ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ …
Read More »ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ
ಬೆಂಗಳೂರು: ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ …
Read More »ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ: ಸಿಎಂ ಬೊಮ್ಮಾಯಿ
ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಸಕ್ತ ಸಾಲಿನ ಬಜೆಟ್ ಅನುಷ್ಠಾನಕ್ಕೆ ವೇಗ ನೀಡುವುದಕ್ಕಾಗಿ ಬುಧವಾರ ಇಲಾಖಾವಾರು ಸಭೆಗಳನ್ನು ಆರಂಭಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಶೇಕಡ 80ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಉಳಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಲಾಗುವುದು’ ಎಂದರು. ಎಲ್ಲ ಇಲಾಖೆಗಳಿಗೂ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಳಾಪಟ್ಟಿ ನೀಡಲಾಗುವುದು. …
Read More »ಆಮೆಗತಿಯಲ್ಲಿ ಸಾಗುತ್ತಿದೆ ಚಿಕ್ಕೋಡಿಯ ತಾಯಿ-ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿ
ಅಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡ ಕಟ್ಟಲಾಗುತ್ತಿದೆ. ಎರಡೂ ವರ್ಷ ಮುಂಚೆಯೇ ಪೂರ್ಣಗೊಳ್ಳಬೇಕಾಗಿದ್ದ ಕಾಮಗಾರಿ… ಸದ್ಯ ಈ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ..ಬೇಗನೆ ಕಾಮಗಾರಿ ಮುಗಿಸುವಂತೆ ಒತ್ತಾಯಿಸುತ್ತಿದ್ದಾರೆ.ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಉಪವಿಭಾಗದ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರ 20 ಕೋಟಿ ಅನುದಾನ ನೀಡಿ ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯ ಬಾಣಂತಿ ಕೋಡಿ ರಸ್ತೆ ಪಕ್ಕದಲ್ಲಿ ನಿರ್ಮಾಣ ವಾಗುತ್ತಿರುವ ತಾಯಿ …
Read More »ಶ್ರೀ ದೊಡ್ಡಣ್ಣ ದಿ.5 ರಂದು ಬೆಳಗಾವಿಗೆ
ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ದೊಡ್ಡಣ್ಣ ಅವರು ಇದೇ ಗುರುವಾರ ದಿ.5 ರಂದು ಬೆಳಗಾವಿಗೆ ಆಗಮಿಸಲಿದ್ದು ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕನ್ನಡ ಸಂಘ ಸಂಸ್ಥೆಗಳ ಸನ್ಮಾನವನ್ನು ಸ್ವೀಕರಿಸಲಿದ್ದಾರೆ. ಮುಂಜಾನೆ 10.30 ಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸರಳ ಕಾರ್ಯಕ್ರಮದಲ್ಲಿ ದೊಡ್ಡಣ್ಣ ಅವರು ಕನ್ನಡ ನಾಡು, ನುಡಿ ಮತ್ತು ಗಡಿಯ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕನ್ನಡ ಪರ ಸಂಘಟನೆಗಳ …
Read More »ಮಠದಲ್ಲಿ ರಂಜಾನ್, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್ ಪೈಗಂಬರ್‌ಗೆ ಜಯಘೋಷ
ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಹಾಗೂ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ವಿಭಿನ್ನವಾಗಿ ರಂಜಾನ್ ಹಾಗೂ 889ನೇ ಬಸವ ಜಯಂತಿ ಆಚರಿಸಲಾಯಿತು. ಗಜೇಂದ್ರಗಡ, ಸೂಡಿಯ ಮೈಸೂರು ಮಠದ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹಾಗೂ ಮೌಲ್ವಿ ನೇತೃತ್ವದಲ್ಲಿ ʻಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆʼ ಎಂಬ ವಿಭಿನ್ನ ಹಾಗೂ ವಿಶೇಷವಾದ ಪಾದಯಾತ್ರೆ ಮಾಡಲಾಯಿತು. ಈ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ …
Read More »ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ಜತೆಗೆ ಇನ್ನು ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ..
ಬೆಂಗಳೂರು: ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ಜತೆಗೆ ಇನ್ನು ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕವಾಗಲಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ/ ಪಂಗಡದ ಪ್ರಭಾವಿ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರ ನೇಮಕ ಸಾಧ್ಯತೆ ಇದೆ. ಅಲ್ಲಿಯೂ ಕೂಡಾ …
Read More »10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿ
ಮಂಡ್ಯ :- 5 ಲಕ್ಷ ರೂಪಾಯಿ ಹಣಕೊಟ್ಟರೆ 10 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡಿ ಕೊಡಲಾಗುವುದು ಎಂದು ಪುಸಲಾಯಿಸಿ 5 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮಧ್ಯಾಹ್ನ ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿ ನಡೆದಿದೆ. ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗೇಟ್ ಬಳಿಯ ಶ್ರೀ ಕಬ್ಬಾಳಮ್ಮ ಟೀ ಸ್ವಾಲ್ ಬಳಿ ಮಂಗಳವಾರ ಬೆಳಿಗ್ಗೆ ಸುಮಾರು 12 ಗಂಟೆ ವೇಳೆಗೆ ಕುಣಿಗಲ್ ಮೂಲದ ಪುನೀತ್, ಕಿರಣ್ ಎಂಬ …
Read More »ಅನ್ಯಧರ್ಮದಲ್ಲಿ ಜನಿಸಿದ್ದರೆ ಬಸವಣ್ಣ ವಿಶ್ವಖ್ಯಾತಿ ಪಡೆಯುತ್ತಿದ್ದ: ಶಿವಾನಂದ ಪಾಟೀಲ
ವಿಜಯಪುರ: ಬಸವಣ್ಣ ಇಸ್ಲಾಂ ಧರ್ಮದಲ್ಲಿ ಜನಿಸಿದ್ದರೆ ಮಹ್ಮದ್ ಪೈಗಂಬರರನ್ನು, ಕ್ರೈಸ್ತ ಧರ್ಮದಲ್ಲಿ ಜನಿಸಿದ್ದರೆ ಏಸುವಿಗಿಂತ ಮಿಗಿಲಾಗಿ ಜಗತ್ತನ್ನು ಆವರಿಸಿರುತ್ತಿದ್ದರು. ಆದರೆ ಬಸವಣ್ಣ ಎಂಬ ಮಹಾನ್ ದಾರ್ಶನಿಕ ಕನ್ನಡ ನೆಲದ ಬಾಗೇವಾಡಿಯಲ್ಲಿ ನೆಲೆಸಿದ್ದರಿಂದ ಅವರ ವೈಚಾರಿಕ ಸಂದೇಶಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ಮಂಗಳವಾರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು: ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬೆಳಿಗ್ಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ …
Read More »
Laxmi News 24×7