ಬೆಂಗಳೂರು: ಒಂಭತ್ತು ವರ್ಷದ ಹಿಂದಿನ ಪ್ರಕರಣವೊಂದನ್ನ ಪೊಲೀಸರು ಬೇಧಿಸಿದ್ದಾರೆ, ಕುಡುಕನ ಸೋಗಿನಲ್ಲಿ ಹೋಗಿ ಆರೋಪಿಯನ್ನ ಬಂಧಿಸಿದ್ದಾರೆ. ಟ್ರ್ಯಾಕ್ಟರ್ ಓಡಿಸುತ್ತಿದ್ದ ಆಂಥೋನಿ ಎಂಬಾತ ಆಟೋಗೆ ಡಿಕ್ಕಿಹೊಡೆದು ಪರಾರಿಯಾಗಿದ್ದನಂತೆ. ಘಟನೆಯಲ್ಲಿ 8 ವರ್ಷದ ಕೌಶಲ್ ಕುಮಾರ್ ಎಂಬಾತ ಮೃತಪಟ್ಟಿದ್ದ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿಗೆ 10 ತಿಂಗಳು 15 ದಿನ ಜೈಲು ಶಿಕ್ಷೆಯಾಗಿತ್ತು. ಆತನಿಗೆ ಶಿಕ್ಷೆ ಪ್ರಕಟ ಆಗ್ತಿದ್ದಂತೆ ಆತ ತಲೆಮೆರೆಸಿಕೊಂಡಿದ್ದ. ಬಳಿಕ ವಿಳಾಸ ಬದಲಿಸಿಕೊಂಡು …
Read More »ಸರಕಾರಿ ಕಾಲೇಜುಗಳಲ್ಲಿ ದಾಖಲಾತಿ ದಾಖಲೆ!
ಬೆಂಗಳೂರು: ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಪ್ರವೇಶಾತಿ ಹೊಸ ದಾಖಲೆ ಸೃಷ್ಟಿಸಿದ್ದು, ಉನ್ನತ ಶಿಕ್ಷಣದ ದಾಖಲಾತಿಯೂ ಹೆಚ್ಚಿದೆ. ದ್ವಿತೀಯ ಪಿಯುಸಿಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ರುವುದರಿಂದ ಪದವಿ, ವೃತ್ತಿಪರ ಕೋರ್ಸ್‌ಗಳಲ್ಲಿಯೂ ದಾಖಲಾತಿ ಹೆಚ್ಚಲಿದೆ ಎಂಬ ನಿರೀಕ್ಷೆಯನ್ನು ಈ ಹಿಂದೆಯೇ ಸರಕಾರ ಮಾಡಿತ್ತು. ಈಗ ಸರಕಾರಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್ ಮೊದಲ ವಾರದ ವರೆಗೂ ಅವಕಾಶ ನೀಡಲಾಗಿದೆ. ರಾಜ್ಯದ 330 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ …
Read More »ನಿಲ್ಲದ ಮಳೆ ಅಬ್ಬರ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
Karnataka Rain: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರಿನಲ್ಲಿ ಇಂದು ಒಣ ಹಲವೆ ಇರಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಕಣಕ್ಕೆ!
ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಅಕ್ಟೋಬರ್ 30ರಂದು ನಡೆಯಲಿರುವ ಎರಡೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಿಡದಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಹಾಗೆ ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ …
Read More »ಹಾನಗಲ್, ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಭಯ್ಯಾಪುರ
ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಅಮರೇಗೌಡ ಭಯ್ಯಾಪುರ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರು ಬಿಜೆಪಿಯ ಆಡಳಿತ ಮತ್ತು ಬೆಲೆ ಹಗರಣ, ರೈತರ ಮೇಲಿನ ದೌರ್ಜನ್ಯಕ್ಕೆ ಬೇಸತ್ತಿದ್ದಾರೆ ಎಂದು ತಿಳಿಸಿದರು. ಹಾಗೆ ರೈತರು ಹತ್ತು ತಿಂಗಳಿಂದ ಪ್ರತಿಭಟನೆಯಲ್ಲಿ ತೊಡಗಿದ್ದು, ಸೌಹಾರ್ದಯುತವಾಗಿ ರೈತರ ಸಮಸ್ಯೆ ಬಗೆಹರಿಸಲು ಬಿಜೆಗೆ ಆಗ್ತಿಲ್ಲ ಎಂದು ಹೇಳಿದರು. ಅದಲ್ಲದೆ …
Read More »ಉಪ ಚುನಾವಣೆ: ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳ ಅಂತಿಮ ಪಟ್ಟಿ!
ಬೆಂಗಳೂರು, ಸೆ. 28: ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಮೂರು ರಾಜಕೀಯ ಪಕ್ಷಗಳಲ್ಲಿ ಸಂಚಲನ ಉಂಟಾಗಿದೆ. ಅಭ್ಯರ್ಥಿಗಳ ಆಯ್ಕೆ ಗೊಂದಲ ಸೃಷ್ಟಿಯಾಗಿದೆ. ಅದರಲ್ಲಿಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಜೊತೆಗೆ ಹಾನಗಲ್ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು ಬಿಜೆಪಿಗೆ ಎದುರಾಗಿದೆ. ಸಿಂದಗಿಯಲ್ಲಿ …
Read More »9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ
ಬೆಂಗಳೂರು: 9 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಅಪರಾಧಿಯೋರ್ವನನ್ನು ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಅಪರಾಧಿ ಆಂಥೋನಿ ರಾಜ್(44) ಬಂಧಿತ ಅಪರಾಧಿ. 2012ರಲ್ಲಿ ಅಪಘಾತ ಪ್ರಕರಣವೊಂದರಲ್ಲಿ ಆಂಥೋನಿ ರಾಜ್‌ಗೆ ಕೋರ್ಟ್ 10 ತಿಂಗಳು 15 ದಿನ ಜೈಲು ಶಿಕ್ಷೆ ಪ್ರಕಟಿಸಿತ್ತು. ಆದರೆ ಶಿಕ್ಷೆ ಪ್ರಕಟವಾದ ಬಳಿಕ ಆಂಥೋನಿ ರಾಜ್ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರಿಂದ ಬಂಧನಕ್ಕೊಳಪಟ್ಟ ನಂತರ ಆಂಥೋನಿ ರಾಜ್‌ಗೆ ಮತ್ತೆ ದಂಡ ಮತ್ತು ಜೈಲುಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. 2010ರಲ್ಲಿ ಟ್ರಾಕ್ಟರ್ ಡ್ರೈವರ್ …
Read More »ಪ್ಯಾಟ್ಸನ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮತ್ತು ಪ್ಯಾಟ್ಸನ್ ಚಿಟ್ಸ ಪ್ರಾವೇಟ ಈ ಎರಡು ಸಂಸ್ಥೆಯಿಂದ ಸುಮಾರು 20 ಬಡ ಜನರ ಮೇಲೆ ಮೋಸ
ಬೆಳಗಾವಿ ನಗರದ ಸನ್ಮಾನ ಹೋಟೆಲ್ ಹಿಂಬದಿಯ ಎಮ್ ಜಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಯಾಟ್ಸನ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮತ್ತು ಪ್ಯಾಟ್ಸನ್ ಚಿಟ್ಸ ಪ್ರಾವೇಟ ಈ ಎರಡು ಸಂಸ್ಥೆಯಿಂದ ಸುಮಾರು 20 ಬಡ ಜನರ ಮೇಲೆ ಮೋಸಮಾಡಲಾಗುದೆ ಎಂದು ಆರೋಪಿಸಿ ಇಂದು ಸಹಾಯಕ ರಿಜಿಸ್ಟ್ರಾರ್ ಮತ್ತು ಉಪ ಸಹಾಯಕ ರಿಜಿಸ್ಟ್ರಾರ್ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ರೋಹಿತ್ ಚಿಮಟೆ ಪ್ಯಾಟ್ಸನ್ ಸಂಸ್ಥೆಯ ಅದ್ಯಕ್ಷರಾದ ಅನಿಲ ಪರಗೌಡಾ …
Read More »ಎಸ್‌ಟಿಪಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಆದೇಶ
ಬೆಂಗಳೂರು: ಬೆಳಗಾವಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಾಣಕ್ಕೆ ₹2 ಕೋಟಿ ವೆಚ್ಚ ಮಾಡಿದ ಬಳಿಕ ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶಿಸಿದೆ. ಬೆಳಗಾವಿ ನಿವಾಸಿಗಳಾದ ನಾರಾಯಣ ಬೈರು ಸಾವಂತ್ ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು. ಬೆಳಗಾವಿ ಪಾಲಿಕೆ ಆಯುಕ್ತರು ಸಲ್ಲಿಸಿದ್ದ …
Read More »
Laxmi News 24×7