ಬೆಂಗಳೂರು: ಸಾರಿಗೆ ಮುಷ್ಕರದಿಂದ ಅಮಾನತು, ವಜಾ, ವರ್ಗಾವಣೆ ಮುಂತಾದವುಗಳಿಂದ ಅತಂತ್ರರಾಗಿರುವ ಸಾವಿರಾರು ನೌಕರರ ಬಗ್ಗೆ ಸಹಾನುಭೂತಿ ತೋರಿರುವ ಸರಕಾರ, ಶೀಘ್ರದಲ್ಲೇ ಈ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಸಾರಿಗೆ ನೌಕರರ ಹಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಚರ್ಚೆ ನಡೆಸಿ, ಮಾಹಿತಿ ಕಲೆಹಾಕಿದರು. ಈ ಸಂದರ್ಭದಲ್ಲಿ ನೌಕರರ ಅಮಾನತು, ವಜಾ ಬಗ್ಗೆಯೂ ಪ್ರಸ್ತಾಪವಾಗಿದ್ದು, ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಸೂಕ್ತ …
Read More »ವಿಧಾನಸಭೆ ಅಧಿವೇಶನ : ಹಲವು ವಿಶೇಷತೆಗಳಿಗೆ ಕಾರಣವಾದ ಸದನ
ಬೆಂಗಳೂರು, ಸೆ.13- ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಇಂದು ಹೊಸ ಸಚಿವರ ಸಂಭ್ರಮ ಸೇರಿದಂತೆ ಹಲವು ವಿಶೇಷತೆಗಳಿಗೆ ಸದನ ಸಾಕ್ಷಿಯಾಯಿತು.ಕಳೆದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಪಾಲ್ಗೊಂಡಿದ್ದ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಾಜಿ ಮುಖ್ಯಮಂತ್ರಿಯಾಗಿ ಮುಖ್ಯ ಸಚೇತಕರ ಪಕ್ಕದ ಆಸನದಲ್ಲಿ ಕುಳಿತಿದ್ದರು. ಕಳೆದ ಅಧಿವೇಶನದಲ್ಲಿ ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಸುರೇಶ್‍ಕುಮಾರ್ ಅವರು ಈ ಅಧಿವೇಶನದಲ್ಲಿ ಹಿಂದಿನ ಸಾಲಿಗೆ ಸ್ಥಳಾಂತರಗೊಂಡಿದ್ದದ್ದು ಕಂಡು ಬಂದಿತು.ನೂತನ ಸಚಿವರಾದ ಮುನಿರತ್ನ ಹಾಗೂ ಶಂಕರಪಾಟೀಲ್ ಮುನೇನ ಕೊಪ್ಪ ಸದನದಲ್ಲಿ ಪರಸ್ಪರ …
Read More »‘RSS ಮೂಲಕ ಬಿಜೆಪಿ ಸಂಘಟನೆ ಮಾಡ್ತಿದೆ.. ದೇಶ ಸಂಪೂರ್ಣ ನಾಶವಾಗುವ ದಿನಗಳು ದೂರವಿಲ್ಲ’- ಹೆಚ್ಡಿಕೆ
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ ಪಕ್ಷವನ್ನು ಉಳಿಸಿಕೊಳ್ಳಲು ಈ ಹಿಂದೆ ಬಿಜೆಪಿ ಜೊತೆ ಅನಿವಾರ್ಯವಾಗಿ ಹೋಗಬೇಕಾಯಿತು ಎಂದಿದ್ದಾರೆ. ಕಳೆದ 2004ರಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಹಲವಾರು ರೀತಿಯ ಒತ್ತಡಗಳನ್ನು ಹಾಕಿದ್ರೂ ಬಿಜೆಪಿ ಜೊತೆ ಹೋಗಿರಲಿಲ್ಲ. ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಆಗಿತ್ತು. ಆದರೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಬೇರ್ಪಡಿಸುವ ಕುತಂತ್ರಗಳನ್ನು ಕಾಂಗ್ರೆಸ್ ಮಾಡಿತು. ಹಾಗಾಗಿ ಪಕ್ಷವನ್ನು ಉಳಿಸಿಕೊಳ್ಳಲು ಬಿಜೆಪಿ ಜೊತೆ ಅನಿವಾರ್ಯವಾಗಿ ಹೋಗಬೇಕಾಯಿತು. …
Read More »ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ: ಕನ್ನಡಕ್ಕೆ ಆದ್ಯತೆ: ಸುನಿಲ್ ಕುಮಾರ್
ಬೆಂಗಳೂರು: ರಾಜ್ಯ ಸರಕಾರ ಕನ್ನಡಕ್ಕೆ ವಿಶೇಷ ಆದ್ಯತೆ ನೀಡಿದ್ದು, ಎಲ್ಲೆಲ್ಲಿ ಕನ್ನಡವನ್ನು ಪ್ರಧಾನವಾಗಿ ತೆಗೆದುಕೊಂಡು ಬರಲು ಸಾಧ್ಯವೋ, ಅದೆಲ್ಲವನ್ನು ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ಕುಮಾರ್ ಹೇಳಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ರವಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2020ನೇ ಸಾಲಿನ ಗೌರವ ಪ್ರಶಸ್ತಿ 2019-20ನೇ ಸಾಲಿನ ಸಾಹಿತ್ಯಶ್ರೀ ಮತ್ತು 2018-19ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಮುಂದಿನ ರಾಜ್ಯೋತ್ಸವವನ್ನು …
Read More »ಬಿಜೆಪಿ ಹಣದಿಂದ ಅಧಿಕಾರಕ್ಕೆ ಬಂದಿರುವುದಕ್ಕೆ ಶ್ರೀಮಂತ್ ಪಾಟೀಲ್ ಹೇಳಿಕೆ ಸಾಕ್ಷಿ: ದಿನೇಶ್
ಬೆಂಗಳೂರು: ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಬಿಜೆಪಿ ಸೇರಲು ಹಣದ ಆಫರ್ ನೀಡಿದ್ದ ಬಗ್ಗೆ ಸ್ವತಃ ಒಪ್ಪಿಕೊಂಡಿದ್ದಾರೆ. ಶಾಸಕರನ್ನು ಖರೀದಿಸಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಇದು ಸಾಕ್ಷಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 17 ಶಾಸಕರನ್ನು ಬಿಜೆಪಿ ಅಕ್ರಮ ದುಡ್ಡಿನಿಂದ ಖರೀದಿಸಿದೆ ಎಂಬುದು ಕೊನೆಗೂ ನಿಜವಾಗಿದೆ. ಶಾಸಕರ ಖರೀದಿಸಿ ಅಧಿಕಾರಕ್ಕೆ ಬಂದಿರುವ ಈ ಸರ್ಕಾರ ಅಕ್ರಮ ಸಂತಾನ. ಶಾಸಕರ ಖರೀದಿಗೆ …
Read More »ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …
Read More »ಇಂದಿನಿಂದ ವಿಧಾನಮಂಡಲ ಅಧಿವೇಶನ: ಎತ್ತಿನ ಗಾಡಿಯಲ್ಲಿ ಕಲಾಪಕ್ಕೆ ಆಗಮಿಸಲಿರುವ ಕಾಂಗ್ರೆಸ್ ನಾಯಕರು!
ಬೆಂಗಳೂರು: 10 ದಿನಗಳ ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಖ್ಯವಾಗಿ ಪ್ರತಿಪಕ್ಷ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ ನಿರ್ವಹಣೆ, ಲಸಿಕೆ ಪೂರೈಕೆಯಲ್ಲಿ ಕೊರತೆ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಇಕ್ಕಟ್ಟಿಗೆ ಸಿಲುಕಿಸಲು, ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ಇನ್ನೊಂದೆಡೆ ಸರ್ಕಾರ, ಈ ಕಲಾಪದಲ್ಲಿ 18 ಮಸೂದೆಗಳ ಅಂಗೀಕಾರಕ್ಕೆ ಬಯಸುತ್ತಿದೆ. ಕರ್ನಾಟಕ ಪೊಲೀಸ್ …
Read More »ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ
ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ …
Read More »ವಿಜಯಪುರ : ನೀರಾವರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ
ವಿಜಯಪುರ : ರೇವಣಸಿದ್ಧೇಶರ ಏತ ನೀರಾವರಿ ಸೇರಿದಂತೆ ಇಂಡಿ ಕ್ಷೇತ್ರದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆಗ್ರಹಿಸಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಬಳಿ ಜೆಡಿಎಸ್ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ- 50 ಸಂಚಾರ ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ಬಿ.ಡಿ.ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಗಾರರು ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಬೇಕು, ಇಂಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸೋ ಕಾಮಗಾರಿಗೆ …
Read More »ಶ್ರೀಮಂತ ಪಾಟೀಲ್ ಗೆ ಆಮಿಷವೊಡ್ಡಿದ್ದು ಯಾರೆಂದು ಪರಿಶೀಲನೆ ಆಗಬೇಕು : ಲಕ್ಷ್ಮಣ ಸವದಿ
ಬೆಳಗಾವಿ : ಮಾಜಿ ಸಚಿವ ಶ್ರೀಮಂತ ಪಾಟೀಲ್ ಅವರಿಗೆ ಹಣದ ಆಮಿಷವೊಡ್ಡಿದ್ದು ಯಾರೆಂದು ಪರಿಶೀಲನೆ ಆಗಬೇಕೆಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಮಂತ ಪಾಟೀಲ್ ರನ್ನು ಈ ಬಗ್ಗೆ ನಾನು ಭೇಟಿ ಮಾಡಿಲ್ಲ. ಅವರಿಗೆ ಯಾರು ಹಣ ಕೊಡಲು ತೆರಳಿದ್ದರು, ಯಾರು ಆಮಿಷವೊಡ್ಡಿದ್ದರೆಂದು ಪರಿಶೀಲನೆ ಆಗಬೇಕೆಂದು ಆಗ್ರಹಿಸಿದರು. ಇನ್ನು ಅಧಿಕಾರ ಶಾಶ್ವತವಲ್ಲ. ತು ಅವಕಾಶ ಕೊಟ್ಟಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ …
Read More »
Laxmi News 24×7