ಬೆಂಗಳೂರು: ಸಿನಿಮಾ ಸ್ಟೈಲ್‌ನಲ್ಲಿ ಬಸ್‌ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿಗೆ ಕಿಸ್ ಕೊಟ್ಟಿದ್ದ ಯುವಕನನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತು …
Read More »ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ
ಬೆಳಗಾವಿ: ಗಣೇಶ ವಿಸರ್ಜನೆಯ ಮೆರವಣಿಗೆ ನೋಡಲು ಬಂದ ಮಹಾರಾಷ್ಟ್ರದ ಮೂಲದ ಯುವಕನಿಗೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ನಡದಿದೆ. ಕೊಲ್ಹಾಪುರ ಮೂಲದ ವಿಶಾಲ್ ಶಿವಡೆ (27) ಚಾಕು ಇರಿತಕ್ಕೊಳಗಾದ ಯುವಕ. ಅಪರಿಚಿತ ಯುವಕರ ಗ್ಯಾಂಗ್ ನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಚಾಕು ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಯುವಕ ಆತನ ಸ್ನೇಹಿತರು ಪಟ್ಟಣಕ್ಕೆ ಬಂದಿದ್ದು ಈ ವೇಳೆ ವೈಯಕ್ತಿಕ …
Read More »ಅಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?
ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ ಸಿಲಿಕಾನ್ ಸಿಟಿ ಜನರನ್ನೇ ಶಾಕ್ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …
Read More »ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿ ತಬ್ರೇಜ್ ಎಂಬಾತನನ್ನು ಬಂಧಿಸಲಾಗಿದೆ
ಬೆಂಗಳೂರು : ಇದೀಗ ತಬ್ರೇಜ್ನನ್ನು ಬಂಧಿಸಲಾಗಿದೆ. ಎಸ್ಡಿಪಿಐ, ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್, ವಾಟ್ಸಪ್ ಗ್ರೂಪ್ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್ ಮೇಲಿತ್ತು.
Read More »ಐವರ ಅಸಹಜ ಸಾವು ಕೇಸ್: ಅಬಕಾರಿ ಅಧಿಕಾರಿಗಳ ಸುಲಿಗೆಗೆ ಇಳಿದಿದ್ದನಂತೆ ಶಂಕರ್..!
ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಒಂದೇ ಕುಟುಂಬದ ಐವರು ಅಸಹಜ ಸಾವು ಕಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನ ಕಳೆದಂತೆ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ಆರೋಪಿ ಶಂಕರ್ ವಿರುದ್ಧ ಮಾಹಿತಿ ಹಕ್ಕು ಕಾಯ್ದೆ (RTI) ಯನ್ನು ದುರುಪಯೋಗ ಪಡಿಸಿಕೊಂಡು ಹಣ ಪೀಕಿರುವ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆಯಲ್ಲಿ ಗಾರ್ಡ್ ಆಗಿದ್ದ ಶಂಕರ್..! ರಾಜ್ಯದ ವಿವಿಧ ಅಬಕಾರಿ ಅಧಿಕಾರಿಗಳೇ ಈತನ ಟಾರ್ಗೆಟ್..! ಶಂಕರ್ …
Read More »ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆ
ಬೆಂಗಳೂರು : ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮಳೆ ಹೆಚ್ಚಾಗಲು ಕಾರಣವಾಗಿದೆ, ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಧ್ಯ ಮುಂಗಾರು ಈಗ ಜೈಸಲ್ಮೇರ್, ಕೋಟ, ಗುಣ, ಸತ್ನಾ, ಜಮ್ಶೆಡ್‌ಪುರನ ಕಡಿಮೆ ಒತ್ತಡದ ಕೇಂದ್ರ ನಂತರ ಆಗ್ನೇಯ ವಾರ್ಡ್‌ಗಳ ಮೂಲಕ ಈಶಾನ್ಯ ಮಧ್ಯ ಬಂಗಾಳ ಕೊಲ್ಲಿಗೆ ಹಾದು …
Read More »ಶೀಘ್ರದಲ್ಲೇ ಥಿಯೇಟರ್ ಗಳಲ್ಲಿ ಶೇ.100 ಸೀಟು ಭರ್ತಿಗೆ ಅನುಮತಿ ಸಾಧ್ಯತೆ
ಬೆಂಗಳೂರು: ಚಿತ್ರ ಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಮನವಿ ಮಾಡಿ ಕನ್ನಡ ಚಿತ್ರರಂಗದ ನಿರ್ಮಾಪಕರು ಇಂದು ಆರೋಗ್ಯ ಸಚಿವ ಕೆ.ಸುಧಾಕರ್ ಗೆ ಮನವಿ ಮಾಡಿದರು. ಸದ್ಯದ ಪರಿಸ್ಥಿತಿಯಲ್ಲಿ ನಿರ್ಮಾಪಕರಿಗೆ ತುಂಬಾ ಸಮಸ್ಯೆಗಳಾಗುತ್ತಿವೆ. ಸಾಲು ಸಾಲು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ದೊಡ್ಡ ನಟರ ಸಿನಿಮಾಗಳು ಪ್ರದರ್ಶನಕ್ಕೆ ಸಿದ್ಧವಾಗಿವೆ. ಆದರೆ, ಶೇ.50ರಷ್ಟು ಮಾತ್ರ ಸೀಟು ಭರ್ತಿಗೆ ಅವಕಾಶ ನೀಡಿರುವುದರಿಂದ ಸಮಸ್ಯೆಯಾಗುತ್ತಿದೆ. ದೊಡ್ಡ ನಟರ ಸಿನಿಮಾಗಳಿಗೆ ಹೆಚ್ಚು ಹಣಹಾಕಿ ಚಿತ್ರ ಬಿಡುಗಡೆ ಮಾಡಲಾಗದೆ …
Read More »ರಾಜ್ಯ ಸಚಿವ ಸಂಪುಟ ಸಭೆ: ಸಾರಿಗೆ ನೌಕರರ ಮೇಲಿನ ಪ್ರಕರಣ ಹಿಂದೆಗೆತ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರ ಮೇಲೆ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ಸಾಧಕ – ಬಾಧಕಗಳ ಕುರಿತು ಚರ್ಚಿಸಿದ್ದೇನೆ. ಮುಷ್ಕರ ಸಮಯದಲ್ಲಿ ಕೆಲವರು ಅಮಾನತಾಗಿದ್ದಾರೆ, ಮತ್ತೆ ಕೆಲವರು ವರ್ಗಾವಣೆಯಾಗಿ 6 ಸಾವಿರ ನೌಕರರು ತೊಂದರೆಗೆೆ ಸಿಲುಕಿದ್ದರು. 4 ಸಾವಿರ ನೌಕರರ ಮೇಲೆ ತೆಗೆದುಕೊಂಡಿದ್ದ ಕ್ರಮವನ್ನು …
Read More »ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು
ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ. ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ. …
Read More »ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇಂದು ಬಿಜೆಪಿ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಶಾಸಕರು ಹಾಗೂ ಸಚಿವರು ಭಾಗಿಯಾಗಿದ್ದರು. ಅಧಿವೇಶನದಲ್ಲಿ ಶಾಸಕರ ನಡಾವಳಿಗಳು, ವಿಪಕ್ಷಗಳ ಟೀಕೆ, ಆರೋಪಗಳಿಗೆ ತಕ್ಕ ತಿರುಗೇಟು ಕೊಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಅತ್ಯಾಚಾರ ಪ್ರಕರಣದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. …
Read More »
Laxmi News 24×7