Breaking News

ಜಿಲ್ಲೆ

ಗೃಹಲಕ್ಷ್ಮಿ’ಯರಿಗೆ ಮತ್ತೊಂದು ಗುಡ್ ನ್ಯೂಸ್: ನಗದು ಜತೆಗೆ ಸೀರೆ ವಿತರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಮಾಸಿಕ ತಲಾ ಎರಡು ಸಾವಿರ ರೂಪಾಯಿ ವರ್ಗಾವಣೆ ಮಾಡಲಾಗುತ್ತಿದೆ. ಈ ಯೋಜನೆ ಫಲಾನುಭವಿ ಮಹಿಳೆಯರಿಗೆ ವರ್ಷಕ್ಕೆ ಎರಡು ಸೀರೆಗಳನ್ನು ನೀಡುವ ಯೋಜನೆಯನ್ನು ಘೋಷಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಹಕಾರ ಸಂಘಗಳ ಮೂಲಕ ಸೀರೆ ವಿತರಣೆ ಮಾಡುವ ಯೋಜನೆ …

Read More »

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಆಯ್ದ ಬಸ್‌ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್‌ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ. ಬಜೆಟ್‌ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್‌ ನಿಲ್ದಾಣಗಳಲ್ಲಿ ಇರುವ ತನ್ನ ಎಲ್‌ಇಡಿ ಪರದೆಗಳ ಮೂಲಕ …

Read More »

ಸಿಎಂ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್‌ ಮಂಡಿಸಲಿದ್ದಾರೆ: ಜನರ ಮೇಲೆ ತೆರಿಗೆ ಖಚಿತ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಫೆ.6, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲದ ಬಜೆಟ್‌ ಮಂಡಿಸಲಿದ್ದಾರೆ. ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ಎಂದರೆ ತೆರಿಗೆ ಹೇರುವ ರಾಮಯ್ಯ ಆಗಿದ್ದಾರೆ. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್‌ …

Read More »

ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮೋಟಾರುಗಳ ಪರಿಶೀಲನೆ

ಅಥಣಿ ಮತಕ್ಷೇತ್ರದ ಪೂರ್ವ ಭಾಗದ ರೈತರ ಬಹುಕಾಲದ ಕನಸಾದ ‘ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ’ಯ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಯೋಜನೆಗೆ ಬೇಕಾದ ಬೃಹತ್ ಸಾಮರ್ಥ್ಯದ ಮೋಟಾರ್‌ಗಳು ಸಿದ್ಧಗೊಂಡಿವೆ. ಹೊಸೂರಿನ ಹೆಸರಾಂತ WEG ಮೋಟಾರ್ ತಯಾರಿಕಾ ಕಂಪನಿಯಲ್ಲಿ ಸಿದ್ಧವಾಗಿರುವ ಈ ಮೋಟಾರ್‌ಗಳನ್ನು ಇಂದು ನಾನು ಮತ್ತು ಇಂಜಿನಿಯರ್‌ಗಳ ತಂಡದೊಂದಿಗೆ ಭೇಟಿ ನೀಡಿ ಅಂತಿಮ ಹಂತದ ಪರಿಶೀಲನೆ ನಡೆಸಿದೆವು, ಈ ಏತ ನೀರಾವರಿ ಯೋಜನೆಯಲ್ಲಿ ನೀರನ್ನು ಮೇಲೆತ್ತಲು ಅತ್ಯಾಧುನಿಕ ತಂತ್ರಜ್ಞಾನದ …

Read More »

ವಿವಿಧ ಬೇಡಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ

ಬೆಳಗಾವಿ: ಒಳ‌ ಮೀಸಲಾತಿಯಲ್ಲಿ ಸೃಷ್ಟಿಯಾಗಿರುವ ರೋಸ್ಟರ್ ಬಿಂದು ಗೊಂದಲ ಸರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ನಾಗರೀಕ ಹಕ್ಕುಗಳ ರಕ್ಷಣೆ ಕಾಯ್ದೆ ಮತ್ತು ದೌರ್ಜನ್ಯ ತಡೆಕಾಯ್ದೆಗಳ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ, ಅಪರಾಧಗಳ ಪತ್ತೆ ಮತ್ತು ವಿಚಾರಣೆ ಸರಿಯಾಗಿ ನಡೆದು ರಕ್ಷಣೆಯಾಗುವ ಪ್ರಮಾಣ ಸರಿಯಾಗಿ ಆಗುವಂತೆ ನಿಗಾವಹಿಸಲು ಪ್ರತ್ಯೇಕ ಸಮಿತಿಯನ್ನು ಸ್ಥಾಪಿಸಬೇಕು ಹಾಗೂ …

Read More »

ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ: ನ್ಯಾಯಾಧೀಶ ಮಂಜುನಾಥ ನಾಯಕ

ಬೆಳಗಾವಿ: ಮಕ್ಕಳ ರಕ್ಷಣಾ ಹಕ್ಕು ಮತ್ತು ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾ. 7ರಂದು ಜಿಲ್ಲೆಯ 1200 ಪ್ರೌಢಶಾಲೆಗಳಲ್ಲಿ ಒಂದೇ ಸಮಯಕ್ಕೆ ಏಕಕಾಲಕ್ಕೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ ಅವರು ತಿಳಿಸಿದರು. ಜಿಲ್ಲಾ ನ್ಯಾಯಲಯದ ಸಭಾಂಗಣದಲ್ಲಿ  ಜರುಗಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಪೋಕ್ಸೊ ಕಾನೂನು, ಬಾಲ ಕಾರ್ಮಿಕ ಪದ್ಧತಿ, ಬಾಲ್ಯವಿವಾಹದ, ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದಲ್ಲಿ ಏಕಕಾಲಕ್ಕೆ ಕಾರ್ಯಕ್ರಮಗಳನ್ನು …

Read More »

ಬೆಳಗಾವಿಗೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. ಈ ವೇಳೆ ಕರ್ನಾಟಕದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಉಪ ರಾಷ್ಟ್ರಪತಿ …

Read More »

ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ

ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red Zone) ಎಂದು ಘೋಷಿಸಿದ್ದಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ (Red Zone/ Yellow Zone) …

Read More »

ಬೆಳಗಾವಿ ಅಬಕಾರಿ ಪೊಲೀಸರ ಕಾರ್ಯಾಚರಣೆ: ಗೋವಾ ಮದ್ಯ ವಶ

ಬೆಳಗಾವಿ: ಹೋಳಿ ಹಬ್ಬದ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇದ ಮಾಡಲಾಗಿತ್ತು. ಇದರಲ ಲಾಭ ಮಾಡೆಯಲು ಗೋವಾ ರಾಜ್ಯದ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಬಕಾರಿ ಇಲಾಖೆಯ ಪೊಲೀಸ್ ರು ಬಂಧಿಸಿದ್ದಾರೆ. ಅಬಕಾರಿ ಪೊಲೀಸರು ದಾಳಿ ಮಾಡಿ ತಾಲೂಕಿನ ಮುತ್ನಾಳ ಗ್ರಾಮದ ಅರುಣ ರಾಜು ವಾಘಮೋರೆ (21) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಹಬ್ಬದಲ್ಲಿ ಭರ್ಜರಿ ವ್ಯಾಪಾರ ಮಾಡಬೇಕೆಂಬ ಉದ್ದೇಶದಿಂದ ಮುತ್ನಾಳ ಗ್ರಾಮದ ಹೊರವಲಯದ ಶೆಡ್ ನಲ್ಲಿ ಗೋವಾ …

Read More »

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಬೇಟಿ ಮಾಡಿದ ಸಚಿವರ ನಿಯೋಗ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರವರನ್ನು ಇಂದು ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ಸಮುದಾಯದ ಶಾಸಕರು ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಭೇಟಿ ಮಾಡಿ, ನೇಮಕಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಮಾಡುವ ಕುರಿತು ಚರ್ಚಿಸಿದರು. ಒಮ್ಮತದ ಅಭಿಪ್ರಾಯದ ಮೂಲಕ (Amikebal setelment) ಮೀಸಲಾತಿ ಹಂಚಿಕೆ ಮಾಡಿಕೊಳ್ಳಲು ಅಧ್ಯಕ್ಷರು ಸಚಿವರಿಗೆ ತಿಳಿಸಿದರು ಪರಿಶಿಷ್ಟ ಜಾತಿಯ ನೂರೊಂದು ಸಮುಯದಾಯಗಳಿಗೂ ನ್ಯಾಯಯುತವಾಗಿ …

Read More »