ಬೆಂಗಳೂರು: ಸೆಪ್ಟಂಬರ್ 13 ರಿಂದ ವಿಧಾನ ಮಂಡಲ ಅಧಿವೇಶನ ಶುರುವಾಗ್ತಿದೆ. ಇದರ ಬೆನ್ನಲ್ಲೇ ಮತ್ತೆ ಮೀಸಲಾತಿ ಕಿಚ್ಚು ಹೊತ್ತಿಕೊಳ್ಳೋ ಸಾಧ್ಯತೆ ಇದೆ. ಯಾಕೆಂದ್ರೆ, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ(2A Reservation Row )ಮತ್ತೆ ರಣಕಹಳೆ ಊದಿದೆ. ಇದ್ರಿಂದ ಬಸವರಾಜ ಬೊಮ್ಮಾಯಿ(Basavaraj Bommai) ಸರ್ಕಾರಕ್ಕೆ ಮೀಸಲಾತಿ ಸವಾಲ್ ಎದುರಾಗಿದೆ. 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಪ್ರತಿಭಟನೆ ಮಾಡಿತ್ತು. ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ನಡೆಸಿದ್ರು. ದೊಡ್ಡ ಮಟ್ಟದಲ್ಲಿ ಸಮಾವೇಶ ಕೂಡ ಮಾಡಿದ್ರು. ಬಿ.ಎಸ್.ಯಡಿಯೂರಪ್ಪ …
Read More »ರಾಜ್ಯ ಸರ್ಕಾರದಿಂದ ಮಹಿಳಾ ಮಣಿಗಳಿಗೆ ಭರ್ಜರಿ ಸಿಹಿ ಸುದ್ದಿ : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನ ಉದ್ಯೋಗಿನಿ,ಕಿರುಸಾಲ,ಸಮೃದ್ಧಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂ.ಸಂ:08392-2294127 ಮೊ.ಸಂ:9110653738 ಗೆ ಸಂಪರ್ಕಿಸಬಹುದು. ಸೆ.6ರೊಳಗಾಗಿ ಅರ್ಜಿ ಸಲ್ಲಿಸಬೇಕು. ಉದ್ಯೋಗಿನಿ …
Read More »ಕರ್ನಾಟಕ ಹೈಕೋರ್ಟ್- ಎರಡನೇ ವಿಭಾಗ ಸಹಾಯಕರ (ಎಸ್ಡಿಎ) ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಹೈಕೋರ್ಟ್‌ಗೆ 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ karnatakajudiciary.kar.nic ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 24, 2021 ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ನಡೆಯುತ್ತಿರುವ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 142. ಒಮ್ಮೆ ನೇಮಕಗೊಂಡ ನಂತರ, ಅಭ್ಯರ್ಥಿಗಳು ಎರಡು ವರ್ಷಗಳ ಕಾಲ ಪರೀಕ್ಷಾ ಅವಧಿಯಲ್ಲಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು 35 ವರ್ಷ ಮೀರಿರಬಾರದು. …
Read More »ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ
ಬೆಂಗಳೂರು: ‘ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ. ಯತ್ನಾಳ್ ಅವರ ವಿರುದ್ಧ ಪ್ರತಿಭಟನೆಗೆ ಮಾಡಿದ್ದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದ ಕಾರಣ ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯತ್ನಾಳ್ ಅವರ ಮಾತುಗಳು, ಅವರ ವ್ಯಕ್ತಿತ್ವ ಹಾಗೂ ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ಆಕ್ರೋಶ …
Read More »ಸೀಮಂತ ಕಾರ್ಯಕ್ರಮದಲ್ಲಿ ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ದಾವಣಗೆರೆ: ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ದುರ್ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಣ್ಣೆಹಳ್ಳಿ ಗ್ರಾಮದ ಮನೆ ಒಂದರಲ್ಲಿ ಸೀಮಂತ ಕಾರ್ಯ ನಡೆದಿತ್ತು. ಈ ವೇಳೆ ನೂರಾರು ಜನರಿಗೆ ಸಿಹಿಯೂಟ ಹಾಕಲಾಗಿತ್ತು. ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಸ್ವಸ್ಥರೆಲ್ಲರನ್ನೂ ಬೆಣ್ಣೆಹಳ್ಳಿ ಪಿಎಚ್‌ಸಿ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲವರು …
Read More »ಆರ್ಥಿಕತೆಯ ಗಂಧಗಾಳಿ ತಿಳಿಯದ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾದರೂ ಹೇಗೆ: ಬಿಜೆಪಿ
ಬೆಂಗಳೂರು: ‘ಆರ್ಥಿಕತೆಯ ಗಂಧಗಾಳಿ ಗೊತ್ತಿಲ್ಲದಂತೆ ವರ್ತಿಸುವ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಅವಧಿಗೆ ಬಜೆಟ್ ಮಂಡಿಸಿದ್ದಾದರೂ ಹೇಗೆ ಎನ್ನುವ ಪ್ರಶ್ನೆ ಮೂಡುತ್ತಿದೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅವರೇ, ಕೈಗಾರಿಕೆ ಹಾಗೂ ಉತ್ಪಾದನಾ ಕ್ಷೇತ್ರದ ವೃದ್ಧಿಗೆ ಸಹಕಾರ ನೀಡದೆ ಇದ್ದರೆ ದೇಶದ ಪ್ರಗತಿ ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದೆ. ‘ಸಿದ್ದರಾಮಯ್ಯ ಅವರೇ, ಕೃಷಿ ಭೂಮಿ ಖರೀದಿ ಮಿತಿಗೆ ವಿನಾಯಿತಿ ನೀಡುವಾಗ ನೀವು ಯಾವ …
Read More »ಕೋವಿಡ್ ಮೂರನೇ ಅಲೆ ನಿರೀಕ್ಷೆ ಸದ್ಯಕ್ಕೆ ಇಲ್ಲ: ಡಿ. ರಂದೀಪ್
ಬೆಂಗಳೂರು: ‘ಮೂರನೇ ಅಲೆ ಬಂದರೆ, ಅದು ಕೊರೋನಾ ವೈರಾಣುವಿನ ಹೊಸ ರೂಪಾಂತರ ತಳಿಯಿಂದ ಎಂದು ತಜ್ಞರು ತಿಳಿಸಿದ್ದಾರೆ. ಉದಾಹರಣೆಗೆ ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ತಳಿಯಿಂದ ಸೋಂಕು ಹರಡುವಿಕೆ ಹೆಚ್ಚಾದರೆ ಅದು ಮೂರನೇ ಅಲೆ ಎಂದರ್ಥ. ಸದ್ಯಕ್ಕೆ ಕೊರೋನಾ ಮೂರನೇ ಅಲೆಯ ನಿರೀಕ್ಷೆ ಇಲ್ಲ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಿ. ರಂದೀಪ್ ಸ್ಪಷ್ಟಪಡಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಎಲ್ಲ ವಲಯಗಳಲ್ಲಿ ಕೋವಿಡ್ ಪರೀಕ್ಷೆಗೆ ಬಂದ ಶೇ …
Read More »ಡಿಎಸ್‌ಎಸ್ ಅಧ್ಯಕ್ಷ ರಘು ವಿರುದ್ಧ ನಟ ಜಗ್ಗೇಶ್ ಮಾನನಷ್ಟ ಮೊಕದ್ದಮೆ
ಬೆಂಗಳೂರು: ಬಿಬಿಎಂಪಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ವೆಟರ್ ನೀಡದೇ ವಂಚನೆ ನಡೆಸಲಾಗಿದೆ ಎನ್ನುವ ಆರೋಪದಲ್ಲಿ ಸಂಬಂಧವಿಲ್ಲದೇ ತಮ್ಮ ಹಾಗೂ ಆರ್.ಅಶೋಕ್ ಅವರ ಹೆಸರನ್ನು ತೆಗೆದು ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್) ಅಧ್ಯಕ್ಷ ಸಿ.ಎಸ್.ರಘು ಅವರು ಅಪಮಾನಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದೇನೆ ಎಂದು ನಟ ಜಗ್ಗೇಶ್ ಟ್ವೀಟ್ ಮೂಲಕ ಹೇಳಿದ್ದಾರೆ. ‘ಬಿಬಿಎಂಪಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ವೆಟರ್‌ಗಳನ್ನು ಕರ್ನಾಟಕ ಕೈಮಗ್ಗ ನಿಗಮದಿಂದ (ಕೆಎಚ್‌ಡಿಸಿ) ಖರೀದಿಸಲಾಗಿದೆ. ಕೆಟಿಪಿಪಿ ಕಾಯ್ದೆಯ 4ಜಿ …
Read More »ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಸೆರೆ!
ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ನಗರಕ್ಕೆ ಬಂದು ಸರ ಕಳವು ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್, ಕಮಲ್ ಬಂಧಿತರು. ವಿಜಯನಗರ ದಲ್ಲಿ ಪಾದಚಾರಿ ಮಹಿಳೆ ಬಳಿ ಬೈಕ್ ನಲ್ಲಿ ಬಂದ ಆರೋಪಿಗಳ ಚಿನ್ನದ ಸರ ಕದ್ದು ಪರಾರಿ ಆಗಿದ್ದರು. ಇದರ ತನಿಖೆ ಕೈಗೊಂಡ ಪಶ್ಚಿಮ ವಿಭಾಗ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಯಿಂದ ವಿಜಯನಗರ, ಕೆಂಗೇರಿ, …
Read More »ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ದೃಢ
ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಇತರರು ಮಾದಕ ವಸ್ತು ಸೇವನೆ ಮಾಡಿದ್ದ ಸಂಗತಿ ‘ಕೂದಲು ಮಾದರಿ’ ಪರೀಕ್ಷೆಯಿಂದ ದೃಢಪಟ್ಟಿದೆ. ಅದರ ವರದಿ ಸಮೇತ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಿದ್ದಾರೆ. ತಮ್ಮದೇ ಜಾಲ ರೂಪಿಸಿಕೊಂಡು ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪಿಗಳು, ಡ್ರಗ್ಸ್ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದರು. ಕೆಲ ನಟ-ನಟಿಯರು, ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಗಣ್ಯ …
Read More »
Laxmi News 24×7