Breaking News

ಜಿಲ್ಲೆ

ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಅರುಣ್ ಹಲ್ಲೆಗೊಳಗಾದ ವ್ಯಕ್ತಿ. ಅರುಣ್ ಸ್ನೇಹಿತನ ಬರ್ತ್ ಡೇ ಅಂಗವಾಗಿ ಕ್ಯಾಂಡಲ್ ತರಲು ಹೋಗಿದ್ದ. ಬಾಗೇಪಲ್ಲಿಯ ಮುಖ್ಯ ರಸ್ತೆಯ ಬಾರ್ ಬಳಿ ತನ್ನ ಸ್ನೇಹಿತ ರವಿ ನೋಡಿ ಮಾತನಾಡಲು ಬೈಕ್ ನಿಲ್ಲಿಸಿದ್ದಾನೆ. ಈ ವೇಳೆ ರವಿ ಜೊತೆ ಸಲುಗೆಯಿಂದ ಅವಾಚ್ಯ ಶಬ್ದ ಬಳಸಿ ಮಾತನಾಡಿದ್ದನ್ನು ಕಂಡ ರವಿಯ …

Read More »

ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರಿ ಅಧಿಕಾರಿಗಳಿಗೆ ಫೋನ್ ಮಾಡಿ ಅಕೌಂಟ್‍ಗೆ ಹಣ ಹಾಕುವಂತೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾವು ಎಸಿಬಿ ಅಧಿಕಾರಿಗಳೆಂದು ನಂಬಿಸಿ ಸರಕಾರಿ ಅಧಿಕಾರಿಗಳಿಂದ ಸುಲಿಗೆ ಮಾಡುತ್ತಿದ್ದ ಮೂವರು ಖದೀಮರನ್ನು ಬೆಳಗಾವಿಯ ಸಿಎಎನ್ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರ್‍ಪಡಿಸಿದ್ದಾರೆ. ಬಂಧಿತರನ್ನು ಚಿಕ್ಕೋಡಿಯ ಸದಲಗಾ ಮೂಲದ 56ವರ್ಷದ ಮುರಗೆಪ್ಪ ನಿಂಗಪ್ಪ ಪೂಜಾರ್, …

Read More »

ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ಅಭ್ಯರ್ಥಿ ಹಣ ಹಂಚಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಕೊಟ್ಟಿದ್ದಾರೆ. ಭೂತದ ಬಾಯಿಯಲ್ಲಿ ಭಗವದ್ಗೀತೆ ಎಂದು ಹೇಳಲು ಬಯಸುತ್ತೇನೆ ಎಂದಿದ್ದಾರೆ. ಬೆಳಗಾವಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚುನಾವಣೆಯಲ್ಲಿ ಹಣ ಹಂಚಿದ್ರು, ಹೆಂಡಾ ಹಂಚಿದ್ರು ಅನ್ನೋಕಿಂತಲೂ. ವಿಧಾನಸಭೆಯಲ್ಲಿ ಜೆಡಿಎಸ ಶಾಸಕ ಶ್ರೀನಿವಾಸ ಅವರೇ ಹೇಳಿದ್ರು. ಕಾಂಗ್ರೆಸ್ ಜೆಡಿಎಸ್ ಸಮಿಶ್ರ ಸರ್ಕಾರ ಬೀಳಿಸಲು …

Read More »

ಕಾರ್ ಹಾಗೂಬೈಕ್ ನಡುವೆ ಮುಖಾಮುಖಿ ಡಿಕ್ಕಿ:ಗಂಭೀರ ಗಾಯ

ಬೈಕ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮೀಸಾಳೆ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಎರಡು ವಾಹನಗಳ ಅತೀ ವೇಗವೇ ಕಾರಣ ಎನ್ನಲಾಗಿದೆ ಘಟನೆಯಲ್ಲಿ ಗಾಯಗೊಂಡಿವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Read More »

ರಾತ್ರಿಯಿಂದ ಜಿಲ್ಲೆಯಲ್ಲಿ 144ಸೆಕ್ಷನ್ ಜಾರಿ

ಬೆಳಗಾವಿ: ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣಿಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿ …

Read More »

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಓರ್ವ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ದೇಸೂರ ರೈಲು ನಿಲ್ದಾಣದ ಬಳಿ ನಡೆದಿದೆ. ದೇಸೂರ ರೈಲು ನಿಲ್ದಾಣ ಹಾಗೂ ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜ್ ರೈಲ್ವೇ ಗೇಟ್ ಹತ್ತಿರ ಈ ಘಟನೆ ಸಂಭವಿಸಿದೆ. ಅಂದಾಜು 25 ವಯಸ್ಸಿನ ಯುವಕನಾಗಿದ್ದು. 5.7 ಅಡಿ ಎತ್ತರ, ಸಾದ ಗೆಂಪು ಬಣ್ಣ, ಮೈಯಿಂದ ತೆಳ್ಳಗೆ, ಉದ್ದು ಮುಖ, ನೀಟಾದ ಮೂಗು, ತಲೆಯಲ್ಲಿ 2 ಇಂಚ ಕಪ್ಪು ಕೂದಲು …

Read More »

ಮತಗಟ್ಟೆಯಲ್ಲಿ ಸಿಬ್ಬಂದಿ ಜೊತೆ ಮಾತನಾಡಿ, ಫೋನ್ ಬಳಕೆ ಮಾಡಿ, ಮಾಸ್ಕ್ ಹಾಕಿಲ್ಲ ಎಂಬ ಆರೋಪ ಶಾಸಕ ಅನಿಲ ಬೇನಕೆ ಮೇಲೆ..?

ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸುಗೊಂಡಿದ್ದು, ಈ ನಡುವೆ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಗೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಮತಗಟ್ಟೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ ಅಲ್ಲದೇ ಮೊಬೈಲ್ ನಲ್ಲಿಯೂ ಮಾತನಾಡಿದ್ದಾರೆ. ಈ ಮೂಲಕ ಶಾಸಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಗೆ ಮೊಬೈಲ್ ಫೋನ್ …

Read More »

ಪ್ರಕಾಶ ಹುಕ್ಕೇರಿ ಗೆಲುವು ಖಚಿತ: ಸತೀಶ ಜಾರಕಿಹೊಳಿ

ಪ್ರಕಾಶ ಹುಕ್ಕೇರಿ ಅವರಿಗೆ 30 ವರ್ಷ ಜನ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಪ್ರಕಾಶ ಹುಕ್ಕೇರಿಗೆ ಬಿಜೆಪಿ, ಉಮೇಶ ಕತ್ತಿ, ಲಕ್ಷ್ಮಣ ಸವದಿ ಸರ್ಟಿಫಿಕೆಟ್ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು ಕೊಟ್ಟಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಜನ 30 ವರ್ಷ ಸರ್ಟಿಫಿಕೆಟ್ ಕೊಟ್ಟಿದ್ದಾರೆ. ಎಲ್ಲಾ ರಂಗದಲ್ಲಿಯೂ ಪ್ರಕಾಶ ಹುಕ್ಕೇರಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ವೇದಿಕೆಯಲ್ಲಿ ಪ್ರಕಾಶ ಹುಕ್ಕೇರಿ ಅವರಿಗೆ ವಯಸ್ಸಾಗಿದೆ ಎಂದು ಟೀಕಿಸಿದ್ದಾರೆ. …

Read More »

2022-23ನೇ ಸಾಲಿನ ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ

ಬೆಂಗಳೂರು: ಬೆಂಗಳೂರು ಪ್ರೆಸ್‌ ಕ್ಲಬ್‌ನ 2022-23ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್‌. ಶ್ರೀಧರ್‌ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ವಿವರ ಮತ್ತು ಪಡೆದ ಮತಗಳು: ಆರ್‌. ಶ್ರೀಧರ್‌ (ಅಧ್ಯಕ್ಷ, 302 ಮತಗಳು), ಆನಂದ್‌ ಪಿ. ಬೈದನಮನೆ (ಉಪಾಧ್ಯಕ್ಷ , 327 ಮತಗಳು), ಬಿ.ಪಿ. ಮಲ್ಲಪ್ಪ (ಪ್ರಧಾನ ಕಾರ್ಯದರ್ಶಿ, 340 ಮತಗಳು), ದೊಡ್ಡಬೊಮ್ಮಯ್ಯ (ಕಾರ್ಯದರ್ಶಿ, 176), ಮಹಾಂತೇಶ್‌ ಎಸ್‌. ಹಿರೇಮಠ (ಜಂಟಿ ಕಾರ್ಯದರ್ಶಿ, 275 ಮತಗಳು), ಮೋಹನ್ …

Read More »

ವೀಕೆಂಡ್ ಡ್ರಗ್ಸ್ ಪಾರ್ಟಿ ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್‌ಗೆ …

Read More »