Breaking News

ಜಿಲ್ಲೆ

ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ-ಅಲರ್ಟ್

ಬೆಂಗಳೂರು: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ (ಆ.29) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಕಾಖೆ ಹೇಳಿದೆ.   ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು ಈ ಪ್ರದೇಶದಲ್ಲಿ ಅಧಿಕ ಮಳೆ ಉಂಟಾಗಲಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ …

Read More »

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.   ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.   ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ. ತುಂಬಿದ ಸಿಲೀಂಡರ್​ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಯಮಕನಮರಡಿ: ಜಲಜೀವನ್ ಮಿಷನ್ ಅಡಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ ಜಾರಕಿಹೊಳಿ

    ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಇಂದು ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿದರು.   ಶಾಸಕ ಸತೀಶ ಅವರು ಜಲಜೀವನ ಮಿಷನ್ ಯೋಜನೆಯಡಿ ಬಸ್ಸಾಪೂರ ಗ್ರಾಮದಲ್ಲಿ 1.12 ಕೋಟಿ ರೂ. ವೆಚ್ಚದ ಕಾಮಗಾರಿ, ಯಲ್ಲಾಪುರ ಗ್ರಾಮದಲ್ಲಿ 18.18 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಹೊನಗಾದಲ್ಲಿ 3.69 …

Read More »

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ

    ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.   ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »

ಮಹದಾಯಿ ಹಾಗೂ ಮೇಕೆದಾಟು ಯೋಜನೆ ಶೀಘ್ರದಲ್ಲಿ ಆರಂಭ: ಸಿಎಂ ಬೊಮ್ಮಾಯಿ

ಹಾವೇರಿ: ಮಹದಾಯಿ ಹಾಗೂ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಕ್ರಿಯೆ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಿ ಚಾಲನೆ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಿರೇಕೇರೂರಿನ ಬಸರಿಹಳ್ಳಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪರ್ ಕೃಷ್ಣಾ,ಮಹದಾಯಿ, ಮೇಕೆದಾಟು ಯೋಜನೆ ಪ್ರಕ್ರಿಯೆಗಳನ್ನ ದೆಹಲಿಗೆ ಹೋಗಿ ಕಾನೂನು ತಜ್ಞರ ಜೊತೆ ಚರ್ಚಿಸಲಾಗುತ್ತೆ. ಆ ಯೋಜನೆಯನ್ನು ನೋಟಿಪಿಕೇಷನ್ ಮಾಡುವುದಕ್ಕೆ ತೀವ್ರಗತಿಯಲ್ಲಿ ಜಾರಿ ಮಾಡುತ್ತೇವೆ. ಸುಪ್ರೀಂ ಕೋರ್ಟ್ …

Read More »

ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಸಾಲಗಾರರ ‌ಕಾಟಕ್ಕೆ‌ ಬೇಸತ್ತು‌, ಫೇಸ್ಬುಕ್ ಲೈವ್ ನಲ್ಲಿಯೇ‌ ರೈತನೋರ್ವ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ‌ ಘಟನೆ ನಿನ್ನೆ ಸಂಜೆ ನಡೆದಿದೆ. ಗೋಕಾಕ ತಾಲ್ಲೂಕು ಮಕ್ಕಳಗೇರಿ ಗ್ರಾಮದ‌ ಲಕ್ಷ್ಮಣ ಈಳಗೇರ ಎಂಬಾತನೇ ಆತ್ಮಹತ್ಯೆಗೆ ‌ಯತ್ನಿಸಿದ ರೈತ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಗೋಕಾಕ‌ ತಾಲೂಕು ಆಸ್ಪತ್ರೆಯಲ್ಲಿ‌ ದಾಖಲಿಸಲಾಗಿದೆ. ರೈತ ಮಾಡಿರುವ ಫೇಸ್ಬುಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಸಂತ್ರಸ್ತ ರೈತ ವಿಷಪ್ರಾಷಣ ಮಾಡುವ ಮುಂಚೆ‌ ತನ್ನ …

Read More »

ಅನ್ನದಾನ ಮಹಾ ದಾನ ಈ ವಾರ ಮಮದಾಪೂರ ಗ್ರಾಮದ ಹನುಮಂತನ ದೇವಸ್ಥಾನದಲ್ಲಿ ನಮ್ಮ ಕಾರ್ಯಕ್ರಮ..

ಗೋಕಾಕ: ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ನಮ್ಮ ಗೋಕಾಕ ಸಾಹುಕಾರ ರಾದ ಶ್ರೀ ಸಂತೋಷ್ ಜಾರಕಿಹೊಳಿ ಅವರ ತಂಡ ಇವತ್ತು ಮತ್ತೊಂದು ಹಳ್ಳಿಗೆ ಹೋಗಿ ಅನ್ನ ಸಂತರ್ಪಣೆ ಕಾರ್ಯ ಕ್ರಮ ನಡೆಸಿದೆ.   ಇಂದು ತಾಲೂಕಿನ ಮಮ ದಾಪೂರ ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ನಡಿದಿದ್ದು ಎಲ್ಲರೂ ಮತ್ತೆ ಇದರ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು..   ಈ ಶನಿವಾರ ಮಾಮದಾಪುರ ಗ್ರಾಮದ ಹನುಮನ ದೇವಸ್ಥಾನ ದಲ್ಲಿ ಈ …

Read More »

ಹುದಲಿ ಗ್ರಾಮದ ಮನೆಯೊಂದರಲ್ಲಿ ಮಟ್ಕಾ ದಾಳಿ ಬೆಳಗಾವಿ ಪೊಲೀಸ 30 ಜನ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ – ಇಲ್ಲಿಯ ಸಿಇಎನ್ ಪೊಲೀಸ್ ಇನಸ್ಪೆಕ್ಟರ್ ಮತ್ತು ಮಾರಿಹಾಳ ಪೊಲೀಸ್ ಇನಸ್ಪೆಕ್ಟರ್ ಜಂಟಿಯಾಗಿ ಹುದಲಿ ಗ್ರಾಮದ ಮನೆಯೊಂದರಲ್ಲಿ ಮಟ್ಕಾ ದಾಳಿ ನಡೆಸಿದ್ದಾರೆ.30 ಜನರನ್ನು ಬಂಧಿಸಲಾಗಿದ್ದು, 1,00,870 ರೂ ಗಳನ್ನು ಮತ್ತು 15 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.  

Read More »

ಹಂಗಾಮಿ‌ ಮುಖ್ಯ ನ್ಯಾಯಮೂರ್ತಿ ಆಗಿ ಸತೀಶ್ ಚಂದ್ರಶರ್ಮಾ ನೇಮಕ ಮಾಡಲಾಗಿದೆ. ಹಂಗಾಮಿ ಸಿಜೆ ನೇಮಿಸಿ ರಾಷ್ಟ್ರಪತಿಗಳಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ (Supreme Court Chief Justice) ಒಕಾ‌ ನೇಮಕ ಹಿನ್ನೆಲೆ, ಕರ್ನಾಟಕ ಹೈಕೋರ್ಟ್​ಗೆ (Karnataka High Court) ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ ಮಾಡಲಾಗಿದೆ. ಹಂಗಾಮಿ‌ ಮುಖ್ಯ ನ್ಯಾಯಮೂರ್ತಿ ಆಗಿ ಸತೀಶ್ ಚಂದ್ರಶರ್ಮಾ ನೇಮಕ ಮಾಡಲಾಗಿದೆ. ಹಂಗಾಮಿ ಸಿಜೆ ನೇಮಿಸಿ ರಾಷ್ಟ್ರಪತಿಗಳಿಂದ ಆದೇಶ ಹೊರಡಿಸಲಾಗಿದೆ. ತೆಲಂಗಾಣ, ಗುಜರಾತ್, ಸಿಕ್ಕಿಂ ಹಾಗೂ ಕರ್ನಾಟಕಕ್ಕೆ ಹಂಗಾಮಿ ಮುಖ್ಯ ನ್ಯಾಯಾಧೀಶರನ್ನು ರಾಷ್ಟ್ರಪತಿಗಳು ಶುಕ್ರವಾರ (ಆಗಸ್ಟ್ 27) ನೇಂಇಸಿ ಆದೇಶ ಹೊರಡಿಸಿದ್ದಾರೆ. ಈ …

Read More »