ಬೆಳಗಾವಿ : ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹಿನ್ನೆಲೆ ಬಿಎಸ್‌ವೈ ಜೊತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ಬೆಳಗಾವಿ ಪ್ರವಾಸದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಸಂಕಮ್ ಹೋಟೆಲಿನಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ. ಈಶ್ವರಪ್ಪರಿಂದ ರಾಜೀನಾಮೆ ಪಡೆಯುವ ಬಗ್ಗೆ ಬಿಎಸ್‌ವೈ ಜೊತೆಗೆ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮಾತಿಗೆ ಬಿಎಸ್‌ವೈ ಸಮ್ಮತಿ ನೀಡಿದ್ದಾರಾ ಎಂಬ ಬಗ್ಗೆ ಖಚಿತ ಮಾಹಿತಿ …
Read More »ಗುತ್ತಿಗೆದಾರ ಸಂತೋಷ್ ಸಾವು: ‘ಸಚಿವ ಈಶ್ವರಪ್ಪರನ್ನ ಅರೆಸ್ಟ್ ಮಾಡಿ’ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಮೃತದೇಹ ಉಡುಪಿಯ ಹೋಟೆಲ್ ಒಂದರಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಟಿ ನಡೆಸಿದರು. ಈ ಹಿನ್ನೆಲೆಯಲ್ಲಿ ಸರ್ಕಾರ ಈಶ್ವರಪ್ಪ ವಿರುದ್ಧ ಸೆಕ್ಷನ್ 302 ಅಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಬೇಕು. ಈ ಕೂಡಲೇ ಈಶ್ವರಪ್ಪರನ್ನ ಬಂಧಿಸಬೇಕು. ಅಲ್ಲದೇ ಬೊಮ್ಮಾಯಿ ಅವರು ಕ್ಯಾಬಿನೆಟ್ನಿಂದ ವಜಾ ಮಾಡಬೇಕು. ಯಾಕಂದ್ರೆ ಈಶ್ವರಪ್ಪ ಅವರೇ ನನ್ನ …
Read More »ಮದುವೆ ಸಂಭ್ರಮ ಕಸಿದುಕೊಂಡ ಅಕಾಲಿಕ ಮಳೆ – ತಂದೆ ಆಸ್ಪತ್ರೆಯಲ್ಲಿ, ಮಗಳು ಮನೆಯಲ್ಲಿ ಕಣ್ಣೀರು
ಬೆಳಗಾವಿ: ಕಳೆದ ಮೂರುನಾಲ್ಕು ದಿನಗಳಿಂದ ಕುಂದಾನಗರಿಯಲ್ಲಿ ಸುರಿಯುತ್ತಿರೋ ಅಕಾಲಿಕ ಮಳೆಯಿಂದಾಗಿ ಮಗಳ ಮದುವೆಯ ಸಂಭ್ರಮ ಕಸಿದುಕೊಂಡಿದೆ. ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದ ಆಶ್ರಯ ಕಾಲೋನಿಯಲ್ಲಿ ಸುರಿದ ಬಾರಿ ಮಳೆ, ಗಾಳಿಗೆ ಚಂದ್ರಶೇಖರ್ ಹುಡೇದ್ ಅವರ ಮನೆ ಸೇರಿ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಕುಸಿದಿವೆ. ಈ ಪರಿಣಾಮ, ಏಪ್ರಿಲ್ 15ಕ್ಕೆ ಅದ್ಧೂರಿಯಾಗಿ ಮಗಳ ಮದುವೆಯನ್ನು ನಿಶ್ಚಯ ಮಾಡಿಕೊಂಡಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ಮದುಮಗಳು ಕೂಡ …
Read More »ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ
*ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.* 👉Breaking News👉👉👉 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್ ಜಾರಕಿಹೊಳಿ. ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …
Read More »ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು.
ಬೆಳಗಾವಿ ಕುವೆಂಪು ನಗರದ ಕಚೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಕೆದನೂರ, ಅಗಸಗಿ, ಮನ್ನಿಕೇರಿ ಗ್ರಾಮದಲ್ಲಿ ಬಣವಿಗಳಿಗೆ ಆಕಸ್ಮಿಕ ಬೆಂಕಿ ಬಿದ್ದು, ಹಾನಿಯಾದ 9 ರೈತರ ಕುಟುಂಬಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ನಿಂದ ತಲಾ 10 ಸಾವಿರ ರೂ. ದಂತೆ ಒಟ್ಟು 90 ಸಾವಿರ ರೂಪಾಯಿ ವಿತರಿಸಲಾಯಿತು. ಇದೇ ವೇಳೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಕಾಸಬಾಗದಿಂದ ಕುಂತಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಅಲ್ಲಿನ ಸಾರ್ವಜನಿಕರ ಮನವಿ ಮೇರೆಗೆ 1 ಲಕ್ಷ …
Read More »ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ
ಬೆಳಗಾವಿ: ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ ವಿಚಿತ್ರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. 1 ವರ್ಷದ ಬಾಲಕಿಯನ್ನು, ಅನಿಲ್ ರಾಮು ಲಂಬೂಗೋಳ (31) ಎಂಬ ಖದೀಮ ಭಾನುವಾರ ತಡರಾತ್ರಿ ಅಪಹರಿಸಿದ್ದಾನೆ. ಮನೆಯಲ್ಲಿ ಕಳ್ಳತನ ಮಾಡುವಾಗ ಮನೆಯವರ ಕಣ್ಣಿಗೆ ಬಿದ್ದಿದ್ದ ಅನಿಲ್ ರಾಮು, ಹೊರಗಡೆ ನಿಂತಿದ್ದ ಮಗುವನ್ನ ಅಪಹರಿಸಿದ್ದಾನೆ. ಈ ಬಗ್ಗೆ ಪೋಷಕರು ಅಂಕಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪಹರಣ ಮಾಡಿದ ಬಾಲಕಿ ಮತ್ತು …
Read More »ಗೋಕಾಕ ತಾಲೂಕಿನ ಶ್ರೀ ಸಿದ್ಧಾರೂಢ ಮಹೋತ್ಸವದ ಉದ್ಘಾಟನೆ ಸಮಾರಂಭಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ಭೇಟಿ…
ಗೋಕಾಕ: ಗೋಕಾಕ ನಗರದ ಜನತೆಯ ಮಧ್ಯೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಬೆರೆಯಲು ಪ್ರಾರಂಭ ಮಾಡಿದ್ದಾರೆ, ಇಷ್ಟು ದಿನ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೆಲಸದಲ್ಲಿ ಬ್ಯೂಸಿ ಇದ್ದ ಸಾಹುಕಾರರು ಪ್ರತಿದಿನ ತಮ್ಮ ವ್ಯಾಪ್ತಿಯಲ್ಲಿ ಬರುವ ಕಾರ್ಯಕ್ರಮ ಗಳಿಗೆ ಹಾಜರ ಆಗಿ, ಜನರ ಜೊತೆ ಜನ ಸಾಮಾನ್ಯರಂತೆ ಬೆರೆತು ಎಲ್ಲ ಕಾರ್ಯಕ್ರಮ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಶಿವ ಶಕ್ತಿ ನಗರದಲ್ಲಿ ಶ್ರೀ ಸಿದ್ದಾರೂಢ ಮಹೋತ್ಸವ …
Read More »ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ
ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ …
Read More »ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
-ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು ಪರೀಕ್ಷೆ ಒಂದು ಹಬ್ಬ ಕಾರ್ಯಕ್ರಮ ಯಮಕನಮರಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಮಾವನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಹಾಗೂ ಶಾಲಾ ವಾರ್ಷಿಕ ಸ್ವೇಹ ಸಮ್ಮೇಳನ ಮತ್ತು …
Read More »
Laxmi News 24×7