Breaking News

ಜಿಲ್ಲೆ

ರೇಪ್ ಕೇಸ್ ಬಗ್ಗೆ ಮಾತಾಡದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಣ್ಣಲ್ಲವೇ?: ಹೆಚ್.ಎಂ. ರೇವಣ್ಣ ಆಕ್ರೋಶ

ಬೆಂಗಳೂರು : ಶೋಭಾ ಕರಂದ್ಲಾಜೆ ನಾನು ಕೇಂದ್ರ ಸಚಿವೆ ಮೈಸೂರು ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಲ್ಲ ಅಂತಾರೆ. ಸಚಿವೆ ಆದರೂ ಹೆಣ್ಣು ಹೆಣ್ಣೇ ಅಲ್ವಾ? ಅವರ ಮನೆಯಲ್ಲೇ ಆದರೆ ನಮ್ಮ ಮನೆಯಲ್ಲಿ ಆದರೆ ಹೀಗೆ ಮಾತಾಡೋದ? ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದಾರೆ. ಸದಾಶಿವನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು ಅತ್ಯಾಚಾರ ನಡೆದಿದೆ ಅಂತಾರೆ. ಪೊಲೀಸರು ದರೋಡೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. …

Read More »

ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ?

ಬೆಂಗಳೂರು, ಆ.28: ಸಂಭಾವ್ಯ ಕೋವಿಡ್ ಮೂರನೆ ಅಲೆಯ ಸಂಬಂಧ ಯಾವ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡಿದೆ. ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಶನಿವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠವೂ, ಸೋಂಕು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಸಂಭಾವ್ಯ ಕೋವಿಡ್ ಮೂರನೆ ಅಲೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳೇನು. …

Read More »

ಹಿಂದಿನಿಂದ ಬಂದು ಯುವತಿಗೆ ಮುತ್ತಿಟ್ಟು ಓಡಿದ ಯುವಕ:

ಬೆಂಗಳೂರು ಹಾಡಹಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಗೆ ಮುತ್ತಿಟ್ಟಿದ್ದಾನೆ. ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದಾನೆ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದಾನೆ. ಈ ಎಲ್ಲ ಘಟನೆಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪ್ರಾಪ್ತೆ ದೊಡ್ಡಮ್ಮನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದು, …

Read More »

ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಅವರ ನೇತೃತ್ವದಲ್ಲಿ ನಗರದ ಕೆಲವೆಡೆ 112 ಸಹಾಯವಾಣಿ

ಮಹಾನಗರ: ಮಂಗಳೂರು ನಗರ ಪೊಲೀಸರು ಶನಿವಾರ “ತುರ್ತು ಸಹಾಯವಾಣಿ  112′ ಮೂಲಕ ಮಹಿಳೆಯರಿಂದ ಕರೆಗಳನ್ನು ಸ್ವೀಕರಿಸಿ ತ್ವರಿತ ವಾಗಿ ಸ್ಥಳಕ್ಕೆ ತೆರಳಿ ಸ್ಪಂದಿಸಿದರು.   “ಮಹಿಳೆಯರ ಸುರಕ್ಷೆಗಾಗಿ ಒಂದು ದಿನ’ ಎಂಬ ಈ ಅಭಿಯಾನದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ದರ್ಜೆಗಿಂತ ಮೇಲಿನ ದರ್ಜೆಯ ಪೊಲೀಸ್‌ ಅಧಿಕಾರಿಗಳು, ಮಹಿಳಾ ಪೊಲೀಸ್‌ ಅಧಿ ಕಾರಿ, ಸಿಬಂದಿಯನ್ನೊಳಗೊಂಡ 100ಕ್ಕೂ ಅಧಿಕ ಪೊಲೀಸರು ಪಾಲ್ಗೊಂಡಿ ದ್ದರು. ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಈ ವಿಶೇಷ ಅಭಿಯಾನ ನಡೆಯಿತು. …

Read More »

ಶಿವಮೊಗ್ಗ ಶಂಕರ ವಲಯ ವ್ಯಾಪ್ತಿಯಲ್ಲಿ ಗಂಧದ ಮರಗಳ ಕಳ್ಳತನ ಜೋರಾಗಿ ನಡೆಯುತ್ತಿದೆ.

ಶಿವಮೊಗ್ಗ ತಾಲೂಕಿನ ಬಿಕೋನಹಳ್ಳಿ ಬಳಿ ಅಧಿಕಾರಿಗಳು ಹೇಮಣ್ಣನ ಬೈಕ್ ಪರಿಶೀಲನೆ ಮಾಡಿದ್ದು, ಬೈಕ್ ಮತ್ತು ಏಳು ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎತ್ತ ನೋಡಿದರೂ ಬೆಲೆಬಾಳುವ ಮರಗಳು ಕಣ್ಣಿಗೆ ಬೀಳುತ್ತವೆ. ಇಂತಹ ಅರಣ್ಯದಲ್ಲಿ ಮರಗಳ ಚೋರರ ಹಾವಳಿ ಬಲು ಜೋರಾಗಿದೆ. ಅದರಲ್ಲೂ ಬೆಲೆಬಾಳುವ ಶ್ರೀಗಂಧದ ಮರ ಹಂತ ಹಂತವಾಗಿ ಅರಣ್ಯದಿಂದ ಕಣ್ಮರೆಯಾಗುತ್ತಿವೆ. ಹೀಗಾಗಿ ಇದಕ್ಕೆ ಅಂತ್ಯ ಹಾಡಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳ …

Read More »

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.   ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು. ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 …

Read More »

ಪಶು ಸಹಾಯವಾಣಿಗೆ ಒಂದೇ ತಿಂಗಳಲ್ಲಿ 9000 ಕರೆ

ಚಿತ್ರದುರ್ಗ (ಆ.29): ಪ್ರತಿ ಜಿಲ್ಲೆಯಲ್ಲಿ 60ರಿಂದ 100 ಎಕರೆ ಜಾಗದಲ್ಲಿ ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದರು.   ನಗರದ ಹೊರವಲಯದಲ್ಲಿ ಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ 30 ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಕ್ಯಾಬಿನೆಟ್‌ ಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಗೋಮಾಳ ಜಾಗವನ್ನು ಗುರುತಿಸಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ …

Read More »

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

ಬೆಂಗಳೂರು (ಆ.29): ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ. ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.   ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ? …

Read More »

8ನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯನ್ನು ಸರ್ಕಾರ 2020-21ನೇ ಸಾಲಿನಲ್ಲಿ ಸ್ಥಗಿತಗೊಳಿಸಿತ್ತು.

ಬೆಂಗಳೂರು (ಆ.29: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬೈಸಿಕಲ್‌ ಭಾಗ್ಯವಿಲ್ಲ. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಉಚಿತ ಸೈಕಲ್‌ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯವನ್ನು 2020ರ ಮಾ ರ್ಚ್ನಿಂದ ಕಾಡುತ್ತಿರುವ ಕೋವಿಡ್‌ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ, ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೂ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ. 2006-07ರ ಬಿಜೆಪಿ- ಜೆಡಿಎಸ್‌ …

Read More »

ಮೈಸೂರು ವಿದ್ಯಾರ್ಥಿನಿ ಮೇಲಿನ ಗ್ಯಾಂಗ್​ರೇಪ್ ಪ್ರಕರಣ

ಮೈಸೂರು: ದೆಹಲಿ ನಿರ್ಭಯಾ ಪ್ರಕರಣ ನೆನಪಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸ್ ಟಿಕೆಟೊಂದರ ಸುಳಿವು ಪಡೆದು ಪ್ರಕರಣ ನಡೆದ 87 ಗಂಟೆಯಲ್ಲಿ ತಮಿಳನಾಡಿನ ಐವರು ಆರೋಪಿಗಳನ್ನು ಬಂಧಿಸಿರುವುದು ವಿಶೇಷ. ಬಂಧಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಘಟನೆ ಸಾರ್ವಜನಿಕ ಆಕ್ರೋಶದ ಜತೆಗೆ ರಾಜಕೀಯ ಒತ್ತಡ, ಸಂಘಟನೆಗಳ ಪ್ರತಿಭಟನೆಯಿಂದಲೂ ಪೊಲೀಸರಿಗೆ ತಲೆನೋವು ತಂದಿಟ್ಟಿತ್ತು. …

Read More »