Breaking News

ಜಿಲ್ಲೆ

ಬಿಜೆಪಿಯಿಂದ 40 ಜನ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ..- ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ

ಬೆಳಗಾವಿ: ಬಿಜೆಪಿಯಿಂದ ಶೀಘ್ರವೇ 40 ಜನ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ ಒಬ್ಬರೊಬ್ಬರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …

Read More »

ಬಿಜೆಪಿ ಗೆಲ್ಲಿಸಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದರಾಮಯ್ಯ

ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು. ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು …

Read More »

ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ 17 ಗ್ರಾಮಗಳ ರೈತರು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬಿಳಿ ಪಂಚೆ, ಶಾಲು, ಟೋಪಿ ಮತ್ತು ಕೋಲು ಹಿಡಿದು ಗಾಂಧಿ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವರಾಮ ಕಾರಂತ ಬಡಾವಣೆಗಾಗಿ ಬಿಡಿಎ …

Read More »

ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಸಮೀಪದಲ್ಲೇ ಸರ್ಕಾರಿ ಸೇವೆ ಒದಗಿಸಲು ಗ್ರಾಪಂಗಳಲ್ಲಿ ನಾಗರಿಕ ಸೇವಾ ಕೇಂದ್ರ ಸ್ಥಾಪನೆ

ಬೆಂಗಳೂರು: ರಾಜ್ಯದ ಗ್ರಾಮೀಣ ಜನರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗೆ ಒಂದು ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಾಗರಿಕ ಸೇವಾ ಕೇಂದ್ರ ಆರಂಭಿಸುವಂತೆ ಇ -ಆಡಳಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇ ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಲ್ಲಾ ಗ್ರಾಮ ಪಂಚಾಯಿತಿಗಳ …

Read More »

ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ

ಗೋಕಾಕ: ನಾಡಿ ನಾದ್ಯಂತ ನಾಡಿನ ಪಿತಾಮಹ ಮಹಾತ್ಮ ಗಾಂಧೀಜಿ ಯವರ ಜಯಂತಿ ಆಚರಣೆ ಮಾಡಲಾಗುತ್ತಿದೆ . ಇಂದು ಶ್ರೀ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರ್ಮನರಾದಂತ ಸಂತೋಷ್ ಜಾರಕಿಹೊಳಿ ಅವರ ಮುಂದಾಳತ್ವದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ ಫ್ಯಾಕ್ಟರಿ ನಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಈ ಒಂದು ಸಂದರ್ಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಸೇರಿದಂತೆ ಕಾರ್ಖಾನೆಯ ಮುಖ್ಯ ಅಧಿಕಾರಿ ಅಧಿಕರಾವ ಪಾಟೀಲ ಸೇರಿದಂತೆ ಇನ್ನಿ ತರ ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More »

ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ

      ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು.   ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ …

Read More »

ಹಾನಗಲ್ ಉಪಚುನಾವಣೆ: ರೇಸ್​ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!

ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್​ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್​ ರೇಸ್​ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್​ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …

Read More »

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …

Read More »

ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್‌ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸ್‌ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …

Read More »

ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …

Read More »