ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ, ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಅವರು ಕಾಗವಾಡದ ಕಾಂಗ್ರೆಸ್ ನಾಯಕ ಭರಮಗೌಡ (ರಾಜು) ಕಾಗೆ ಅವರನ್ನು ಗುರುವಾರ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ. ಹಲವು ಚರ್ಚೆಗಳಿಗೆ ಗ್ರಾಸವಾಗಿದೆ. ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್ ಪಟ್ಟಣದ ನಿವಾಸದಲ್ಲಿ ಕಾಗೆ ಅವರನ್ನು ರಮೇಶ ಭೇಟಿಯಾದರು. ‘ಸಹೋದರ ಲಖನ್ ಜಾರಕಿಹೊಳಿ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು ನೀವು ಬೆಂಬಲ ಕೊಡಬೇಕು’ ಎಂದು ಕೋರಿದ್ದಾರೆ ಎನ್ನಲಾಗುತ್ತಿದೆ. ಬಳಿಕ …
Read More »ಮಳೆಗೆ ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು;
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದಂತೆ ಬೆಂಗಳೂರಿನಲ್ಲಿ ಜಿಟಿ- ಜಿಟಿ ಮಳೆ ಇತ್ತು. ಆದರೆ ನಿನ್ನೆ (ನವೆಂಬರ್ 18) ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆ ಸುರಿದಿದೆ. ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟದ (Karnataka rains) ಪರಿಣಾಮ ಕೆಲವು ಕಡೆ ರಸ್ತೆಗಳು ಕೆರೆಯಂತಾದರೆ ಮತ್ತೆ ಹಲವು ಕಡೆ ಜನರ ಮನೆಗಳಿಗೆ ನೀರು ನುಗ್ಗಿದೆ. ಬೆಂಗಳೂರು ಸೇರಿದಂತೆ ಹೊರವಲಯದಲ್ಲೂ ನಿನ್ನೆ ಸಂಜೆ ಧಾರಾಕಾರವಾಗಿ ಮಳೆ ಸುರಿದಿದೆ. ನಗರದ ಬಹುಪಾಲು ರಸ್ತೆಗಳು ಕೆರೆಯಂತಾಗಿ ಕೆಲಸ …
Read More »ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಡಿಸೆಂಬರ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನವೆಂಬರ್ 26 ರೊಳಗೆ ಮೀಸಲಾತಿ ಅಧಿಸೂಚನೆ ಹೊರಡಿಸುತ್ತೇವೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ …
Read More »ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ
ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ ಯಮಕನಮರಡಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. …
Read More »ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ
ಬೆಳಗಾವಿ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕತ್ವ ಅಭ್ಯರ್ಥಿಯಾಗಿ ಅನಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಜಾರಕಿಹೊಳಿ ಸಹೋದರರಾದ ರಮೇಶ್ ಮತ್ತು ಬಾಲಚಂದ್ರ ಅವರು ತಮ್ಮ ಕಿರಿಯ ಸಹೋದರ ಲಖನ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು …
Read More »ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್
ಬೆಳಗಾವಿ: ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್ ನಡೆದ ಆರೋಪ ಕೇಳಿಬಂದಿದೆ. ಕಮ್ಯೂನಿಟಿ ಹೆಲ್ತ್ ಆಫಿಸರ್ಸ್ ಹುದ್ದೆಗಳ ನೇಮಕಾತಿ ವೇಳೆ ವಂಚನೆ ನಡೆದಿರುವ ಆರೋಪವಿದೆ. ಬೆಳಗಾವಿ ಜಿಲ್ಲೆಯಲ್ಲಿ 476 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 1600 ಅಭ್ಯರ್ಥಿಗಳು ಪರೀಕ್ಷೆ ಬರೆದು 1267 ಮಂದಿ ಪಾಸ್ ಆಗಿದ್ದರು. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆ ಪರಿಶೀಲನೆ ನಡೆಸಿದ್ದ ಸದರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಒಂದು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿದ್ದರು. …
Read More »ಗ್ರಾಮ ಪಂಚಾಯತ ಪಿಡಿಓ ಹಾಗೂ ಕಾರ್ಯದರ್ಶಿ ಎಸ್‍ಸಿ ಎಸ್‍ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ: ಅಂಬೇಡ್ಕರ್ ಶಕ್ತಿ ಸಂಘಆರೋಪ.
ಸುಳಗಾ(ಉ) ಗ್ರಾಮ ಪಂಚಾಯತ ಪಿಡಿಓ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತ ಅನುದಾನವನ್ನು ದುರ್ಬಳಕೆ ಮಾಡಿದ್ದಾರೆ. ಇನ್ನು ಎಸ್‍ಸಿ ಎಸ್‍ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಲ್ಲ ಎಂದು ಅಂಬೇಡ್ಕರ್ ಶಕ್ತಿ ಸಂಘದ ಸದಸ್ಯರು ಆರೋಪಿಸಿದ್ರು. ಇನ್ನು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿದರು. ಸುಳಗಾ (ಉ)ಗ್ರಾಮ ಪಂಚಾಯತ ಪಿಡಿಓ ಪೂನಂ ಗಾಡಗೆ ಹಾಗೂ ಕಾರ್ಯದರ್ಶಿ ಕೇವಲ ತಡೆಗೋಡೆ ಹಾಗೂ ಒಳಚರಂಡಿ ನಿರ್ಮಾಣಕ್ಕೆಂದು ಅನುದಾನವನ್ನು ಬಳಕೆ ಮಾಡಿದ್ದಾರೆ. ಒಂದೇ …
Read More »ರಾಜ್ಯ ವಕ್ಫ್ ಮಂಡಳಿಗೆ ಪ್ರಥಮ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯಾದ ಮಹಮದ್ ಷಫಿ ಸಾ-ಆದಿ ಆಯ್ಕೆಯಾಗಿದ್ದು, ಅವರನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ. ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಹಮದ್ ಷಫಿ ಸಾ-ಆದಿಯವರನ್ನು ಅಭಿನಂದಿಸಿ ಮಾತನಾಡಿದ ಅವರು, ಯಾವುದೇ ಸಮುದಾಯ ಮೊದಲು ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸರ್ವಾಂಗೀಣ …
Read More »ಉಚಿತ ಬಾಲಕಿಯರ ಹಾಸ್ಟೆಲ್‌ಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು:ಎಸ್‌ಆರ್‌ಎನ್‌ಜಿ ಸಂಪನಪ್ಪ ಚಾರಿಟೀಸ್(SRNG Sampanappa Charities) ಬೆಂಗಳೂರಿನಲ್ಲಿರುವ ತಮ್ಮ ಉಚಿತ ಬಾಲಕಿಯರ ಹಾಸ್ಟೆಲ್‌ಗೆ ( free girls hostel) ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಹಾಸ್ಟೆಲ್ ಗಿರಿನಗರ 2 ನೇ ಹಂತದಲ್ಲಿದೆ . ಇದು 55% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಮತ್ತು ನಗರದ ವಿವಿಧ ಕಾಲೇಜುಗಳಲ್ಲಿ ಡಿಪ್ಲೊಮಾ,(diploma) ಪದವಿ ಅಥವಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಮುಂದುವರಿಸಲು ಬಯಸುವ ಹುಡುಗಿಯರಿಂದ ಅರ್ಜಿಗಳನ್ನು ಸ್ವೀಕರಿಸುತ್ತದೆ. ಅರ್ಜಿಗಳನ್ನು ನವೆಂಬರ್ 23 ರಿಂದ ಡಿಸೆಂಬರ್ 15 ರವರೆಗೆ ರಜಾದಿನಗಳನ್ನು …
Read More »ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಮಾಡಿ ಆದೇಶ ಹೊರಡಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraja Bommai) ಅವರ ಕಚೇರಿಗೆ ವರ್ಗಾವಣೆ ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಮನವಿ ಸಲ್ಲಿಸುತ್ತಿರುವುದು ಖುದ್ದು ಸಿಎಂಗೆ ದೊಡ್ಡ ತಲೆ ನೋವು ಆಗಿದೆ. ಈ ನಡುವೆ ವರ್ಗಾವಣೆ ನೀತಿಯ ಪ್ರಕಾರ (transfer policy) ಎಲ್ಲಾ ವೃಂದದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳನ್ನು ಮುಖ್ಯಮಂತ್ರಿಗಳ ಅನುಮೋದನೆಗೆ ಸಲ್ಲಿಸಲಾಗುತ್ತಿದೆ (Chief Minister for approval.). …
Read More »
Laxmi News 24×7