ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೊಸ ಟೊಯೊಟಾ ವೆಲ್‌ಫೈರ್ ಕಾರನ್ನು ಖರೀದಿ ಮಾಡಿದ್ದು, ತೆರಿಗೆ ಸೇರಿ ಇದರ ಮೌಲ್ಯ ₹1 ಕೋಟಿ ಎಂದು ಮೂಲಗಳು ಹೇಳಿವೆ. ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಾರು ಬಳಸುತ್ತಿದ್ದರು. ಈಗ ಹೆಚ್ಚು ದೂರ ಮತ್ತು ಆರಾಮದಾಯಕ ಪ್ರಯಾಣಕ್ಕಾಗಿ ಈ ಕಾರು ಖರೀದಿ ಮಾಡಿದ್ದಾರೆ. ಇದರ ಮೂಲ ಬೆಲೆ ₹87 ಲಕ್ಷ. ಈಗಾಗಲೇ ನೋಂದಣಿ ಮಾಡಿಸಿದ್ದು, ಶುಕ್ರವಾರ ಶಿವಮೊಗ್ಗಕ್ಕೆ ಇದೇ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ. ಹಿರಿಯ ಸಚಿವರೊಬ್ಬರ ಬಳಿ …
Read More »ಪೊಲೀಸರಿಗೆ ಸಿಎಂ ಎಚ್ಚರಿಕೆ
ಬೆಂಗಳೂರು,ಆ.27- ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸುದ್ದಿಯಾಗುತ್ತಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್, ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಕಾರ್ಯ ವೈಖರಿಗೆ ಸಿಎಂ ತರಾಟೆ …
Read More »ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ
ಬೆಂಗಳೂರು, ಆ.27- ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 530 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವೃತ್ತಿಪರ ಕೋರ್ಸ್‍ಗಳು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯಲಿ ರುವ ಈ ಪರೀಕ್ಷೆಗೆ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ನಾಳೆ ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ …
Read More »ಗಣೇಶ ಹಬ್ಬದ ಬಳಿಕ ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಗಣೇಶ ಹಬ್ಬದ ಬಳಿಕ ಎಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ. ನಾನೊಬ್ಬನೇ ರಾಜ್ಯ ಪ್ರವಾಸ ಮಾಡುವ ಪ್ರಶ್ನೆಯಿಲ್ಲ. ಎಲ್ಲರೂ ಜೊತೆಯಾಗಿ ರಾಜ್ಯ ಪ್ರವಾಸ ಮಾಡುತ್ತೇವೆ. ಯಾವ ಜಿಲ್ಲೆಗಳಿಗೆ ಹೋಗಬೇಕು ಎಂದು ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ಬಳಿಕ ಶಿವಮೊಗ್ಗ, ಶಿಕಾರಿಪುರಕ್ಕೆ ಹೋಗುತ್ತಿದ್ದೇನೆ. ವಾಪಸ್ ಬಂದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಇತರ ಮುಖಂಡರ ಜೊತೆ ಚರ್ಚೆ ರಾಜ್ಯ …
Read More »ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.
ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …
Read More »ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ
ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …
Read More »ಗ್ಯಾಂಗ್ ರೇಪ್ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!
ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …
Read More »ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಸತೀಶ್ ಜಾರಕಿಹೊಳಿ ಆಕ್ರೋಶ
ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. ಅತ್ಯಾಚಾರ …
Read More »ಬೆಳಗಾವಿ: ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.
ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ. 58 ವಾರ್ಡ್‌ಗಳ ಪೈಕಿ ಬಹುತೇಕ ಕಡೆಗಳಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಕೆಲವೆಡೆ ತ್ರಿಕೋನ ಪೈಪೋಟಿ ಕಂಡುಬಂದಿದೆ. ಶುಕ್ರವಾರದಿಂದ ಪ್ರಚಾರ ಕಣ ರಂಗೇರಲಿದೆ. ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ 468 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಉಮೇದುವಾರಿಕೆ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಒಟ್ಟು 83 ಮಂದಿ …
Read More »ರಿವಾಲ್ವಾರ್ ಜೊತೆ ಓಡಾಡುತ್ತಿದ್ದ ವ್ಯಕ್ತಿ ಬಂಧನ
ಬೆಳಗಾವಿ: ಸೊಂಟದಲ್ಲಿ (ಪ್ಯಾಂಟ್‌ಗೆ) ರಿವಾಲ್ವಾರ್ ಇಟ್ಟುಕೊಂಡು ಖಡೇಬಜಾರ್ ರಸ್ತೆಯಲ್ಲಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟು ಮಾಡುತ್ತಾ ಸುತ್ತಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ‘ಆ ವ್ಯಕ್ತಿಯು ರಿವಾಲ್ವಾರ್ ಜೊತೆ ಓಡಾಡುತ್ತಿದ್ದುದ್ದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ವೊಂದರ ಮೂಲಕ ಗಮನಕ್ಕೆ ಬಂದಿತ್ತು. ಮಹಾನಗರಪಾಲಿಕೆ ಚುನಾವಣೆ ಮಾದರಿ ನೀತಿಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿದ ಕಾರಣ ವ್ಯಕ್ತಿ ವಿರುದ್ಧ ಕ್ರಮ ವಹಿಸಲಾಗಿದೆ. ಈ ಬಗ್ಗೆ ಖಡೇಬಜಾರ್ ಪೊಲೀಸ್ …
Read More »
Laxmi News 24×7