ಗಜೇಂದ್ರಗಡ(ಗದಗ): ತಾಲೂಕಿನ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಶನಿವಾರ ನಡೆದಿದೆ. ಮೃತ ದುರ್ದೈವಿ ಗಜೇಂದ್ರಗಡ ಪಟ್ಟಣದ ನಿವಾಸಿ ಶಂಕರ ಬೆರಗಿ(25) ಎಂದು ತಿಳಿದು ಬಂದಿದೆ. ಶಂಕರ ತನ್ನ ಸ್ನೇಹಿತರೊಂದಿಗೆ ಜಿಗೇರಿ ಕೆರೆಗೆ ಈಜಲು ತೆರಳಿದ್ದ. ಮೇಲಿಂದ ಕೆರೆಗೆ ಹಾರಿದ ವೇಳೆ ಕೆರೆಯ ಹುದುಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇದನ್ನು ಕಂಡ ಸ್ನೇಹಿತ ಹಾಗೂ ಮತ್ತಿತರರು ತಕ್ಷಣವೇ ನೀರಿಗೆ ಹಾರಿ ಸ್ನೇಹಿತನ ರಕ್ಷಿಸಲು ಪ್ರಯತ್ನಿಸಿದರೂ, ಅದಾಗಲೇ ಶಂಕರ್ ಬೆರಗಿ …
Read More »100 ಕೋಟಿ ರೂ. ವೆಚ್ಚದಲ್ಲಿ ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭರವಸೆ
ಗೋಕಾಕ : ರೈತರಿಗೆ ದಿನನಿತ್ಯ ಕನಿಷ್ಠ 10 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಕೌಜಲಗಿಯಲ್ಲಿ 220 ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲು ಉದ್ಧೇಶಿಸಿದ್ದು, ಇದಕ್ಕಾಗಿ ನೂರು ಕೋಟಿ ರೂ. ವೆಚ್ಚದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ತಾಲೂಕಿನ ಗೋಸಬಾಳ ಗ್ರಾಮದ ಹೊರವಲಯದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 15 …
Read More »ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿ ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್,
ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದನಹೊಸೂರ ಗ್ರಾಮದ ಪವರ್ ಸ್ಟಾರ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಸಂಜೆ ಉದ್ಘಾಟಸಿದರು. ಈ ಕ್ರಿಕೆಟ್ ಪಂದ್ಯಾವಳಿಯ ಪ್ರಥಮ ಬಹುಮಾನವನ್ನು ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ನೀಡಲಾಗುತ್ತಿದೆ. ಬ್ಯಾಟ್ ಹಿಡಿದು ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಹೆಬ್ಬಾಳಕರ್, ರಾಜಕೀಯಕ್ಕಷ್ಟೇ ಅಲ್ಲ ಕ್ರೀಡೆಗೂ ಸೈ ಎಂದು ತೋರಿಸಿದರು. ಕಲಹೊತ್ತು ಕ್ರಿಕೆಟ್ ಆಡಿ ಕ್ರೀಡಾಪಟುಗಳನ್ನು …
Read More »ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರ
ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ …
Read More »ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು. ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …
Read More »ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.
ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …
Read More »ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.
ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …
Read More »ನವೋದಯ ಸಂಸ್ಥೆ ನಡೆ ವಿರೋಧಿಸಿ ರಾಯಚೂರು ಬಂದ್ಗೆ ಕರೆ ಕೊಟ್ಟ ಸಂಘಟನೆಗಳು
ಮಾರ್ಚ್ 7 ರಂದು ರಾಯಚೂರು ನಗರ ಸಂಪೂರ್ಣವಾಗಿ ಬಂದ್ ಆಗಿಲಿದೆ.ರಾಯಚೂರು ನಗರದಲ್ಲಿರೊ ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡಿಸಿ, ಬಂದ್ಗೆ ಕರೆ ನೀಡಲಾಗಿದೆ. ರಾಯಚೂರು ನಗರದ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಬಂದ್ ನಡೆಯಲಿದೆ. ರಾಯಚೂರು ಬಂದ್ ಗೆ ಬಹುತೇಕ ಎಲ್ಲಾ ಕ್ಷೇತ್ರದವರು ಬೆಂಬಲ ನೀಡಿದ್ದಾರೆ. ಜೊತೆಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೂಡ ಬಂದ್ನಲ್ಲಿ ಭಾಗಿಯಾಗಲಿದ್ದಾರೆ ಅಂತ ಶಾಸಕ ಡಾ.ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. …
Read More »ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …
Read More »10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »
Laxmi News 24×7