Breaking News

ಜಿಲ್ಲೆ

ಸಿದ್ದರಾಮಯ್ಯ ಜನ್ಮ ದಿನ: 325 ಬಸ್‌ ಬುಕಿಂಗ್‌, ಸಾರಿಗೆ ಸಂಸ್ಥೆಗೆ ₹39 ಲಕ್ಷ ಆದಾಯ

ಬಾಗಲಕೋಟೆ: ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನ ಕಾರ್ಯಕ್ರಮಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 325 ಹೆಚ್ಚು ಬಸ್‌ಗಳನ್ನು ಬುಕಿಂಗ್‌ ಮಾಡಲಾಗಿದೆ. ಇನ್ನು ನೂರಾರು ಬಸ್‌ಗಳು ಬುಕಿಂಗ್‌ ಆಗುವ ನಿರೀಕ್ಷೆ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 50 ಬಸ್‌ಗಳು ಬುಕಿಂಗ್‌ ಆಗಿವೆ. ಹಾವೇರಿಯಲ್ಲಿ 90, ಗದುಗಿನಲ್ಲಿ 85 ಹಾಗೂ ಧಾರವಾಡ ಜಿಲ್ಲೆಯಲ್ಲಿ 90 ಬಸ್‌ಗಳು ಬುಕಿಂಗ್‌ ಆಗಿವೆ. ಇದರಿಂದ …

Read More »

ಮತದಾರರ ಪಟ್ಟಿಗೆ ಆಧಾರ ಜೋಡಣೆ: ರಾಜಕೀಯ ಮುಖಂಡರ ಸಭೆ

ರಬಕವಿ-ಬನಹಟ್ಟಿ: ಮತದಾರರ ಪಟ್ಟಿಗೆ ಆಧಾರ ಜೋಡಣೆಯ ಕಾರ್ಯಕ್ರಮ ಅಗಸ್ಟ್ 1 ರಿಂದ ನಡೆಯಲಿದ್ದು, ಈ ನಿಟ್ಟಿನಲ್ಲಿ ಮತದಾರರು ತಾವೇ ಖುದ್ದಾಗಿ ಮೊಬೈಲ್ ಆಯಪ್ ಮೂಲಕ ಮಾಡಿಕೊಳ್ಳಬಹುದು ಇಲ್ಲವೆ ತಮ್ಮ ಮನೆಗಳಿಗೆ ಬರುವ ಬಿಎಲ್‌ಓಗಳಿಗೆ ಸೂಕ್ತ ಮಾಹಿತಿ ನೀಡುವುದರ ಮೂಲಕ ಮತದಾರರ ಪಟ್ಟಿಗೆ ಆಧಾರ ಜೋಡಣಿಗೆ ಸಹಕರಿಸಬೇಕು ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಎಸ್.ಬಿ.ಇಂಗಳೆ ತಿಳಿಸಿದರು.   ಅವರು ಶುಕ್ರವಾರ ಸ್ಥಳೀಯ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ರಾಜಕೀಯ ಮುಖಂಡರ ಸಭೆಯಲ್ಲಿ ಮಾತನಾಡಿದರು. ಕ್ಷೇತ್ರದಲ್ಲಿ …

Read More »

ನಿಯೋಜನೆಯಲ್ಲಿ ಬಿಮ್ಸ್‌ ವಿವಾದಕ್ಕೆ ಗುರಿ

ಬೆಳಗಾವಿ: ಸುಧಾರಣೆಯ ವಿಷಯದಲ್ಲಿ ದೇಶದಲ್ಲಿ 12ನೇ ಸ್ಥಾನಗಳಿಸಿ ಹೆಮ್ಮೆಯ ಸಾಧನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌) ಈಗ ವೈದ್ಯರ ನಿಯೋಜನೆ ವಿಷಯದಲ್ಲಿ ವಿವಾದಕ್ಕೆ ಗುರಿಯಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿರುವ ತಜ್ಞ ವೈದ್ಯರನ್ನು ಜಿಲ್ಲಾಸ್ಪತ್ರೆಗೆ ನಿಯೋಜನೆ ಮಾಡುತ್ತಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದರೆ, ಆರೋಗ್ಯ ಇಲಾಖೆಯ ಈ ಕ್ರಮ ಸ್ಥಳೀಯ ಶಾಸಕರ ಕಂಗೆಣ್ಣಿಗೆ ಗುರಿಯಾಗಿದೆ. ಇದಕ್ಕೆ ಈಗ ಖಾನಾಪುರ ತಾಲೂಕು ಆಸ್ಪತ್ರೆ ಹೊಸ ಸೇರ್ಪಡೆಯಾಗಿದೆ. …

Read More »

ಬೆಳಗಾವಿ ಜಿಲ್ಲೆ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ

ಚಿಕ್ಕೋಡಿ: ಕರ್ನಾಟಕ, ಮಹಾರಾಷ್ಟ್ರ ಗಡಿ ಭಾಗದ ಸರ್ಕಾರಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಸೇರಿ 6 ರಾಜ್ಯಗಳ 13 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಭಾನುವಾರ ಪರಿಶೀಲನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಕುಡನೂರು ಗ್ರಾಮದ ಮರಾಠಿ ಶಾಲೆಯಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಮಕ್ಕಳು ಬಾಂಬ್ ಎಂದು ತಿಳಿಯದೇ ಗ್ರೆನೇಡ್‍ನೊಂದಿಗೆ …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

  ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ …

Read More »

ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ: H.D.K.

ಬೀದರ್: ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರಾಜ್ಯದಲ್ಲಿ ಡಿಸೆಂಬರ್‌ನಲ್ಲೇ ವಿಧಾನಸಭೆ ಚುನಾವಣೆ ನಡೆಯುವ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಮೊದಲ ಹಂತದಲ್ಲಿ ಜೆಡಿಎಸ್‌ ಗೆಲ್ಲಲು ಸಾಧ್ಯವಿರುವ 134 ಕ್ಷೇತ್ರಗಳಲ್ಲಿ ಸಿದ್ಧತೆ ಆರಂಭಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.   ಬೀದರ್‌ ಜಿಲ್ಲಾ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರಿಗೆ ವಹಿಸಲಾಗಿದೆ. 10, 12 ದಿನಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ …

Read More »

ರಾತ್ರಿ ನಾಯಿಗಳು ಬೊಗಳುವ ಸದ್ದು ಕೇಳಿ ಮನೆಯಿಂದ ಹೊರಬಂದ ವಿಜಯಪುರ ನಿವಾಸಿಗಳಿಗೆ ಕಾದಿತ್ತು ಶಾಕ್!​

ವಿಜಯಪುರ: ಕಾಳರಾತ್ರಿ, ನಿರವ ಮೌನ, ನಾಯಿಗಳ ಬೊಗಳುವಿಕೆಯ ಸದ್ದು, ಗಾಬರಿಗೊಂಡು ಮನೆಯಿಂದ ಹೊರಬಂದ ನಿವಾಸಿಗಳಿಗೆ ಕಂಡಿದ್ದು ದೊಣ್ಣೆ ಹಿಡಿದುಕೊಂಡು, ಮುಸುಕು ಧರಿಸಿ ಹೊರಟಿದ್ದ ದಾಂಡಿಗರ ಪಡೆ….! ಅಬ್ಬಾ ಏನಿದು? ಯಾರು ಈ ಮುಸುಕುಧಾರಿಗಳು? ಎಲ್ಲಿಗೆ ಹೊರಟಿದ್ದಾರೆ? ಎಂದು ಅರಿಯದ ಜನ ಆತಂಕದಿಂದಲೇ ಮನೆಯ ಬಾಗಿಲು, ಕಿಟಕಿ ಹಾಕಿಕೊಂಡು ಬೆಚ್ಚಗೆ ಮಲಗಿಕೊಂಡಿದ್ದಾರೆ. ಆದರೆ, ರಾತ್ರಿ ಪೆಟ್ರೋಲಿಂಗ್‌ನಲ್ಲಿದ್ದ ಪೊಲೀಸರು ನಾಯಿಗಳ ಜೋರಾದ ಬೊಗಳುವಿಕೆಯ ಸದ್ದು ಕೇಳಿ ಆ ಬಡವಾಣೆಗೆ ಕಾಲಿಟ್ಟರೆ ಇದ್ದಕ್ಕಿದ್ದಂತೆ ಎಲ್ಲರೂ ಮಂಗಮಾಯ. …

Read More »

ಬಿಜೆಪಿ ಕಾರ್ಯಕರ್ತ ಹತ್ಯೆಯಾದ್ರೆ 25 ಲಕ್ಷ: ಬೇರೆ ಧರ್ಮದವರಿಗೆ 1 ರೂಪಾಯಿನೂ ಪರಿಹಾರ ಇಲ್ಲ: ಸತೀಶ ಜಾರಕಿಹೊಳಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಹತ್ಯೆಯಂತಹ ಘಟನೆ ನಡೆಯುತ್ತಿದ್ದರೂ ಗೃಹ ಸಚಿವರೇ ಗಂಭೀರವಾಗಿ ಗಮನಿಸುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಗೋಕಾಕ್‍ನಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ  ಸತೀಶ ಜಾರಕಿಹೊಳಿ ಅವರು, ಬಿಜೆಪಿ ಸರ್ಕಾರ ಮುಂಬರುವ ಚುನಾವಣೆ ತಯಾರಿಯಲ್ಲಿದೆ. ಸರ್ಕಾರವನ್ನು ಯಾವ ರೀತಿ ನಡೆಸಬೇಕು ಎನ್ನುವ ಚಿಂತನೆ ಬಿಜೆಪಿ ನಾಯಕರಿಗಿಲ್ಲ. ಹತ್ಯೆ ಪ್ರಕರಣದಲ್ಲಿ …

Read More »

ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ.. ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್‌ಒ ಪತ್ರ

ಬೆಳಗಾವಿ : ಡಿಹೆಚ್‌ಒಗೆ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ ಹಿನ್ನೆಲೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ ಪತ್ರ ಬರೆದಿದ್ದಾರೆ. ತಮ್ಮದೇನೂ ತಪ್ಪು ಇಲ್ಲದೇ ಇದ್ದರೂ ಜನಪ್ರತಿನಿಧಿಗಳು ತಮಗೆ ಕರೆ ಮಾಡಿ ತರಾಟೆಗೆ ತಗೆದುಕೊಳ್ಳುತ್ತಿದ್ದಾರೆ ಎಂದು ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ …

Read More »

ಫೇಸ್‌ಬುಕ್‌ನಲ್ಲಿ ಯುವತಿಯ ಫೋಟೊ ಹಾಕಿ 5,000 ಜನರನ್ನು ಯಾಮಾರಿಸಿದ ಯುವಕನ ಬಂಧನ

ಬೆಳಗಾವಿ: ಯುವತಿಯೊಬ್ಬರ ಫೋಟೊ ಬಳಸಿ, ಫೇಸ್‌ಬುಕ್‌ ಖಾತೆ ಸೃಷ್ಟಿಸಿ ₹ 20 ಲಕ್ಷ ಹಣ ಕಬಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿಪ್ಪಾಣಿ ತಾಲ್ಲೂಕಿನ ನಾಯಿಂಗ್ಲಜ್‌ ಗ್ರಾಮದ ನಿವಾಸಿ ಮಹಾಂತೇಶ ಮೂಡಸೆ ಬಂಧಿತ ಆರೋಪಿ. ಬೆಳಗಾವಿ ಮೂಲದ, ಸದ್ಯ ದುಬೈನಲ್ಲಿ ವಾಸವಾಗಿರುವ ಯುವತಿಯ ಕೆಲವು ಫೋಟೊಗಳನ್ನು ಫೇಸ್‌ಬುಕ್‌ನಿಂದಲೇ ಡೌನ್‌ಲೋಡ್‌ ಮಾಡಿಕೊಂಡ ಆರೋಪಿ, ಎಂ.ಸ್ನೇಹಾ (ಬದಲಾಯಿಸಿದ ಹೆಸರು) ಎಂಬ ಹೆಸರಲ್ಲಿ ಖಾತೆ ಮಾಡಿದ್ದ. ಆ ಖಾತೆಯಿಂದಲೇ ಯುವಕರಿಗೆ, ವಯಸ್ಕರಿಗೆ ‘ಫ್ರೆಂಡ್‌ …

Read More »