Breaking News

ಜಿಲ್ಲೆ

ಮತದಾರ ಪಟ್ಟಿಗೆ ಆಧಾರ್‌ ಜೋಡಣೆಗೆ ಚಾಲನೆ

ಬೆಳಗಾವಿ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2023ರ ಮಾರ್ಚ್‌ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100 ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು.   ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »

ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.   ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …

Read More »

ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ …

Read More »

ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ

ಪೊಲೀಸರ ಸೋಗಿನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದಚಿನ್ನದ ಸರ ಎಗರಿಸಿದ ಮತ್ತು ವಿವಿಧಜ್ವೇಲರಿ ಶಾಪ್‍ಗಳಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ವಂಚಸಿದ 2 ನಯವಂಚಕ ಆರೋಪಿಗಳನ್ನು 22 ಲಕ್ಷರೂಪಾಯಿ ಮೌಲ್ಯದಚಿನ್ನದೊಂದಿಗೆ ಬಂಧಿಸಲಾಗಿದೆ. ಸುದ್ಧಿಗೋಷ್ಟಿಯಲ್ಲಿ ಬೆಳಗಾವಿ ಎಸ್‍ಪಿ ಸಂಜೀವಕುಮಾರ ಈ ಕುರಿತು ಮಾಹಿತಿ ನೀಡಿದ್ದಾರೆ.ಕಳೆದ ತಿಂಗಳು ಹುಕ್ಕೇರಿ ಪಟ್ಟಣದಕೋರ್ಟ್ ಸರ್ಕಲ್ ಬಳಿ ಒಬ್ಬ ಮಹಿಳೆಗೆ ಪೊಲೀಸರೆಂದು ಪುಸಲಾಯಿಸಿ ಆಕೆಯ ಬಳಿಯಿಂದ ಚಿನ್ನದ ಮಂಗಳಸೂತ್ರವನ್ನು ಎಗರಿಸಲಾಗಿತ್ತು. ಅಲ್ಲದೇ ಬೆಳಗಾವಿ ನಗರದಲ್ಲಿ ವಿವಿಧಜ್ವೇಲರಿ ಶಾಪ್‍ಗಳಿಗೆ ಗ್ರಾಹಕರ ಸೋಗಿನಲ್ಲಿ …

Read More »

ಹಿರಿಯರ ಸಮ್ಮುಖದಲ್ಲಿಯೇ ಗಂಡ ಹೆಂಡತಿಯನ್ನು ಮಾರಣಾಂತಿಕವಾಗಿ ಥಳಿತ

ಆಸ್ತಿ ವಿಚಾರವಾಗಿ ಮಾತನಾಡುವುದಿದೆ ಬಾ ಎಂದು ಕರೆದು ಹಿರಿಯರ ಸಮ್ಮುಖದಲ್ಲಿಯೇ ಗಂಡ ಹೆಂಡತಿಯನ್ನು ಮಾರಣಾಂತಿಕವಾಗಿ ಥಳಿಸಿದ ಘಟನೆ ಬೆಳಗಾವಿಯ ಅಂಕಲಗಿ ಮದುವಾಲ್‍ನಲ್ಲಿ ನಡೆದಿದೆ. ಅಂಕಲಿಗಿಯ ಮದುವಾಲ್ ಗ್ರಾಮದಲ್ಲಿ ಜಮೀನು ಹಂಚಿಕೆ ವಿಚಾರವಾಗಿ ಎರಡು ಕುಟುಂಬಗಳಲ್ಲಿ ವಿವಾದ ಉಂಟಾಗಿದೆ. ಈ ವೇಳೆ ಹಿರಿಯರು ಕೂಡಿದ್ದಾರೆ ಬಾ ಎಂದು ಕರೆದು ಸವಿತಾ ಹಾಗೂ ಬಸಣ್ಣಿ ಸುತಗಟ್ಟಿ ಎಂಬ ದಂಪತಿಗಳನ್ನು ಹಿರಿಯರ ಸಮ್ಮುಖದಲ್ಲಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಾಳು ಸವಿತಾರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ …

Read More »

ಕುಂದಾನಗರಿಯಲ್ಲಿ ಮಳೆಯ ಆರ್ಭಟ

ಕುಂದಾನಗರಿ ಬೆಳಗಾವಿಯಲ್ಲಿ ಇಂದು ಸಾಯಂಕಾಲ ಮಳೆಯ ಆರ್ಭಟ ಜೋರಾಗಿದ್ದು. ಸತತ ಎರಡು ಘಂಟೆಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಹೈರಾಣಾದರು. ಬೆಳಗಾವಿ ನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ತೆಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಏಕಾಏಕಿ ಮಳೆಯ ಆರ್ಭಟಕ್ಕೆ ಕುಂದಾನಗರಿ ಜನತೆ ಬೆಚ್ಚಿ ಬಿದ್ದರು. ಸತತ ಎರಡು ಗಂಟೆಗಳಿಂದ ನಿರಂತರ ಮಳೆ ಆದರಿಂದ ಕುಂದಾನಗರಿಯಲ್ಲಿ ಜನಜೀವನ ಅಸ್ತವ್ಯಸ್ತವಾಯ್ತು. ಇನ್ನು ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಖಡೇಬಜಾರ್‍ಗೆ ಹೋಗುವ ರಸ್ತೆ ಮೇಲೆ …

Read More »

ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.   ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಜಾರಿಗೆ …

Read More »

ಸಿದ್ದರಾಮಯ್ಯ ಜನ್ಮದಿನಕ್ಕೆ ಹೊರಟಿದ್ದ ವಾಹನ ಅಪಘಾತ: ಒಬ್ಬ ಸಾವು

ಬಾಗಲಕೋಟೆ : ಜಿಲ್ಲೆಯ ಹೂಲಗೇರಿ ಕ್ರಾಸ್ ಬಳಿ ಸಿದ್ದರಾಮಯ್ಯ ಅವರ‌ ಜನ್ಮ ದಿನಕ್ಕೆ ಹೊರಟಿದ್ದ ಕ್ರೂಷರ್, ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಮೃತರಾಗಿದ್ದಾರೆ. ಜಿಲ್ಲೆಯ ಮುಧೋಳ ತಾಲ್ಲೂಕಿನ ಹಿರೇಆಲಗುಂಡಿ ಬಿ.ಕೆ. ಹಾಗೂ ಚಿಕ್ಕ ಆಲಗುಂಡಿ ಗ್ರಾಮದವರು. ಮಂಗಳವಾರ ಸಂಜೆ ವಾಹನ ಗ್ರಾಮದಿಂದ ಹೊರಟಿತ್ತು. ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ ಎಂಬುವವರು‌ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಐವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾ …

Read More »

ಅಲೋಕ್​ ಕುಮಾರ್​ ಎಚ್ಚರಿಕೆಗೆ ಹೆದರಿ ಕೋರ್ಟ್​ಗೆ ಶರಣಾದ ಭೀಮಾತೀರದ ಕುಖ್ಯಾತ ಹಂತಕನ ಪತ್ನಿ

ವಿಜಯಪುರ: ಎಡಿಜಿಪಿ ಅಲೋಕ್​ ಕುಮಾರ್​ ಖಡಕ್​ ಎಚ್ಚರಿಕೆಗೆ ಹೆದರಿದ ಭೀಮಾತೀರದ ಕುಖ್ಯಾತ ಹಂತಕ ಮಲ್ಲಿಕಾರ್ಜುನ್ ಚಡಚಣನ ಪತ್ನಿ ವಿಮಲಾಬಾಯಿ ಚಡಚಣ ನ್ಯಾಯಾಲಯಕ್ಕೆ ಆಗಮಿಸಿ ಬಂದು ಶರಣಾಗಿದ್ದಾಳೆ. ವಿಜಯಪುರ 4ನೇ JMFC ನ್ಯಾಯಾಲಯಕ್ಕೆ ಆಗಮಿಸಿ ವಿಮಲಾಬಾಯಿ ಶರಣಾಗಿದ್ದಾಳೆ. 2020ರ ನವೆಂಬರ್ 2 ರಂದು ಮಹಾದೇವ ಸಾಹುಕಾರ ಬೈರಗೊಂಡ ಮೇಲೆ ನಡೆದ ದಾಳಿಯ ಬಳಿಕ ವಿಮಲಾಬಾಯಿ ಭೂಗತಳಾಗಿದ್ದಳು. ಕೆಲ ದಿನಗಳ ಹಿಂದಷ್ಟೇ ಅಲೋಕ್​ ಕುಮಾರ್​ ಅವರು ಭೂಗತರಾದ ಚಡಚಣ ಗ್ಯಾಂಗ್‌ ಸದಸ್ಯರಿಗೆ ಎಚ್ಚರಿಕೆ ನೀಡಿದ್ದರು. …

Read More »

ಕಳೆದ 8 ವರ್ಷಗಳಿಂದ ಬಸವ ಪಂಚಮಿ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಮೌಢ್ಯ, ಮೂಢನಂಬಿಕೆ ಇರುವುದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗಿಲ್ಲ.

ನಾಗರ ಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ಆಚರಿಸುವ ಮೂಲಕ ಘಟಪ್ರಭಾದ ಮಾನವ ಬಂಧುತ್ವ ವೇದಿಕೆ ವತಿಯಿಂದ ಘಟಪ್ರಭಾದ ಕೆಎಚ್‍ಐ ಆಸ್ಪತ್ರೆಯ ರೋಗಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೌದು ಇಂದು ಮಂಗಳವಾರ ಘಟಪ್ರಭಾದಲ್ಲಿ ನಾಗಪಂಚಮಿಗೆ ಪರ್ಯಾಯವಾಗಿ ಬಸವ ಪಂಚಮಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಘಟಪ್ರಭಾ ಕೆಎಚ್‍ಐ ಆಸ್ಪತ್ರೆಯ ರೋಗಿಗಳಿಗೆ ಹಾಲಿನ ಪಾಕೇಟ್‍ಗಳನ್ನು ವಿತರಿಸಲಾಯಿತು. …

Read More »