Breaking News

ಜಿಲ್ಲೆ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ – ಸಾಲರಾಮಯ್ಯ ಎಂದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೀದರ್‌: ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೀದರ್‌ನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಜೆಟ್‌  ವಿಚಾರವಾಗಿ ಸಾಲಾರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು. ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಕೇಂದ್ರ ಸರ್ಕಾರ …

Read More »

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ರಾಯಚೂರು: 2024ರಲ್ಲಿ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ಲಿಂಗಸುಗೂರು  ಪೀಠ ತೀರ್ಪು ನೀಡಿದೆ. ಮೃತ ಮಹಿಳೆ ವಿಜಯಲಕ್ಷ್ಮಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯರಡೋಣ ಗ್ರಾಮದ ಆರೋಪಿ ದೇವರಾಜ ವಿರುದ್ಧ ಆರೋಪಿ ಸಾಬೀತಾದ ಹಿನ್ನೆಲೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ತೀರ್ಪು ನೀಡಿ, ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. …

Read More »

ಆಸ್ತಿ ತೆರಿಗೆ ಏರಿಕೆ ವಿರುದ್ಧ ಹಿರಿಯ ನಾಗರಿಕರ ಆಕ್ರೋಶ

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಏರಿಕೆ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ನಿಯಮ ಬಾಹಿರವಾಗಿ ತೆರಿಗೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಆರೋಪಿಸಿ ಇಂದು ಹಿರಿಯ ನಾಗರಿಕರು ಹಾಗೂ ಮಾಜಿ ನಗರಸೇವಕರು ಮಹಾಪೌರರಿಗೆ ಮನವಿ ಸಲ್ಲಿಸಿದರು. ಶೇ. 3ರಷ್ಟು ತೆರಿಗೆ ಏರಿಕೆ ಜನತೆಗೆ ದೊಡ್ಡ ಹೊರೆಯಾಗಿದೆ ಎಂದರು. ಇಂದು ಬೆಳಗಾವಿ ಮಹಾಪೌರ ಮಂಗೇಶ್ ಪವಾರ್ ಅವರಿಗೆ ಹಿರಿಯ ನಾಗರೀಕರು ಮನವಿಯನ್ನು ಸಲ್ಲಿಸಿದರು. ಈ ವೇಳೆ ಮಹಾಪೌರರೊಂದಿಗೆ ಆಸ್ತಿ ತೆರಿಗೆ …

Read More »

ಸಾಲ ಮಾಡಿ ಬಜೆಟ್‌ ಮಂಡಿಸಿದ್ದು ಇದೇ ಮೊದಲ ಬಾರಿಯಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಳೆದ ಐವತ್ತು ವರ್ಷದಿಂದ ಸಾಲ ಮಾಡಿಯೇ ಬಜೆಟ್‌ ಮಂಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯನವರಷ್ಟೇ ಸಾಲ ಮಾಡಿ ಬಜಟ್‌ ಮಂಡನೆ ಮಾಡಿಲ್ಲ. ಬಿಜೆಪಿಯವರು ಸಾಲ ಮಾಡಿಯೇ ಬಜೆಟ್‌ ಮಂಡಿಸಿದ್ದು, ಈಗ ಟೀಕೆ ಮಾಡಿದರೆ ಪ್ರಯೋಜನವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಲೋಕೋಪಯೋಗಿ ಇಲಾಖೆ ಬಜೆಟ್’ನಲ್ಲಿ ಸೇತುವೆಗಳಿಗೆ ಬೇಡಿಕೆಯಿಟ್ಟಿತ್ತು. ಅದಕ್ಕೆ ಅನುದಾನವನ್ನು ನೀಡಿದ್ದಾರೆ. ಕಳೆದ …

Read More »

ಬೆಳಗಾವಿ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲಾ ಮಕ್ಕಳಲ್ಲಿ ಆತ್ಮರಕ್ಷಣೆಯ ಕಲೆ: 150 ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಣೆ

ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮತ್ತು ಬೆಳಗಾವಿ ಜಿಲ್ಲಾ ಸ್ಪೋರ್ಟ್ಸ್ ಅಸೋಸಿಯೇಷನ ವತಿಯಿಂದ ಕೆ.ಎಸ್.ಆರ್. ಸಿ ಬಿ ಎಸ್ ಸಿ ಶಾಲೆಯಲ್ಲಿ ಮಕ್ಕಳಿಗೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ಪೂರೈಸಿದ ವಿದ್ಯಾರ್ಥಿಗಳಿಗೆ ಕರಾಟೆ ಬೆಲ್ಟ್ ವಿತರಿಸಲಾಯಿತು. ಕಾಂಗ್ರೆಸ್ …

Read More »

ದರೋಡೆ ಪ್ರಕರಣ: ಕಾಗವಾಡ ಪೊಲೀಸರಿಂದ ಆರೋಪಿ ಬಂಧನ

ಕಾಗವಾಡ ತಾಲೂಕಿನಲ್ಲಿ ನಡೆದ ದರೋಡೆ ಪ್ರಕರಣವನ್ನು ಕೇವಲ ನಾಲ್ಕೇ ಗಂಟೆಯಲ್ಲಿ ಭೇದಿಸುವ ಮೂಲಕ ಪೊಲೀಸರು ಖಾಕಿ ಖದರ್ ತೋರಿಸಿದ್ದಾರೆ. ಮಾರಕಾಸ್ತ್ರ ತೋರಿಸಿ ಲಕ್ಷಾಂತರ ರೂಪಾಯಿ ದೋಚಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಶಿರಗುಪ್ಪಿ ಗ್ರಾಮದ ಹೊರವಲಯದಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ಉಗಾರ ಬಿ.ಕೆ. ಗ್ರಾಮದ ನಿವಾಸಿ ಶಾಂತು ಅವಳೆಕರ ಎಂಬಾತನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾಗವಾಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಾಗರ …

Read More »

ಯುಗಾದಿ ಸಂಭ್ರಮಕ್ಕೆ ‘ಕಾಯಕ ಕಟ್ಟೆ’ ಸಾಥ್: ಬೆಳಗಾವಿಯಲ್ಲಿ ಮಹಿಳಾ ಉದ್ಯಮಿಗಳ ಕರಕುಶಲ ವಸ್ತುಗಳ ಬೃಹತ್ ಪ್ರದರ್ಶನ

ಬೆಳಗಾವಿಯ ಲಿಂಗಾಯತ ಭವನದಲ್ಲಿ ಇಂದು ಮಹಿಳಾ ಶಕ್ತಿಯ ದರ್ಶನವಾಯಿತು. ಯುಗಾದಿ ಹಬ್ಬದ ನಿಮಿತ್ತ ‘ಕಾಯಕ ಕಟ್ಟೆ’ ಮಹಿಳಾ ಉದ್ಯಮಿಗಳ ಬಳಗ ಹಮ್ಮಿಕೊಂಡಿರುವ 5ನೇ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಸ್ಥಳೀಯ ಮಹಿಳಾ ಸಾಧಕಿಯರು ಸಿದ್ಧಪಡಿಸಿದ ವೈವಿಧ್ಯಮಯ ಉತ್ಪನ್ನಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಿಳಾ ಜಿಲ್ಲಾ ಘಟಕದ ಸಹಯೋಗದಲ್ಲಿ ಬೆಳಗಾವಿಯ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಈ ವಿಶೇಷ ಮೇಳವನ್ನು ಆಯೋಜಿಸಲಾಗಿದೆ. …

Read More »

ಗುರು ಪರಂಪರೆಗೆ ಹೆಚ್ಚು ಒತ್ತು ನೀಡುತ್ತಿರುವ ಮಠ ಮಾನ್ಯಗಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಾದಹಳ್ಳಿ (ಹುಣಸೂರು) :ನಾಡಿನ ಮಠ ಮಾನ್ಯಗಳಿಂದ ಗುರು ಪರಂಪರೆ ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಮಠಗಳು ಸರ್ಕಾರಕ್ಕೆ ಸಮಾನವಾಗಿ, ಸಾಮಾಜಿಕ ಬದ್ಧತೆಯೊಂದಿಗೆ ಕೆಲಸ ಮಾಡುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮಾದಹಳ್ಳಿಯಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ, 63 ಪ್ರಮಥರ ಪೂಜೆ ಶ್ರೀಮಠದ ನೂತನ ಕಟ್ಟಡ, ನವೀಕೃತ ಹದಿನಾರು ಗದ್ದುಗೆಗಳು, ಶತಾಯುಷಿ ಶ್ರೀ …

Read More »

ಧಾರವಾಡದಲ್ಲಿ ಪಾಲಿಕೆ ಹೆಲ್ತ್ ಇನ್ಸ್ಪೆಕ್ಟರ್‌ಗೆ ಲೋಕಾ ಶಾಕ್…ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್.

ರೊಟ್ಟಿ ಮಷಿನ್ ಪರವಾನಿಗೆ ಕೇಳಲು ಬಂದ ವ್ಯಕ್ತಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವಲಯ ಕಚೇರಿ 1ರ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತರ ಬಲೆಗೆ ಬಿದ್ದ ಹೆಲ್ತ ಇನ್ಸ್ಪೆಕ್ಟರ್ ಹೀನಾ ಕೌಸ‌ರ್ ಅಧಿಕಾರಿಯಾಗಿದ್ದಾರೆ. ಧಾರವಾಡದ ಮಳೆಪ್ಪ ಎಂಬುವವರು ರೊಟ್ಟಿ ಮಷಿನ್‌ಗೆ ಪರವಾನಿಗಿ ನೀಡಲು ಅರ್ಜಿ ಸಲ್ಲಿಸಿದ್ದರು. ಪರವಾನಿಗಿ ನೀಡಲು ಕೌಸರ್ 4ವರೇ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೌಸರ್ ಹೇಳಿದ …

Read More »

ಬೆಳಗಾವಿಯಲ್ಲಿ ಬೃಹತ್ ಉದ್ಯೋಗ ಮೇಳದ ಸಂಭ್ರಮ: 104 ಕಂಪನಿಗಳಿಂದ 19 ಸಾವಿರ ಉದ್ಯೋಗಾವಕಾಶ, ಸಾವಿರಾರು ಅಭ್ಯರ್ಥಿಗಳ ಭಾಗಿ

ಬೆಳಗಾವಿಯ ಎಸ್.ಜಿ. ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಉದ್ಯೋಗಾಕಾಂಕ್ಷಿಗಳ ದಂಡೇ ನೆರೆದಿತ್ತು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದು, ನಿರುದ್ಯೋಗಿ ಯುವಕರಿಗೆ ಆಶಾಕಿರಣವಾಗಿ ಪರಿಣಮಿಸಿದೆ. ಬೆಳಗಾವಿಯ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ಜರುಗಿತು. ವೇದಿಕೆಯ ಮೇಲೆ ಬಿ.ಆರ್. ಪಟಗುಂದಿ, ರವಿ ಬಂಗಾರಪ್ಪ, …

Read More »