Breaking News

ಜಿಲ್ಲೆ

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಡಿವೈಎಸ್ಪಿ ಆಪ್ತ ‘ಆರ್‌ಪಿಐ’ ಸೇರಿ ಇಬ್ಬರ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ಆಪ್ತ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್‌ಪಿಐ) ಜಿ. ಬಸವರಾಜ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.   ‘ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಬಸವರಾಜ್, ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ವೃತ್ತಿ ಆರಂಭಿಸಿದ್ದರು. ಇನ್ನೊಬ್ಬ ಬಂಧಿತ ಸಿ.ಎಂ. ನಾರಾಯಣ, ಪಿಎಸ್‌ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿ. ಇಬ್ಬರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ …

Read More »

ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

ಬೆಂಗಳೂರು: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ. ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು …

Read More »

ಬೊಮ್ಮಾಯಿ, ಕಟೀಲ್‌ಗೆ ತರಾಟೆ – ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಆರ್‌ಎಸ್‌ಎಸ್‌ ಚಾಟಿ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಹಾಗೂ ಬಿಜೆಪಿ ನಡವಳಿಕೆ ಬಗ್ಗೆ ಆರ್‌ಎಸ್‌ಎಸ್‌ ಗರಂ ಆಗಿದೆ. ಶನಿವಾರ ರಾತ್ರಿ ಮೂರು ಗಂಟೆಗಳ ಕಾಲ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ಕಿಡಿಕಾರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆರ್‌ಎಸ್‌ಎಸ್‌ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ …

Read More »

ಮಗು ಮೃತಪಟ್ಟಿರುವುದಾಗಿ ಘೋಷಿಸಿದ ವೈದ್ಯರು: ಅಂತ್ಯಕ್ರಿಯೆ ವೇಳೆ ಜೀವಂತವಾಗಿ ಪತ್ತೆಯಾದ ನವಜಾತ ಶಿಶು

ರಾಯಚೂರು: ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಉಸಿರಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವ ಘಟನೆ ರಾಯಚೂರು ಜಿಲ್ಲೆಯ ತುರುವಿಹಾಳ ಗ್ರಾಮದಲ್ಲಿ ನಡೆದಿದೆ.   ಏನಿದು ಘಟನೆ? ಮೇ 10 ರಂದು ತುರುವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಮತ್ತು ಅಮರಮ್ಮ ದಂಪತಿಗೆ ಹೆಣ್ಣು ಮಗುವಾಗಿತ್ತು. ಆದರೆ ಮಗುವಿಗೆ ಹೆಚ್ಚಿನ …

Read More »

ಗೋಕಾಕನಲ್ಲಿ ಸ್ವಂತ ತಮ್ಮನ ಹೆಣ ಉರುಳಿಸಿದ ಪಾಪಿ ಅಣ್ಣ

ಬೆಳಗಾವಿ: ಒಡ ಹುಟ್ಟಿದ ತಮ್ಮನ ಏಳಿಗೆಯನ್ನೇ ಸಹಿಸದ ಸಹೋದರನೊಬ್ಬ ತಮ್ಮನ ಎದೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದಲ್ಲಿ ‌ನಡೆದಿದೆ. ಜಿಲ್ಲೆಯ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದ ಮಾಳಪ್ಪ ಭೀಮಪ್ಪ ಚಳಾಯಿ (33)ಕೊಲೆಯಾದ ವ್ಯಕ್ತಿ. ಆತನ ಸಹೋದರನಾದ ವಾಶಪ್ಪ ಭೀಮಪ್ಪ ಚಳಾಯಿ ಕೊಲೆ ಮಾಡಿದ ಆರೋಪಿ.‌ ತಮ್ಮ ಜಮೀನಿನಲ್ಲಿ ದುಡಿದು ಶ್ರೀಮಂತನಾಗುತ್ತಿರುವುದನ್ನು ಕಂಡು ಹೊಟ್ಟೆ ಕಿಚ್ಚಿನಿಂದ ಅಣ್ಣನೇ ತಮ್ಮನ ಕೊಲೆ ಮಾಡಿದ್ದಾನೆ ಎಂದು …

Read More »

ಹತ್ತಾರು ಜನರ ಎದುರೇ ವಕೀಲೆ ಮೇಲೆ ಹಲ್ಲೆ; ಆರೋಪಿಯ ಬಂಧನ..

ಬಾಗಲಕೋಟೆ: ರಸ್ತೆ ಬದಿಯಲ್ಲಿ ಹತ್ತಾರು ಜನರ ಎದುರೇ ವಕೀಲೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಗೀತಾ ಸಿಕ್ಕೇರಿ ಎಂಬಾಕೆ ಹಲ್ಲೆಗೊಳಗಾದ ವಕೀಲೆ. ಮಹಾಂತೇಶ್ ಚೊಳಚಗುಡ್ಡ ಎಂಬಾತ ಬಂಧನಕ್ಕೆ ಒಳಗಾಗಿರುವ ಆರೋಪಿ. ಬಾಗಲಕೋಟೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿತ್ತು. ಸಂಜೆಯೊಳಗಾಗಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ರಸ್ತೆ ಬದಿಯಲ್ಲಿ ಸಾರ್ವಜನಿಕರ ಎದುರೇ ಸಂಗೀತಾ …

Read More »

ಸಿಎಂ ಹೆಗಲಿಗೆ ಸಂಪುಟ: ಅರುಣ್ ಸಿಂಗ್ ಹೇಳಿಕೆ | ಸಚಿವರ ಮೌನ ಕಾರ್ಯವೈಖರಿಗೆ ಕಿಡಿ

ಬೆಂಗಳೂರು: ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು, ಬಿಡಬೇಕು ಎನ್ನುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಷಯದಲ್ಲಿ ಮುಖ್ಯಮಂತ್ರಿಯದೇ ಪರಮಾಧಿಕಾರ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪುನರುಚ್ಚರಿಸಿದರು.   ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯದಮವರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಅದೇನಿದ್ದರೂ ಕಾಂಗ್ರೆಸ್​ನಲ್ಲಿದೆ, ಸದಾ ಗೊಂದಲದಲ್ಲಿ ಆ ಪಕ್ಷ ಮುಳುಗಿರುತ್ತದೆ ಎಂದರು. ‘ವರಿಷ್ಠರ ಒಪ್ಪಿಗೆಯಂತೆ ಮುಂದಿನ ನಡೆ ಎಂದು ಸಿಎಂ …

Read More »

ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.   ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.   2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …

Read More »

ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಬೆಂಗಳೂರಿನ ಕೆಂಗೇರಿ ಫ್ಲೈಓವರ್​ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್​ನನ್ನು ಹಿಡಿಯಲು ಯತ್ನಿಸಿದ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.​ ಈ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿದೆ. ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದಆರೋಪಿಆಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್​, ನೈಸ್ ​ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ …

Read More »