Breaking News

ಜಿಲ್ಲೆ

ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ.

ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.   ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …

Read More »

ಮಳೆಗೆ ಮನೆ ಗೋಡೆ‌ ಕುಸಿತ: ತಾಯಿ ಸಾವು, ಮಗ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿತ ಉಂಟಾಗಿ ಮನೆಯಲ್ಲಿದ್ದ ತಾಯಿ ಸಾವನ್ನಪ್ಪಿ, ಮಗ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕಿನ‌ ಕಾವಗೊಂಡನಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸುಜಾತ(60) ಮೃತಪಟ್ಟಿದ್ದು, ಇವರ ಮಗ ಕೃಷ್ಣಮೂರ್ತಿ(40) ಅವರ ಕಾಲಿಗೆ ಗಾಯವಾಗಿದ್ದು,ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ 9:30 ರ ಹೊತ್ತಿಗೆ ಟಿವಿ ನೋಡುತ್ತಿರುವಾಗ ಏಕಾಏಕಿ ಮನೆಯ ಗೋಡೆ ಕುಸಿತವಾಗಿ ಇವರ ಮೇಲೆ ಬಿದ್ದಿದೆ. ಸ್ಥಳಕ್ಕೆ ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ …

Read More »

ರಮೇಶ್ ಕುಮಾರ್ ನಾಲಿಗೆ -ಮಿದುಳಿನ ಸಂಪರ್ಕ ಕಳೆದುಕೊಂಡಿದ್ದಾರೆ: ಕುಮಾರಸ್ವಾಮಿ ಗರಂ

ಬೆಂಗಳೂರು: ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬಂಗಾರಪೇಟೆ ತಾಲ್ಲೂಕಿನ ಯರಗೋಳ್‌ ಜಲಾಶಯ ಉದ್ಘಾಟನೆ ವಿಳಂಬ ಕುರಿತು ಮಾತನಾಡಿದ್ದ ಕೆ.ಆರ್‌. ರಮೇಶ್‌ ಕುಮಾರ್‌, ‘ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗುವುದು ವಿಳಂಬವಾಗುತ್ತದೆ’ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ರಮೇಶ್‌ ಕುಮಾರ್‌ ಹೇಳಿಕೆಗೆ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ …

Read More »

ಬೆಳಗಾವಿಯಲ್ಲಿ ಮಳೆ ಅಬ್ಬರಕ್ಕೆ ಮನೆ ಕುಸಿತ; ಮಹಿಳೆಗೆ ಗಂಭೀರ ಗಾಯ, ನಾಲ್ಕು ವಾಹನಗಳು ಜಖಂ

ಬೆಳಗಾವಿ: ಜಿಲ್ಲೆಯಾದ್ಯಂತ ಸುರಿಯುತ್ತಿವ ಭಾರಿ ಮಳೆಯಿಂದಾಗಿ ಮನೆಯೊಂದು ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ತಾಲೂಕಿನ ವಡಗಾಂವಿ ಪ್ರದೇಶದಲ್ಲಿ ನಡೆದಿದೆ. ವಡಗಾವಿಯ ಭಾರತ ನಗರದ ಎಡರನೇ ಕ್ರಾಸ್​ನಲ್ಲಿ ಆನಂದ ಕಲ್ಲಪ್ಪ ಬಿರ್ಜೆ ಎಂಬುವವರಿಗೆ ಸೇರಿದ ಮನೆ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ನೆಲಸಮವಾಗಿದೆ. ಮನೆಯಲ್ಲಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಭಾನುವಾರ ಸಂಜೆಯಷ್ಟೇ ಮನೆಯಲ್ಲಿದ್ದ ಏಳು ಜನ ಕುಟುಂಬ ಸದಸ್ಯರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿತ್ತು. ಮನೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ …

Read More »

ಬೆಳಗಾವಿ ಸ್ಮಾರ್ಟಸಿಟಿ ಪಟ್ಟಿಗೆ ಸೇರಿದ ನಂತರ ಇದರ ಚಿತ್ರಣವೇ ಬದಲ: ಆಕ್ರೋಶಗೊಂಡ ಜನ

ಬೆಳಗಾವಿ ಸ್ಮಾರ್ಟಸಿಟಿ ಪಟ್ಟಿಗೆ ಸೇರಿದ ನಂತರ ಇದರ ಚಿತ್ರಣವೇ ಬದಲಾಗುತ್ತದೆ ಎಂದು ಜನ ಬಯಸಿದ್ದರು. ಆದರೆ ಜನರ ಬಯಕೆ ಹುಸಿಯಾಗಿದೆ. ಕುಂದಾನಗರಿಯ ಹಳೆ ಗಾಂಧಿ ನಗರ ಲಕ್ಷ್ಮೀ ಗಲ್ಲಿ ಅವ್ಯವಸ್ಥೆಯ ಆಗರವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿ ನಿಂತಿರುವ ದೊಡ್ಡ ಪ್ರಮಾಣದ ನೀರು..ಕಟ್ ಆಗಿ ಜೋತಾಡುತ್ತಿರುವ ವಿದ್ಯುತ್ ತಂತಿ…ರಸ್ತೆ ಪಕ್ಕ ಪಾರ್ಕಿಂಗ್ ಮಾಡಿರುವ ಲಾರಿ..ನೀರಿನಲ್ಲಿಯೇ ನಿಂತು ಪ್ರತಿಭಟನೆ ಮಾಡುತ್ತಿರುವ ನಿವಾಸಿಗಳು..ಹೌದು ನೀವು …

Read More »

ಬಹಮನಿಯರ ಕೋಟೆ ಮೇಲೆ ಹಾರಾಡಲಿದೆ ರಾಷ್ಟ್ರಧ್ವಜ

ಬೀದರ್‌: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದಲ್ಲಿರುವ ಬಹಮನಿ ಸುಲ್ತಾನರ ಕಾಲದ ಕೋಟೆ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಬೆಳಕಿನಲ್ಲಿ ಮೈದೆಳೆದ ಕೋಟೆ ವೀಕ್ಷಣೆಗೆ ಅನುಕೂಲವಾಗುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸ್ಮಾರಕಗಳ ವೀಕ್ಷಣೆ ಸಮಯವನ್ನು ರಾತ್ರಿ 9 ಗಂಟೆಯವರೆಗೂ ವಿಸ್ತರಿಸಿದೆ. ಅಷ್ಟೇ ಅಲ್ಲ; ಐತಿಹಾಸಿಕ ಕೋಟೆ ಆವರಣದಲ್ಲಿ ರಾಷ್ಟ್ರ್ರ ಧ್ವಜ ಹಾರಿಸಲು ಸಿದ್ಧತೆ ನಡೆಸಿದೆ. ಕೋಟೆಯೊಳಗಿನ ಗುಂಬಜ್‌ ದರ್ವಾಜಾ, ತರ್ಕಿಶ್‌ ಮಹಲ್‌ ಹಾಗೂ ಸೋಲಾ ಕಂಬಾ ಮಸೀದಿ …

Read More »

ಸಾಹುಕಾರ ರಮೇಶ್‌ ಜಾರಕಿಹೊಳಿ ರಾಜಕೀಯ ನಡೆ ನಿಗೂಢ:

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಇನ್ನೂ ಜೀವಂತವಾಗಿದ್ದು, ಪಕ್ಷದ ತೀರ್ಮಾವನ್ನು ನೋಡಿಕೊಂಡು ಕೆಲವು ನಾಯಕರು ತಮ್ಮ ರಾಜಕೀಯ ಭವಿಷ್ಯದ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನವಾಗಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋಕಾಕ್‌ ಶಾಸಕ ಹಾಗೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ರಾಜಕೀಯ ನಡೆ ನಿಗೂಢವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕಾಗಿ …

Read More »

ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ: ಜಿಲ್ಲಾಧಿಕಾರಿ

ಬೆಳಗಾವಿ – ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಖಾನಾಪುರ ತಾಲೂಕಿನ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಡಿಡಿಪಿಐ ಬಸವರಾಜ ನಾಲತವಾಡ ಪ್ರಗತಿವಾಹಿನಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ತಾಲೂಕಿನ 22 ಶಾಲೆಗಳಿಗೆ ಈಗಾಗಲೆ ರಜೆ ಘೋಷಿಸಲಾಗಿತ್ತು. ಈಗ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಕಳೆದ ರಾತ್ರಿಯಿಂದ …

Read More »

ಬಬಲೇಶ್ವರ ಪಾಕಿಸ್ತಾನದಲ್ಲಿ ಇದೆಯಾ: ಸವದಿ ಪ್ರಶ್ನೆ

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರವೇನು ಪಾಕಿಸ್ತಾನದಲ್ಲಿ ಇದೆಯಾ? ಅದು ಕರ್ನಾಟಕ ರಾಜ್ಯದಲ್ಲಿ ಇದೆ ತಾನೇ? ಹೀಗೆಂದು ಪ್ರಶ್ನಿಸಿದವರು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ. ನಾಗಠಾಣದಲ್ಲಿ ಭಾನುವಾರ ನಡೆದ ನೂತನ ಬಸ್‌ ನಿಲ್ದಾಣ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಬಲೇಶ್ವರ ಕ್ಷೇತ್ರದಿಂದ ನೀವು ಸ್ಪರ್ಧಿಸುತ್ತೀರಿ ಎಂಬ ಮಾತು ಕೇಳಿಬರುತ್ತಿದೆ ನಿಜಾನಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು.   ‘ನಾನು ಸದ್ಯ ವಿಧಾನ …

Read More »

ಎಲ ಹಳ್ಳಿಗಳಲ್ಲೂ ಜೆಜೆಎಂ ಕಾಮಗಾರಿ ಪ್ರಗತಿ: ಯಾದವಾಡ

ರಾಮದುರ್ಗ: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿವ ನೀರು ಕಲ್ಪಿಸಬೇಕೆಂಬ ಉದ್ದೇಶದೊಂದಿಗೆ ಮೊದಲ ಆದ್ಯತೆ ನೀಡಿ ಕೋಟ್ಯಾಂತರ ಅನುದಾನ ನೀಡಿದ್ದು, ತಾಲೂಕಿನಲ್ಲಿ ಎಲ್ಲ ಹಳ್ಳಿಗಳಲ್ಲಿಯೂ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.   ಹೊಸಕೇರಿ ಗ್ರಾಮದಲ್ಲಿ ಗ್ರಾಮೀಣ ಕುಡಿವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಜಲಜೀವನ್‌ ಮಿಷನ್‌ (ಜೆಜೆಎಂ) ಯೋಜನೆ 99.47 ಲಕ್ಷ ರೂ. ಅನುದಾನದಲ್ಲಿ ಮನೆ- ಮನೆಗೆ ನಲ್ಲಿ ಜೋಡಣೆ ಕಾಮಗಾರಿಗೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿಯ 10 …

Read More »