Breaking News

ಜಿಲ್ಲೆ

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಮೈಸೂರು: ಇಬ್ಬರು ಯುವ ಪ್ರೇಮಿಗಳು ಜನುಮದ ಜೋಡಿಯಾಗಿ ಪರಸ್ಪರ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದ್ದಾರೆ. ಹಾಗೆ ಪ್ರೇಮಿಗಳು ಕಪಿಲಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಳಿ ನಡೆದಿದೆ. ಕೊನೆಗೆ ತೆಪ್ಪ ನಡೆಸುವ ಅಂಬಿಗರಿಂದ ಪ್ರೇಮಿಗಳ ರಕ್ಷಣೆಯಾಗಿದೆ. ಅಭಿ (19) ಮತ್ತು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯಿಂದ ಆತ್ಮಹತ್ಯೆ ಯತ್ನ ನಡೆದಿದೆ. ಬಾಲಕಿಯು ಚಾಮರಾಜನಗರದ ಕಾಲೇಜು ವಿದ್ಯಾರ್ಥಿನಿಯಾಗಿದ್ದರೆ ಅಭಿ ಪೆಟ್ರೋಲ್ ಬಂಕ್ …

Read More »

ಈಶ್ವರಪ್ಪ ಹೇಳಿದ ಹಾಗೆ ಬೊಮ್ಮಾಯಿ ರಾಜೀನಾಮೆ ಖಚಿತ….ಡಿಕೆಶಿ ವಿಜಯಪುರದಲ್ಲಿ ಹೊಸ ಬಾಂಬ್

ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು. ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು …

Read More »

ಬೆಳಗಾವಿ ಜಿಲ್ಲೆಯ ದುಷ್ಟ ರಾಜಕಾರಣಕ್ಕೆ ಬಿಜೆಪಿ ನಾಯಕರು ಕೊನೆ ಹಾಡುತ್ತಾರೆ ಎಂದು ತಿಳಿದಿದ್ದೇನೆ

ಬೆಳಗಾವಿ: ರಮೇಶ್, ಲಖನ್​ ಗಾಡಿ ಕಳಿಸಿದ ಅಂದ ತಕ್ಷಣ ಹೋಗಬೇಡಿ. ನಮ್ಮ ಪಕ್ಷದ ಮುಖಂಡರು ಈ ಸಂಸ್ಕೃತಿಯನ್ನು ಬಿಟ್ಟುಬಿಡಬೇಕು. ಅರಭಾವಿ ಕ್ಷೇತ್ರದಲ್ಲಿ ಮತದಾರರಿಗೆ ₹10,000 ಮುಂಗಡ ಪಾವತಿ ಮಾಡಿದ್ದಾರೆ ಎಂಬ ಮಾತುಗಳಿವೆ. ಮೂರ್ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಹಾಕುವುದಿಲ್ಲವೆಂಬ ಮಾಹಿತಿ ಬಂದಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಮತದಾರರ ಚೀಟಿ ಪಡೆದು ನಾವೇ ಮತ ಹಾಕುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ. …

Read More »

₹ 20 ಸಾವಿರಕ್ಕೆ ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ!

ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪರೀಕ್ಷಾ ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರುತ್ತಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.   ‘ಮರಿಯಣ್ಣಪಾಳ್ಯದ ಎಂ. ರಾಕೇಶ್ (37), ಹೆಬ್ಬಾಳ ಕೆಂಪಾಪುರದ ಕೆ. ಕೃಷ್ಣ (27), ಕೊತ್ತನೂರಿನ ಹನುಮಂತಪ್ಪ ಲೇಔಟ್‌ನ ತನ್ವಯ್ ದೇಬ್‌ರಾಯ್ (33) ಹಾಗೂ ಎಚ್‌ಬಿಆರ್ ಲೇಔಟ್‌ನ ಹೈದರ್ ಅಲಿ (37) ಬಂಧಿತರು. ಅವರಿಂದ 682 ನಕಲಿ ಅಂಕಪಟ್ಟಿಗಳು ಹಾಗೂ 18 …

Read More »

ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್

ಬೆಂಗಳೂರು: ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದೆ.   ಕೊಪ್ಪಳ ಜಿಲ್ಲೆಯ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ ನಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಬಸನಗೌಡ ಅಲಿಯಾಸ್ ಬಸವರಾಜ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ …

Read More »

ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಗಲಾಟೆ ಶುರು

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದರೊಂದಿಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾನೂನುಗಳನ್ನು ಹಿಂಪಡೆಯುವ ಕುರಿತು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕೆಲವೇ ಸಮಯದಲ್ಲಿ ಕೃಷಿ ಕಾನೂನು ಹಿಂಪಡೆಯುವ ಮಸೂದೆಯನ್ನು ಲೋಕಸಭೆಯು ಅಂಗೀಕರಿಸಲಾಯ್ತು. ಲೋಕಸಭೆಯಲ್ಲಿ ಮಸೂದೆ ಕುರಿತು …

Read More »

ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಚಿಕ್ಕೋಡಿ : ವಿದ್ಯುತ್ ಬಿಲ್ ಕಟ್ಟಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗ್ರಾಹಕನಿಗೆ ಹೆಸ್ಕಾಂ ಎಇಇ ಅಧಿಕಾರಿಯೊಬ್ಬರು ಕಸಗುಡಿಸುವ ಪೊರಕೆಯಿಂದ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಿರಡಿ ಗ್ರಾಮದಲ್ಲಿ ನಡೆದಿದೆ. ಅಪ್ಪಾಸಾಬ್ ಮಕಾನಿ ಎಂಬುವರ ಮೇಲೆ ಹೆಸ್ಕಾಂ ಎಇಇ ಹಾಗೂ ಅವರ ಸಿಬ್ಬಂದಿ ಹಲ್ಲೆ ಮಾಡಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಬಿರಡಿ ಗ್ರಾಮದ ಅಪ್ಪಾಸಾಬ್ ಎಂಬಾತ ಕಳೆದ 1 ವರ್ಷದಿಂದ ವಿದ್ಯುತ್ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡಿದ್ದಾನೆ. …

Read More »

ಕೊಣ್ಣೂರು (ಗೋಕಾಕ): ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ; ಅಭಿನಂದನೆ ಸಲ್ಲಿಸಿದ ಶಾಲಾ ಸಿಬ್ಬಂದಿ

      ಗೋಕಾಕ:  ಕೊಣ್ಣೂರು ಶಾಲಾಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರಿಗೆ  ಶಾಲಾ ಪ್ರಾಚಾರ್ಯರು ಮನವಿ ಮಾಡಿಕೊಂಡ  ಹಿನ್ನೆಲೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರ ಸೂಚನೆ ಮೇರಿಗೆ  ಸತೀಶ ಜಾರಕಿಹೊಳಿ ಪೌಂಡೇಶನ್ ದಿಂದ ಇಂದು ಶಾಲೆಯ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ತಾಲ್ಲೂಕಿನ ಕೊಣ್ಣೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಮಾರು 245 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಬಹು ವರ್ಷಗಳಿಂದ ಶಾಲೆಯೂ ಸುಣ್ಣ-ಬಣ್ಣ ಮಾಡಿಲ್ಲ,  ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ …

Read More »

ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ,ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಭೇಟಿ

ಬೆಳಗಾವಿ: ಕೋವಿಡ್ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಅವರು ರಾಜ್ಯದ ಗಡಿಭಾಗದಲ್ಲಿರುವ ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಗೆ ಭಾನುವಾರ (ನ.28) ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಸರಕಾರದ ಮಾರ್ಗಸೂಚಿ ಪ್ರಕಾರ ನೆರೆಯ ಮಹಾರಾಷ್ಟ್ರ ರಾಜ್ಯದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಪೂರ್ವ ಅವಧಿಯ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ನೆಗೆಟಿವ್ ವರದಿ ಹೊಂದಿದವರನ್ನು ಮಾತ್ರ ರಾಜ್ಯದೊಳಗೆ …

Read More »

ಹುಟ್ಟುಹಬ್ಬದಂದು ಪ್ರೇಯಸಿ ಸಿಗದ ನೋವಿನಲ್ಲಿ ಎಡವಟ್ಟು ಮಾಡಿಕೊಂಡ ಹಾಸನದ ಯುವಕ:

ಹಾಸನ: ಪ್ರೀತಿಸಿದ ಯುವತಿ‌ ಕೈಕೊಟ್ಟಿದ್ದಕ್ಕೆ ಮನನೊಂದ‌ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ. ಈತ ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾಳೆಂದು ಯುವತಿ ವಿರುದ್ಧ ಜೀವಿತ್​ ಆರೋಪಿಸಿದ್ದಾನೆ. ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟು ಹಬ್ಬಕ್ಕೆ ನಾನೇ ಕೇಕ್‌ ಕಟ್ …

Read More »