ಬೆಂಗಳೂರು: ಇತ್ತೀಚಿಗೆ ನಟಿ ರಕ್ಷಿತಾ ಅವರ ತಮ್ಮ ನಾಯಕ ನಟನಾಗಿ ಅಭಿನಯ ಮಾಡುತ್ತಿರುವ ಸಿನಿಮಾವೊಂದರ ಸಂಭ್ರಮದ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆಯಲ್ಲಿ ಅಲ್ಲಿದ್ದ ನಟಿ ರಕ್ಷಿತಾ , ನಟಿ ರಚಿತರಾಮ್, ಆಂಕರ್ ಅಕುಲ್ ಬಾಲಾಜಿ ಮಾಡಿರುವ ಯಡವಟ್ಟು ಈಗ ವಿವಾದಕ್ಕೆ ಕಾರಣವಾಗಿದೆ. ಹೌದು, ಚಿತ್ರತಂಡದವರಿಂದ ಇದೇ ವೇಳೇ ನಟ ಪುನೀತ್ ಅವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿದರು ಅರ್ಪಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರದ ಎದುರು ಶಾಪೆಂನ್ ಬಾಟಲ್ ಒಪನ್ …
Read More »ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ
ಬೆಳಗಾವಿ ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …
Read More »ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ
M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …
Read More »ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ.
ಬೆಳಗಾವಿ: ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಯನ್ನು ಬೆಳಗಾವಿ ಜಿಲ್ಲಾಡಳಿತ ಮುಂದುವರೆಸಿದೆ. ರಾಜ್ಯ ಸರ್ಕಾರದ ಆದೇಶದಂತೆ ಬೈಪಾಸ್ ಕಾಮಗಾರಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ರಸ್ತೆ ಕಾಮಗಾರಿಗಾಗಿ ಭೂ ಸ್ವಾಧೀನ ಪಡಿಸಿಕೊಂಡಿರುವ 825 ರೈತರಿಗೆ ಒಟ್ಟು 25 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಬೆಳೆಗಳನ್ನು ನಾಶ ಮಾಡದೇ ಕಾಮಗಾರಿ ನಡೆಸುವುದಾಗಿ ರೈತರಿಗೆ ಭರವಸೆ ನೀಡಲಾಗಿದೆ ಎಂದರು. ಇನ್ನು ನಿನ್ನೆ ನಡೆದ ರೈತರ ಪ್ರತಿಭಟನೆ ವೇಳೆ ಯುವಕನೊಬ್ಬ ಬೆಂಕಿ …
Read More »ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ
ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ …
Read More »ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಂದು ವೇಳೆ ಭೂಮಿ ತೆಗೆದುಕೊಂಡರೆ ಭೂಮಿಯ ಬದಲಾಗಿ ಭೂಮಿಯನ್ನೇ ಕೊಡಬೇಕು ಇಲ್ಲದಿದ್ರೆ ಉಪವಾಸ ಸತ್ಯಾಗ್ರಹ
ಬೆಳಗಾವಿ ತಾಲೂಕಿನ ಮಚ್ಛೆಯಲ್ಲಿ ರೈತರ ಮೇಲಿನ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಂದು ವೇಳೆ ಭೂಮಿ ತೆಗೆದುಕೊಂಡರೆ ಭೂಮಿಯ ಬದಲಾಗಿ ಭೂಮಿಯನ್ನೇ ಕೊಡಬೇಕು ಇಲ್ಲದಿದ್ರೆ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು. ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ …
Read More »ಅಪ್ಪು ನಿಧನದ ಸುದ್ದಿ ಶಿವಣ್ಣನಿಗೆ ಹೇಗಾಯ್ತು ಗೊತ್ತಾ..? ಆ ಕರಾಳ ಕ್ಷಣದ ಬಗ್ಗೆ ಮಾತಾಡಿದ್ದಾರೆ..!
ಬೆಂಗಳೂರು: . ಒಂದು ಕಡೆ ಭಜರಂಗಿ 2 ಭರ್ಜರಿಯಾಗಿ ಓಡ್ತಾ ಇತ್ತು.. ಆ ಸಂತೋಷ ಖುಷಿಯಲ್ಲಿ ಅಭಿಮಾನಿಗಳು ತೇಲ್ತಾ ಇದ್ರು. ಅಭಿಮಾನಿಗಳ ನಡುವೆಯೇ ಶಿವಣ್ಣ ಕೂಡ ಕೂತು ಎಂಜಾಯ್ ಮಾಡ್ತಾ ಇದ್ರು. ಆ ಖುಷಿಯ ನಡುವೆ ಬರ ಸಿಡಿಲು ಬಡಿದಂತೆ ಆದದ್ದು ಅಪ್ಪು ಇನ್ನಿಲ್ಲ ಅನ್ನೋ ಸುದ್ದಿ. ಹೌದು, ಸಿನಿಮಾ ನೋಡುತ್ತಿದ್ದ ಎಲ್ಲರಿಗೂ ಒಂದು ಕ್ಷಣ ದಿಗ್ಬ್ರಮೆಯುಂಟು ಮಾಡಿತ್ತು. ಸುಮಾರು 11 ಗಂಟೆಗೆ ಅಪ್ಪು ಆಸ್ಪತ್ರೆ ಸೇರಿದ್ರು. ಅದಾಗಲೇ ಇಲ್ಲ …
Read More »ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.
ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ …
Read More »ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ
ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್‌ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು :ಬಸವರಾಜ ಬೊಮ್ಮಾಯಿ
ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ …
Read More »
Laxmi News 24×7