ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಲ್ಲಿ ಕಾಯಂಗೊಂಡ ಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆಆಧಾರದಲ್ಲಿ ನೇಮಕಗೊಂಡು ನಂತರ ಕಾಯಂಗೊಂಡಿರುವ 1983 ಶಿಕ್ಷಕರು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ನೇಮಕದ ದಿನದಿಂದ ನಿಗದಿಯಾಗಿರುವ ವೇತನವನ್ನು ಯಥಾವತ್ತಾಗಿ ಮುಂದುವರೆಸುವ ಕುರಿತಂತೆ ಶಿಫಾರಸು ಮಾಡಲಾಗಿದೆ. ಕಾಯಂಗೊಂಡ ಗುತ್ತಿಗೆ ನೌಕರರ ಕಾಲಮಿತಿ ಬಡ್ತಿ ಹಾಗೂ ಸ್ಥಗಿತ ವೇತನ ಬಡ್ತಿಯನ್ನು ಎಂದಿನಂತೆ ಮಂಜುರು ಮಾಡಬೇಕು ಎಂದು ಪರಿಶೀಲನಾ ಸಮಿತಿ …
Read More »ವಿಚಾರಣೆಗೆ ಹಂಸಲೇಖ ಆಗಮನ; ಠಾಣೆ ಬಳಿ ಬೆಂಬಲಿಗರೊಂದಿಗೆ ನಟ ಚೇತನ್ ಧರಣಿ
ಬೆಂಗಳೂರು: ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಕೋಳಿ ತಿಂತಾರಾ? ಕುರಿ ರಕ್ತ ಹುರಿದು ಕೊಟ್ಟರೆ ತಿಂತಾರಾ? ಎಂದು ಪ್ರಶ್ನಿಸಿದ್ದ ಹಂಸಲೇಖಾ ಇಂದು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದ್ರ ಬೆನ್ನಲ್ಲೇ ಬೆಂಬಲಿಗರೊಂದಿಗೆ ಠಾಣೆಗೆ ಆಗಮಿಸಿದ ಚೇತನ್ ಅವರನ್ನು ಇತರ ಪ್ರತಿಭಟನಾಕಾರರ ರೀತಿಯಲ್ಲೇ ತಡೆದಿದ್ದಾರೆ. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಚೇತನ್ ತಮ್ಮ ಬೆಂಬಲಿಗರೊಂದಿಗೆ ಧರಣಿಗೆ ಕುಳಿತಿದ್ದಾರೆ. ಈಗಾಗಲೇ ಎರಡು ಬಾರಿ ವಿಚಾರಣೆ ತಪ್ಪಿಸಿಕೊಂಡಿದ್ದ ಹಂಸಲೇಖ, ಇಂದು ನಗರದ ಬಸವನಗುಡಿ …
Read More »ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಂಸಲೇಖಾ:!?
ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ ಪೊಲೀಸ್ ಠಾಣೆಗೆ ಬರುತ್ತೇನೆ ಎಂದು ನಟ ಚೇತನ್ ಪೋಸ್ಟ್ ಮಾಡಿದ್ದು, ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿರುವ ಭಜರಂಗದಳ ಕಾರ್ಯಕರ್ತರು ಹಂಸಲೇಖಾ ಜೊತೆ ಠಾಣೆಗೆ ನಟ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ …
Read More »ಬಾಗಲಕೋಟೆ ಸಾಧಕನ 15 ವರ್ಷಗಳ ಸಮಾಜಮುಖಿ ಸೇವೆಗೆ ಹಲವು ಪ್ರಶಸ್ತಿ
ಬಾಗಲಕೋಟೆ: ನಗರದ ಡಾ. ಪ್ರಹ್ಲಾದ ಭೋವಿ ಎಂಬುವರು ಕಳೆದ 15 ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಾ, ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡುವ ಜೊತೆಗೆ ರಾಜ್ಯದ ವಿವಿಧ ಪ್ರಶಸ್ತಿ ಪಡೆದು ಗಮನ ಸೆಳೆದಿದ್ದಾರೆ. ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಡೆಸಿಕೊಂಡು ಬರುವುದರ ಜೊತೆ ಹಲವು ಸಾಧನೆಗೈದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ, ವಯಸ್ಕರಿಗೆ ಅಕ್ಷರ ಜ್ಞಾನದ ಜಾಗೃತಿ ಮೂಡಿಸಿದ್ದಾರೆ. ಹೆಚ್ಐವಿ ಸೋಂಕು ತಡೆಯುವಂತೆ ಗ್ರಾಮೀಣ ಪ್ರದೇಶಗಳಲ್ಲಿ …
Read More »ಅಪೌಷ್ಟಿಕತೆ, ರಕ್ತಹೀನತೆ.. ರಾಜ್ಯದ 14 ಲಕ್ಷ ಶಾಲಾ ಮಕ್ಕಳಿಗೆ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ
ಬೆಂಗಳೂರು: ಅಪೌಷ್ಟಿಕತೆ, ರಕ್ತಹೀನತೆ ಮತ್ತು ಪ್ರೊಟೀನ್ ಕೊರತೆಯಿಂದ ಬಳಲುತ್ತಿರುವ ಆರರಿಂದ 15 ವರ್ಷದೊಳಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. ಉತ್ತರ ಕರ್ನಾಟಕ ಭಾಗದ 7 ಜಿಲ್ಲೆಗಳ ವಿದ್ಯಾರ್ಥಿಗಳು ಕೊರತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕಾರ್ಯಕ್ರಮದ ಅಡಿ ಪ್ರಯೋಜನ ಪಡೆಯಲಿದ್ದಾರೆ. ಡಿಸೆಂಬರ್ 1ರಿಂದ ಕಾರ್ಯಕ್ರಮ ಆರಂಭ: ಬೀದರ್, ರಾಯಚೂರು, ಕಲಬುರಗಿ, …
Read More »ಫಡಣವೀಸ್ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್ ನಾಯಕ ಭೇಟಿ, ಕುತೂಹಲ
ಪಣಜಿ: ಗೋವಾದ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು ವಾಸ್ತವ್ಯವಿದ್ದ ಹೋಟೆಲ್‌ಗೆ ಗೋವಾ ಕಾಂಗ್ರೆಸ್ ಘಟಕದ ಕಾರ್ಯಾಧ್ಯಕ್ಷರು ಸೋಮವಾರ ಮಧ್ಯರಾತ್ರಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಗೋವಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿರುವ ಹೊತ್ತಿನಲ್ಲಿಯೇ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಲೊರೆಂಕೊ ಅವರು ಭೇಟಿ ನೀಡಿದ್ದಾರೆ. ಈ ಭೇಟಿ ಕುರಿತಂತೆ ಹೋಟೆಲ್ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಚರ್ಚಿಸಲು ಅವರು ನಿರಾಕರಿಸಿದ್ದರು. ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ …
Read More »ಮೇ ಬಳಿಕವಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆ?
ಬೆಂಗಳೂರು: ಮುಂದಿನ ವರ್ಷದ ಮೇ ಬಳಿಕವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲು ಸಾಧ್ಯ! ಹೌದು, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಗಡಿ ನಿರ್ಣಯ, ಸದಸ್ಯರ ಸಂಖ್ಯೆ ತೀರ್ಮಾನ, ಮೀಸಲಾತಿ ನಿಗದಿ ಆರಂಭ ವಾ ಗಿದ್ದು, ಮುಂದಿನ ಎಪ್ರಿಲ್ ವೇಳೆಗೆ ಇದರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರವೇ ಈ ಎರಡೂ ಚುನಾ ವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ರಚಿಸಲಾಗಿರುವ “ಕರ್ನಾಟಕ ಪಂಚಾಯತ್‌ರಾಜ್ ಕ್ಷೇತ್ರಗಳ …
Read More »ಕಾಂಗ್ರೆಸ್ ಎಂಎಲ್ಸಿ ಅಭ್ಯರ್ಥಿಗಳ ವಿವರ
ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪ್ರಪ್ರಥಮವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊನ್ನೆಮೊನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದೀಗ ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಬಂಧಿ ಎಸ್. ರವಿ ಹಾಗೂ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಬಸವರಾಜ ಹಟ್ಟಿಹೊಳಿ ಸೇರಿ 20 ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅನುಮೋದಿಸಿದ್ದು, ಪಕ್ಷ ಆ ಪಟ್ಟಿಯನ್ನು ಅಧಿಕೃತವಾಗಿ …
Read More »ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ
ಬೆಳಗಾವಿ ಉತ್ತರ ಮಂಡಳದ ವತಿಯಿಂದ ಮಹಾಶಕ್ತಿ ಕೇಂದ್ರದ ನಂ 5 ಕಣಬರ್ಗಿಯಲ್ಲಿ ಭೂತ ಮಟ್ಟದಲ್ಲಿ ಸಭೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅನಿಲ ಬೆನಕೆಯವರು, ಮಂಡಲದ ಅಧ್ಯಕ್ಷರು ಶ್ರೀ ಪಾಂಡುರಂಗ ದಾಮನೆಕರ,ಬೆಳಗಾವಿ ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಕಾಶ ಜಿ ಮಹಾನಗರದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಗೇಂದ್ರಗೌಡ ಪಾಟೀಲ, ಉತ್ತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ವಿಜಯ ಕೊಡಗಾನೂರ, …
Read More »ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧ,5 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಸದಸ್ಯರು ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಎರತೊಡಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಶಕ್ತಿಪ್ರದರ್ಶನ ತೋರಿಸಲು ಸಿದ್ಧತೆ ನಡೆಸಿದ್ದಾರೆ. ಮಂಗಳವಾರ 23ರಂದು ಅಪಾರ ಸಂಖ್ಯೆಯಲ್ಲಿ ಗೋಕಾಕಿನ ಕಿಂಗ್ ಮೇಕರ್ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಗೋಕಾಕ, ಅರಭಾಂವಿ, ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ, ಚಿಕ್ಕೋಡಿ, ಖಾನಾಪುರ, ಯಮಕನಮರಡಿ, ಬೈಲಹೊಂಗಲ, ರಾಮದುರ್ಗ ಕ್ಷೇತ್ರ ಸೇರಿ ಎಲ್ಲ ಕಡೆಗಳಿಂದಲೂ ಸಾಹುಕಾರ ಬೆಂಬಲಿಗರು ನಾಮಪತ್ರ ಸಲ್ಲಿಸಲು …
Read More »
Laxmi News 24×7