Breaking News

ಜಿಲ್ಲೆ

ರಾಜ್ಯ ಸರ್ಕಾರಿ ನೌಕರ ಸಂಘ ಹುಕ್ಕೇರಿ ತಾಲೂಕು ಘಟಕದ ಅಧ್ಯಕ್ಷರಾಗಿ ಅವಿನಾಶ್ ಆಯ್ಕೆ

ಚಿಕ್ಕೋಡಿ(ಬೆಳಗಾವಿ): ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಹುಕ್ಕೇರಿ ತಾಲೂಕಾ ಘಟಕದ ನೂತನ ಅಧ್ಯಕ್ಷರಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆ ನೌಕರ ಅವಿನಾಶ್ ಹೊಳೆಪ್ಪಗೋಳ ಅವಿರೋಧ ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ಜರಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಜಗದೀಶ್ ಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಅವಿನಾಶ್ ಅವರನ್ನು …

Read More »

ರಮೇಶ್ ಜಾರಕಿಹೊಳಿ ವಿರುದ್ಧದ ಷಡ್ಯಂತ್ರದಲ್ಲಿ ಬಿಜೆಪಿ ಮಹಾನ್ ನಾಯಕರೊಬ್ಬರ ಪುತ್ರನ ಪಾತ್ರವಿದೆ : ಯತ್ನಾಳ್ ಹೊಸ ಬಾಂಬ್!

ಬೆಳಗಾವಿ : ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿದವರಲ್ಲಿ ನಮ್ಮಲ್ಲಿನ ಮಹಾನ್‌ ನಾಯಕರೊಬ್ಬರ ಪುತ್ರನ ಪಾತ್ರವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಹಾಗೂ ಮೋಸ ಮಾಡಿದವರಲ್ಲಿ ನಮ್ಮಲ್ಲಿನ ಮಹಾನ್‌ ನಾಯಕರೊಬ್ಬರ ಪುತ್ರನ ಪಾತ್ರವಿದೆ ಎಂದು ಹೇಳಿದ್ದಾರೆ.ಇನ್ನು ಬಿಜೆಪಿಯ ಮಹಾನ್ ನಾಯಕ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ …

Read More »

ನನಗೆ 90 ವರ್ಷ ಆಯ್ತು ವಿಶ್ರಾಂತಿ ಬೇಕು: ಮಾಜಿ ಸಿಎಂ ಎಸ್ ಎಂ ಕೃಷ್ಣ

  ಬೆಂಗಳೂರು: ಚಿತ್ರಕಲಾ ಪರಿಷತ್​​ನಲ್ಲಿ ಇಂಡಿಯನ್ ಆರ್ಟ್ ಫೆಸ್ಟಿವಲ್ ಇಂದಿನಿಂದ ಶುರುವಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ ಕೊಟ್ಟರು. ಬಳಿಕ ಮಾತಾನಾಡಿದ ಅವರು, ಕಲಾಕೃತಿಗಳು ಕಣ್ಣಿಗೆ ಹಾಗೂ ಮನಸ್ಸಿಗೆ ನೆಮ್ಮದಿ, ಸಂತೋಷ ಕೊಡುತ್ತವೆ. ನಮ್ಮ ದೇಶದ ಪ್ರಸಿದ್ಧ ಕಲಾವಿದರು, ಹೆಸರು ಮಾಡಿರುವ ಕಲಾವಿದರು ಬಂದಿದ್ದು, ಅವರ ಕಲಾಕೃತಿಗಳ ಪ್ರದರ್ಶನ ನಡೆಯುತ್ತಿದೆ. ಈ ಕಲಾಕೃತಿಗಳನ್ನು ನೋಡಲು ಸಂತೋಷವಾಗ್ತಿದೆ ಎಂದರು. ಈಗಿನ ರಾಜಕೀಯದಲ್ಲಿ ಆಗ್ತಿರುವ ಬೆಳವಣಿಗೆ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ …

Read More »

532 ಕೋಟಿ ರೂ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

ಬೆಂಗಳೂರು, ಮೇ 6: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.   ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ 532 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು …

Read More »

ಖಾವಿ ಬಟ್ಟೆತೊಟ್ಟು ಗುತ್ತಿಗೆದಾರನಿಂದ ಲಕ್ಷ-ಲಕ್ಷ ಕಿತ್ತ ಸ್ವಾಮೀಜಿಗಳು: ಪ್ರಕರಣ ದಾಖಲು

ನಾವು ಕಲ್ಲೂರು ಮಠದ ಸ್ವಾಮೀಜಿ, ಮಠಕ್ಕೆ ರಾಜಕಾರಣಿಗಳಿಂದ 350 ಕೋಟಿ ಹಣ ಬಂದಿದೆ ಎಂದು ಗುತ್ತಿಗೆದಾರನನ್ನ ನಂಬಿಸಿ 3 ಲಕ್ಷಕ್ಕೆ ಟೋಪಿ ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಮೂಲದ ವಿಜಯ್‌ಕುಮಾರ್ ಅವರೇ ವಂಚನೆಗೆ ಒಳಗಾದವರು. ಮಠಕ್ಕೆ ರಾಜಕಾರಣಿಗಳಿಂದ ಅನುದಾನ ಬಂದಿದ್ದು, ಇದನ್ನು ಸಾಲದ ರೂಪದಲ್ಲಿ ಜನರಿಗೆ ನೀಡುತ್ತಿದ್ದೇವೆ ಎಂದು ನಂಬಿಸಿದ್ದಾರೆ. ಕಾವಿ ಬಟ್ಟೆ ಧರಿಸಿದ ಖದೀಮರು ಶಿವಮೊಗ್ಗದಲ್ಲಿ ವಿಜಯ್‌ಕುಮಾರ್ …

Read More »

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ 84 ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ 84 ಗ್ರಾಮಲೆಕ್ಕಿಗರ ಹುದ್ದೆಗಳನ್ನು ( Village Accountant ) ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು, ಸರ್ಕಾರ ಅನುಮತಿ ನೀಡಿದೆ.   ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಬಂಧ ಪಟ್ಟಂತ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಖಾಲಿ ಇರುವಂತ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ( VA Recruitment ) ಮೂಲಕ ಭರ್ತಿ ಮಾಡಿಕೊಳ್ಳು ಅನುಮತಿಸಲಾಗಿದೆ ಎಂದು …

Read More »

ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ

ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗುರುವಾರ(ಮೇ 5) ಸಂಜೆ ಅಧಿಕಾರವನ್ನು ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನವರಾದ ನಿತೇಶ್ ಪಾಟೀಲ ಅವರು ಇದಕ್ಕೂ ಮುಂಚೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಆಹಾರ ಮತ್ತು ನಾಗರಿಕ …

Read More »

ಬಾದಾಮಿಯಲ್ಲಿ ಸಿದ್ದು ಸ್ಪರ್ಧೆಗೆ ವಿರೋಧದ ಕೂಗು?

ಬಾಗಲಕೋಟೆ: ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದರೂ ಸದ್ಯ ಆಡಳಿತ ಪಕ್ಷ ಬಿಜೆಪಿಯಲ್ಲಿನ ಅಸಮಾಧಾನ ಬೂದಿ ಮುಚ್ಚಿದ ಕೆಂಡದಂತಿದೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಹಾಗೂ ಆಮ್‌ ಆದ್ಮಿ ಪಕ್ಷ ಕೂಡ ಈ ಬಾರಿ ಜಿಲ್ಲೆಯ ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕೆಂಬ ತವಕದಲ್ಲಿ ಸಂಘಟನೆಯಲ್ಲಿ ತೊಡಗಿವೆ.   ಜಿಲ್ಲೆಯಲ್ಲಿ 7 ವಿಧಾನಸಭೆ ಕ್ಷೇತ್ರಗಳಿದ್ದು, ಅದರಲ್ಲಿ ಬಾದಾಮಿ, ಜಮಖಂಡಿ ಕ್ಷೇತ್ರಗಳು ಕಾಂಗ್ರೆಸ್‌ ಹಿಡಿತದಲ್ಲಿವೆ. ಉಳಿದ 5 ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಎರಡು ಕ್ಷೇತ್ರ ಪ್ರತಿನಿಧಿಸುವ …

Read More »

ಹಾಸನ ಡಿಸಿ ಎಷ್ಟು ದಿನ ಆಟ ಆಡುತ್ತಾರೆ ಎಂದು ನಾನೂ ನೋಡುತ್ತೇನೆ: ಎಚ್‌.ಡಿ. ರೇವಣ್ಣ

ಹಾಸನ, ಮೇ 5: ಚೆನ್ನಾಗಿದ್ದ ತಾಲೂಕು ಕಚೇರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದಂತೆ ಡಿಸಿ ಕಚೇರಿಯನ್ನೂ ಒಡೆದರೆ ಪರಿಣಾಮ ಬೇರೆಯಾಗುತ್ತದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾತಾನಾಡಿದ ಅವರು, ಅಧಿಕಾರ ಇದೆ ಎಂದು ದರ್ಪ ನಡೆಸೋದು ಸರಿಯಲ್ಲ. ಹಾಸನ ಜಿಲ್ಲಾಧಿಕಾರಿ ಅನ್ ಫಿಟ್ ಆಗಿದ್ದಾರೆ. ಅವರು ರಬ್ಬರ್ ಸ್ಟಾಂಪ್ ಇದ್ದಂತೆ. ರಾತ್ರೋರಾತ್ರಿ ಕಟ್ಟಡ ಹೊಡೆಯಲು ಅವರನ್ನು ಇಟ್ಟುಕೊಂಡಿದ್ದಾರೆ. ಡಿಸಿ ಎಷ್ಟು ದಿನ ಆಟ ಆಡುತ್ತಾರೆ ನಾನೂ …

Read More »

ಬಿಜೆಪಿ ಶಾಸಕ ಯತ್ನಾಳ್ ಕುತೂಹಲದ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರಿಗೆ ಸಚಿವ ಸ್ಥಾನ, ನಾಲ್ವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿ, ಸಂಪುಟದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಎಲ್ಲ ಸಮುದಾಯ ಮತ್ತು ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡುವ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗುತ್ತದೆ …

Read More »