ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂ ಜಿಲ್ಲೆ ಕೊಪ್ಪ ಪಟ್ಟಣ ಬಂದ್ ಕರೆ ನೀಡಿದ್ದಾರೆ. ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಹಿಂದೂ ಪು ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸಬೇಕು. ಪ್ರವೀಣ್ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.
Read More »ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ
ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …
Read More »ಬೆಳಗಾವಿ ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ
ಬೆಳಗಾವಿ: ತಾಲೂಕಿನ ಹಿಂಡಲಗಾ-ಸುಳಗಾ ರೋಡ್ನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಹಿಂಡಲಗಾ – ಸುಳಗಾ ರೋಡನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 4 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಹಿಳಾ ಪೊಲೀಸ್ …
Read More »ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು
ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ …
Read More »ಮೊಬೈಲ್ ಕದ್ದು ಗೂಗಲ್ ಪೇ, ಫೋನ್ ಪೇ ಮೂಲಕ ಹಣ ದೋಚುತ್ತಿದ್ದ ಕದೀಮರು
ಕಲಬುರಗಿ: ಮೊಬೈಲ್ ಕಳ್ಳತನ ಮಾಡಿ ಫೋನ್ ಪೇ ಮತ್ತು ಗೂಗಲ್ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 22 ಮೊಬೈಲ್ ಗಳು, 3.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ತೆಲಂಗಾಣದ ಕಿರಣ್ ರಾಜು ಸಾತಪಾಟಿ ಮತ್ತು ಶಿವಾ ಅಲಿಯಾಸ್ ಶಿವಾಜಿ ವೆಂಕಟೇಶ ಉಪ್ಲಾ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ …
Read More »ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತೀರ್ಮಾನಿಸುವುದು ಜನ,ಬಿಜೆಪಿ ನಾಯಕರಲ್ಲ: ರಮೇಶ್ ಕುಮಾರ್
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುವುದು ರಾಜಕೀಯ ಸಹಜ. ಆದರೆ ಯಾರು ಅಧಿಕಾರಕ್ಕೆ ಬರಬೇಕೆಂದು ತೀರ್ಮಾನಿಸುವುದು ರಾಜ್ಯದ ಜನತೆಯೇ ಹೊರತು ಬಿಜೆಪಿ ನಾಯಕರಲ್ಲ ಎಂದು ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷರಾದ ಶಾಸಕ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕರೇ ಹೇಳಿದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತೆಂದು ಕಾಂಗ್ರೆಸ್ ನಾಯಕರು ಹೇಳಿದರೆ ಅದರ ರಾಜಕಾರ …
Read More »ಬೆಳಗಾವಿಯಲ್ಲಿ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬ ಆಚರಣೆ
ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಟಿಳಕ ಚೌಕ್‍ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಬೆಳಗಾವಿಯ ಶಿವಸೇನಾ …
Read More »ಬಿಜೆಪಿಯವರಿಗೆ ತಿರಂಗಾ ಝಂಡಾ ಹಾರಿಸೋ ಅಧಿಕಾರ ಇಲ್ಲ: ಸತೀಶ ಜಾರಕಿಹೊಳಿ
ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾಧ್ಯಂತ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಪರಿವರ್ತನೆ ಮಾಡಿ ಆಚರಿಸುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ 12ನೇ ಶತಮಾನದಲ್ಲಿಯೇ ವಿಶ್ವಗುರು ಬಸವಣ್ಣನವರು ಮೌಢ್ಯತೆ ಆಚರಿಸುವುದು ಸರಿಯಲ್ಲ ಎಂದು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಆದರೆ ಇನ್ನು ಕೂಡ ಜನರು ಮೂಢನಂಬಿಕೆ, ಮೌಢ್ಯತೆಯಲ್ಲಿಯೇ ಮುಳುಗಿದ್ದಾರೆ. ಇದನ್ನು ಬದಲಾವಣೆ …
Read More »ತವರಿನ ದೇವತೆಗೆ ಕುರಿಮರಿ, ಕೋಳಿಪಿಳ್ಳಿ ಅರ್ಪಿಸಿ ಹರಕೆ ತೀರಿಸಿದ ಮಹಿಳೆಯರು
ಬೆಳಗಾವಿ: ಇಲ್ಲಿನ ವಡಗಾವಿಯ ಪಾಟೀಲ ಗಲ್ಲಿಯಲ್ಲಿರುವ ಮಂಗಾಯಿ ದೇವಿ ಜಾತ್ರೆಗೆ ಮಂಗಳವಾರ ಅಪಾರ ಸಂಖ್ಯೆಯ ಭಕ್ತರ ನಡುವೆ ಚಾಲನೆ ದೊರೆಯಿತು. ‘ತವರು ಮನೆಯ ದೇವತೆ’ ಎಂದೇ ಪರಿಗಣಿಸಲಾಗುವ ಈ ದೇವಿಯ ಜಾತ್ರೆಗೆ ಹೆಣ್ಣು ಮಕ್ಕಳೇ ಹೆಚ್ಚಾಗಿ ಸೇರುತ್ತಾರೆ. ಬೆಳಗಾವಿ ಜಿಲ್ಲೆಯಿಂದ ಬೇರೆ ಬೇರೆ ಊರುಗಳಿಗೆ ಮದುವೆಯಾಗಿ ಹೋದ ಬಹುಪಾಲು ಹೆಣ್ಣುಮಕ್ಕಳು ಈ ಜಾತ್ರೆಗೆ ಬರುವುದು ಸಂಪ್ರದಾಯ. ಐದು ದಿನ ನಡೆಯುವ ಉತ್ಸವದಲ್ಲಿ ಜಿಲ್ಲೆ, ನೆರೆಯ ಜಿಲ್ಲೆ, ಗೋವಾ, ಮಹಾರಾಷ್ಟ್ರದಿಂದ …
Read More »ಸುತಗಟ್ಟಿ ಕ್ರಾಸ್: ರಸ್ತೆ ತಡೆದು ಪ್ರತಿಭಟನೆ
ಸವದತ್ತಿ: ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಹಿಟ್ಟಣಗಿ, ಸುತಗಟ್ಟಿ, ಗೋವನಕೊಪ್ಪ ಕೆ.ವೈ, ಭಮಗುಂಡಿಕೊಪ್ಪ ಮತ್ತು ಏಣಗಿ ಗ್ರಾಮಸ್ಥರು ಹಿಟ್ಟಣಗಿ ಗ್ರಾಮದಿಂದ ಪಾದಯಾತ್ರೆ ನಡೆಸಿ ಸುತಗಟ್ಟಿ ಕ್ರಾಸ್‌ನಲ್ಲಿ ಸುಮಾರು 5 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಜಿಲ್ಲಾ ಪಂಚಾಯಿತಿಯಿಂದ ನಡೆದಿರುವ ₹ 60 ಲಕ್ಷ ವೆಚ್ಚದ ರಸ್ತೆ ಕಾಮಗಾರಿ …
Read More »
Laxmi News 24×7