Breaking News

ಜಿಲ್ಲೆ

ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಮುರುಘಾ ಶ್ರೀಗಳ ಪ್ರತಿಮೆ ಧ್ವಂಸ

ಚಿತ್ರದುರ್ಗದ ಮುರುಘಾ ಶರಣರ (Murugha Shri) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಹೆಚ್ಚಾಗಿದೆ. ಮುರುಘಾ ಶ್ರೀ ಬಂಧನ (Arrest) ಆಗದ ಹಿನ್ನಲೆ ಪ್ರತಿಭಟನೆಗಳು (Protest) ನಡೆಯುತ್ತಿದೆ. ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿ ಡಾ. ಶಿವಮೂರ್ತಿ ಶರಣರ ಪ್ರತಿಮೆ ಧ್ವಂಸ (Statue Collapse) ಮಾಡಲಾಗಿದೆ. ಮುರುಘಾ ಶರಣರ ಭಾವಚಿತ್ರಕ್ಕೆ ಬೆಂಕಿ (Fire) ಹಾಕಿ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಹಲವು ಸಂಘಟನೆಗಳು ಮುರುಘಾ ಶ್ರೀಗಳ ವಿರುದ್ಧ ಕಿಡಿಕಾರಿದೆ. ಇದರ ನಡುವೆ ಮುರುಘಾಶ್ರೀಗಳಿಗೆ …

Read More »

ಗಣೇಶ ಹಬ್ಬದ ಹಿನ್ನೆಲೆ KSRTC ಬಸ್‌ ಮೂರೇ ದಿನಕ್ಕೆ 22 ಸಾವಿರ ಸೀಟ್ ಬುಕ್ಕಿಂಗ್

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್‌ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್‌ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 22 ಸಾವಿರ …

Read More »

ರಸ್ತೆಅಗೆದು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನ ವಿರುದ್ಧ ಸಾರ್ವಜನಿಕರ ಆಕ್ರೋಶ

ಚಿಕ್ಕೋಡಿ: ತನ್ನ ಜಮೀನಿನಲ್ಲಿ ಕಾಲುವೆ ನೀರು ಬರುತ್ತಿದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ಅಗೆದು ಎರಡು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನೋರ್ವನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಶಿ – ಯಬರಟ್ಟಿ ರಸ್ತೆಯ ಪಕ್ಕದ ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಎನ್ನುವ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಣ್ಣ ತೇಲಿ ಎಂಬಾತ ಸರ್ಕಾರದ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಸ್ತೆಯನ್ನೆ …

Read More »

ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್​ಕುಮಾರ್ (Puneeth …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.   …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.  

Read More »

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ 17ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯ ಹಿರಿಯ ಕಲಾವಿದ ನಾಗಲಿಂಗಪ್ಪ ಗಂಗಪ್ಪ ಗಂಗೂರ (ಸಂಪ್ರದಾಯ ಶಿಲ್ಪ), ಉಡುಪಿಯ ರತ್ನಾಕರ ಎಸ್‌. ಗುಡಿಗಾರ್‌ (ಸಂಪ್ರದಾಯ ಶಿಲ್ಪ), ಬಳ್ಳಾರಿಯ ಪಿ. ಮುನಿರತ್ನಾಚಾರಿ (ಸಂಪ್ರದಾಯ ಶಿಲ್ಪ), ಕಲಬುರಗಿಯ ಮಾನಯ್ಯ ನಾ. ಬಡಿಗೇರ (ಎರಕ ಶಿಲ್ಪ) ಹಾಗೂ ಬೆಂಗಳೂರಿನ ಬಿ.ಸಿ. ಶಿವಕುಮಾರ್‌ (ಸಮಕಾಲೀನ ಶಿಲ್ಪ) ಅವರು …

Read More »

ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ: ಈರಣ್ಣ ಕಡಾಡಿ

ಬೆಳಗಾವಿಯಲ್ಲಿ ಚಿರತೆ ಪತ್ತೆಗೆ 25ನೇ ದಿನದ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಗಾಲ್ಫ್ ಕ್ಲಬ್‍ಗೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಅರಣ್ಯಾಧಿಕಾರಿಗಳ ಜತೆಗೆ ಚಿರತೆ ಕಾರ್ಯಾಚರಣೆ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಚರ್ಚೆ ನಡೆಸಿದರು. ಕಾರ್ಯಾಚರಣೆ ಬಗ್ಗೆ ಸಂಪೂರ್ಣ ವಿವರವನ್ನು ಪಡೆದ ಬಳಿಕ ಗಾಲ್ಫ್ ಕ್ಲಬ್‍ನಲ್ಲಿ ರೌಂಡ್ಸ್ ಹೊಡೆದ ಈರಣ್ಣ ಕಡಾಡಿ ಬೋನ್, ಕ್ಯಾಮರಾ ಇಟ್ಟ ಸ್ಥಳಗಳನ್ನು ಪರಿಶೀಲನೆ ನಡೆಸಿದರು.ನಂತರ ಮಾಧ್ಯಮಗಳ ಜೊತೆಗೆ …

Read More »

ಬೆಳಗಾವಿ ನಗರದಲ್ಲಿ ಅದ್ಧೂರಿ ಸಂಗೊಳ್ಳಿ ರಾಯಣ್ಣಾ ಶೋಭಾಯಾತ್ರೆ

ಬೆಳಗಾವಿ ನಗರದಲ್ಲಿ ಕರುನಾಡ ವಿಜಸೇನೆ ಜಿಲ್ಲಾ ಘಟಕ ಬೆಳಗಾವಿ ಜಿಲ್ಲೆ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಕರುನಾಡ ವಿಜಯಸೇನೆ ಜಿಲ್ಲಾ ಘಟಕ ಬೆಳಗಾವಿ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ರಾಯಣ್ಣ ಉತ್ಸವ ಪ್ರಯುಕ್ತ ಬೃಹತ್ ಶೋಭಾಯಾತ್ರೆಯನ್ನೂ ಕೂಡ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್‍ನಲ್ಲಿ ಬೃಹತ್ ರಾಯಣ್ಣನ ಮೂರ್ತಿಯನ್ನು …

Read More »

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಕೊಲೆ

ಬಾಗಲಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಹೊರವಲಯದಲ್ಲಿ‌ ನಡೆದಿದೆ. ಸಂಗೀತಾ ಹರಿಜನ (36) ಕೊಲೆಯಾದವರು. ಕಳೆದ ರಾತ್ರಿ 9 ಗಂಟೆಗೆ ಬಹಿರ್ದೆಸೆಗೆ ಹೋಗಿದ್ದಾಗ ಘಟನೆ ನಡೆದಿದೆ. ತಲೆ ಮತ್ತು ಕುತ್ತಿಗೆಗೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್​ಪಿ …

Read More »