ‌ಕೊರೊನಾದಿಂದಾಗಿ ಸರಳವಾಗಿ ನಡೆದಿದ್ದ ಇಂಗಳಿ ಗ್ರಾಮದ ಬಸವೇಶ್ವರ ಜಾತ್ರಾಮಹೋತ್ಸವ ಈ ಬಾರಿ ಅದ್ದೂರಿಯಾಗಿ ಜರುಗಿತು .ಇನ್ನೂ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಕರ್ನಾಟಕ, ಮಹಾರಾಷ್ಟ್ರದ, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ‌ಹೆಸರಾಂತ ಕುಸ್ತಿಪಟುಗಳು ಭಾಗಿಯಾಗಿದ್ದರು. ಈ ನಿಕಾಲಿ ಜಂಗಿ ಕುಸ್ತಿಗಳನ್ನು ನೋಡಲು ಶಾಸಕ ಗಣೇಶ ಹುಕ್ಕೇರಿ …

Read More »

ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಶ್ರೀಗಳಿಂದ ಅರ್ಜಿ ಸಲ್ಲಿಕೆ

ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಚುರುಕುಗೊಂಡಿದ್ದು, ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮುರುಘಾ ಮಠ ಹಾಗೂ ಶ್ರೀಗಳ ಪರ ವಕೀಲರು ಚಿತ್ರದುರ್ಗದ 2ನೇ ಸೆಷನ್ಸ್‌ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ. 1ಕ್ಕೆ ಮುಂದೂಡಿದೆ. ಈ ನಡುವೆ ಶ್ರೀಗಳ ವಿರುದ್ಧ ದೂರು ನೀಡಿದ್ದ ಬಾಲಕಿಯರನ್ನು ಮಠಕ್ಕೆ …

Read More »