Breaking News

ಜಿಲ್ಲೆ

ಈ ಸಾವು ನ್ಯಾಯವೇ..? ಪಾತ್ರೆ ತೊಳೆಯಲು ಇಟ್ಟಿದ್ದ ಬಕೆಟ್​ನಲ್ಲಿ ಬಿದ್ದು ಪುಟ್ಟ ಕಂದಮ್ಮ ಸಾವು

ಚಿಕ್ಕೋಡಿ : ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್​ನಲ್ಲಿ ಒಂದೂವರೆ ವರ್ಷದ ಮಗು ಬಿದ್ದು ಸಾವು ಸಂಭವಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಭವಿಸಿದೆ. ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಇವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೆಟ್​ನಲ್ಲಿ ಆಟ ಆಡುತ್ತಾ ಬಕೆಟ್​​ಗೆ ಬಿದ್ದು ತನ್ನ ಪ್ರಾಣವನ್ನು …

Read More »

ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.

ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು. ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ …

Read More »

ಬೆಳಗಾವಿ :ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ, ಚಾಕೊಲೆಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್‌ ನೀಡಿ ಬರಮಾಡಿಕೊಳ್ಳಲಾಯಿತು

ಬೆಳಗಾವಿ: ಜಿಲ್ಲೆಯ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 678 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 956 ಸೇರಿ 1,634 ಶಾಲೆಗಳಲ್ಲಿ 1-5ರಿಂದ ತರಗತಿಗಳು ಸೋಮವಾರ ‍ಪುನರಾರಂಭಗೊಂಡವು. ಶೇ 50ರಷ್ಟು ವಿದ್ಯಾರ್ಥಿಗಳು ಆಫ್‌ಲೈನ್‌ ಹಾಜರಾಗಲು ಸರ್ಕಾರ ಅವಕಾಶ ನೀಡಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಿಕ್ಷಕರು ಮತ್ತು ಸಿಬ್ಬಂದಿ ಚಿಣ್ಣರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಕೋವಿಡ್ ಮಾರ್ಗಸೂಚಿ ಪಾಲಿಸಿ ತರಗತಿಗಳನ್ನು ನಡೆಸಲು ಕ್ರಮ ವಹಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಹಿಂಡಲಗಾ …

Read More »

ಹಾನಗಲ್‌ನಲ್ಲಿ ಮತ್ತೆ 3 ದಿನ ಸಿಎಂ ಮೊಕ್ಕಾಂ

ಬೆಂಗಳೂರು: ಹಾನಗಲ್‌ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರದಿಂದ ಮೂರು ದಿನ ಹಾನಗಲ್‌ನಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ರವಿವಾರ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಪರ ಪ್ರಚಾರ ನಡೆಸಿ, ಹುಬ್ಬಳ್ಳಿಗೆ ಆಗಮಿಸಿದ್ದ ಅವರು ಸೋಮವಾರದಿಂದ ಹಾನಗಲ್‌ನಲ್ಲಿ ನಿರಂತರ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆಂದು ತಿಳಿದು ಬಂದಿದೆ. ಬಿಜೆಪಿಯ ಗೆಲುವಿನ ಅಂತರವನ್ನು ಹೆಚ್ಚಿಸುವ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಲು ಸಿಎಂ ಈ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬಿಎಸ್‌ವೈ …

Read More »

ಕಿತ್ತೂರು ರಾಣಿ ಚನ್ನಮ್ಮನಿಂದಾಗಿ ಅಧಿಕಾರ ಹೋದರೆ ಸಂತಸಪಡುವೆ: ಸಿ.ಎಂ ಬೊಮ್ಮಾಯಿ

ಬೆಳಗಾವಿ: ‘ಕಿತ್ತೂರು ರಾಣಿ ಚನ್ನಮ್ಮನ ಸಲುವಾಗಿ ಯಾವುದೇ ಮೂಢನಂಬಿಕೆ ನನಗೆ ಅಡ್ಡಬರುವುದಿಲ್ಲ. ಚನ್ನಮ್ಮನ ಸಲುವಾಗಿ ಅಧಿಕಾರ ಹೋದರೆ ಬಹಳ ಸಂತೋಷಪಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಕಿತ್ತೂರಿಗೆ ಬಂದ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯಕ್ಕೆ ಸಡ್ಡು ಹೊಡೆದಿದ್ದೀರಿ’ ಎಂಬ ಪ್ರಶ್ನೆಗೆ, ‘ಚಾಮರಾಜನಗರಕ್ಕೆ ಹೋಗಬೇಡ ಎಂದಿದ್ದರು ಹೋಗಿದ್ದೆ. ಕಿತ್ತೂರಿಗೆ ಬರಬೇಡ ಎಂದಿದ್ದರು ಬಂದಿದ್ದೇನೆ. ಹಿಂದೆ ಕಾಕತಾಳೀಯವಾಗಿ …

Read More »

ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಬಗ್ಗೆ ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ!

ವಿಜಯಪುರ, ಅ. 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದ್ದುಕೊಳ್ಳುವ ಯೋಗ್ಯತೆ ಇಲ್ಲವಾ? ಯಾಕೆಂದರೆ ಹೇಳುವ ಮೂಲಕ ಪರೋಕ್ಷ ವಾಗ್ದಾಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಉಪ ಚುನಾವಣೆ ಅತ್ಯಂತ ಪ್ರತಿಷ್ಠೆಯ ವಿಷಯವಾಗಿದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎದುರಾಗಿರುವ ಸವಾಲು ಎದುರಿಸಲು ಉಪ ಸಮರ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ ಮಿಂಚಿನ ಸಂಚಾರ ನಡೆಸಿ ಪ್ರಚಾರ ಮಾಡುತ್ತಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ಬೆಳಗಾವಿ: ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮನ ಸೈನ್ಯದ ವಿಜಯೋತ್ಸವದ ಸವಿ ನೆನಪಿಗಾಗಿ ಆಚರಿಸಲ್ಪಡುವ ಕಿತ್ತೂರ ಉತ್ಸವಕ್ಕೆ ಈಗ ಬೆಳ್ಳಿ ಹಬ್ಬದ ಸಂಭ್ರಮ. ಕೊರೊನಾದ ಸಂಕಷ್ಟದ ಸಮಯದಲ್ಲೂ ಎರಡು ದಿನಗಳ ಕಾಲ ಉತ್ಸವವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆಗಳು ನಡೆದಿವೆ. ಉತ್ಸವದಲ್ಲಿ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳನ್ನು ಜನರ ಮನತಣಿಸಲಿವೆ. ಸೋಮವಾರ ಬೆಳಗಾವಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ

ಬೆಳಗಾವಿ: ಸತತವಾಗಿ ಕಾಡುತ್ತಲೇ ಇರುವ ಕೊರೊನಾ ಹಾವಳಿ ನಡುವೆ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಇಡೀ ಕಿತ್ತೂರು ಸಂಸ್ಥಾನ ಸಜ್ಜಾಗಿದ್ದು, ಜಿಲ್ಲಾಡಳಿತ ಕೊರೊನಾ ಮಾರ್ಗಸೂಚಿ ಅನ್ವಯ ಎರಡು ದಿನಗಳ ಉತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಉತ್ಸವದ ಈ ಬಾರಿಯ ವಿಶೇಷ ಆಕರ್ಷಣೆ ಎಂದರೆ ಬಹಳ ವರ್ಷಗಳ ನಂತರ ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆಗೆ ಬರುತ್ತಿದ್ದಾರೆ. ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆ ಮಾತುಗಳಿಗೆ ಕಿವಿಗೊಡದೆ ಸಿಎಂ ಬಸವರಾಜ ಬೊಮ್ಮಾಯಿ ಉತ್ಸವದ …

Read More »

ಈ ಬಾರಿ ಕಿತ್ತೂರು ಉತ್ಸವದ complete details

ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮ ಉತ್ಸವವು ಅ.೨೩ ಹಾಗೂ ೨೪ ರಂದು ಜರುಗಲಿದೆ. ಈ ಬಾರಿ ಕಿತ್ತೂರು ಉತ್ಸವದ (೨೫ ವರ್ಷ) ಬೆಳ್ಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅ.೨೩ ರಂದು ಕಿತ್ತೂರಿನ ಕೋಟೆ ಆವರಣದಲ್ಲಿ ಸಾಯಂಕಾಲ ೭ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »