ಈ ವರಮಹಾಲಕ್ಷ್ಮೀ ವ್ರತವನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಅಂದರೆ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸುವುದು ರೂಢಿಯಾದರೂ ಹಿಂದೂಗಳ ಮನೆಯಲ್ಲಿ ಪ್ರತಿ ದಿನವೂ ಹೊಸ್ತಿಲು ಪೂಜೆಯನ್ನು ಮಾಡುವ ಮೂಲಕ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಮಹಾಲಕ್ಷ್ಮೀ ಅಂದರೆ ಶ್ರೀಮನ್ನಾರಾಯಣನ ಮಡದಿ. ತನ್ನನ್ನು ಪೂಜಿಸಿದವರಿಗೆ ಬೇಕಾದ ವರಗಳನ್ನು ನೀಡುವವಳೇ ವರಮಹಾಲಕ್ಷ್ಮೀ ಎಂದುಕೊಳ್ಳಬಹುದು. ‘ವರ’ ಅಂದರೆ ಶ್ರೇಷ್ಠ ಅಂತಲೂ ಅರ್ಥವಿದೆ. ಆದ್ದರಿಂದ ವರಮಹಾಲಕ್ಷ್ಮೀ ಅಂದರೆ ಶ್ರೇಷ್ಠಳಾದ ಮಹಲಾಕ್ಷ್ಮೀ ಎಂದೂ ಅರ್ಥವಾಗುತ್ತದೆ. ಇಂತಹ ಮಹಾಲಕ್ಷ್ಮಿಯು …
Read More »ಹಬ್ಬಕ್ಕೆ ಸಂಬಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ನೌಕರರು
ಬೆಂಗಳೂರು: ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ಜನ ಸಂಭ್ರಮ ಸಡಗರದಿಂದ ಸಜ್ಜಾಗುತ್ತಿದ್ದರೆ, ಈ ಹೊತ್ತಿನಲ್ಲಿ ಸಾರಿಗೆ ನಿಗಮಗಳ ನೌಕರರು ವೇತನ ಇಲ್ಲದೆ ಹಬ್ಬ ಹೇಗಪ್ಪಾ ಮಾಡೋದು ಎಂಬ ಚಿಂತೆಯಲ್ಲಿದ್ದಾರೆ. ಕೊರೋನಾದಿಂದ ತೀವ್ರ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಆಗಸ್ಟ್ ಅರ್ಧ ತಿಂಗಳು ಮುಗಿದರೂ ನೌಕರರಿಗೆ ಜುಲೈ ತಿಂಗಳ ವೇತನ ಬಿಡುಗಡೆ ಮಾಡಿಲ್ಲ. ಪರಿಣಾಮ 4 ಸಾರಿಗೆ ನಿಗಮಗಳಿಂದ 1 ಲಕ್ಷ 30 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಸಂಬಳ ಇಲ್ಲದೆ …
Read More »ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ
ಬೆಂಗಳೂರು: ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಎದುರಿಸುತ್ತಿರುವ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್.ನಿರಾಣಿ ಮೇಲೆ ಇಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸುವ ಸಾಧ್ಯತೆಗಳಿವೆ. ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿ, ಸೆಪ್ಟೆಂಬರ್ 13 ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿತ್ತು. …
Read More »ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರ…
ಬೆಂಗಳೂರು: ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ಹೌದು. ಯೋಗೇಶ್ ಗೌಡ ಹತ್ಯೆ ಕೇಸ್‍ನಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಕುಲಕರ್ಣಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಅವರು ಈಗಾಗಲೇ …
Read More »ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ, ಇಡೀ ಕೊಪ್ಪಳದಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿ
ಕೊಪ್ಪಳ: ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಬರೆಯದೇ ಎಲ್ಲರನ್ನೂ ಪಾಸ್ ಮಾಡಲಾಗಿದೆ. ಆದರೆ ವಿದ್ಯಾರ್ಥಿನಿಯೊಬ್ಬಳು ನಾನು ಚೆನ್ನಾಗಿ ಓದಿದ್ದೇನೆ. ನಿಮ್ಮ ಜಸ್ಟ್ ಪಾಸ್ ಆಫರ್ ಬೇಡ ಎಂದು ತಿರಸ್ಕರಿಸಿ ಗುರುವಾರ ಗಣಿತ ಪರೀಕ್ಷೆಯನ್ನು ಬರೆದಿದ್ದಾಳೆ. ಈ ಮೂಲಕ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿಯಾಗಿದ್ದಾಳೆ. ಒಬ್ಬ ವಿದ್ಯಾರ್ಥಿಗಾಗಿ 26 ಜನ ಪರೀಕ್ಷಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಹೌದು, ವಿದ್ಯಾರ್ಥಿ ಭೂಮಿಕಾ ತಾವರಗೆರೆ ಗಂಗಾವತಿಯ …
Read More »ವಾಲ್ಮೀಕಿ ಜಯಂತಿಯೊಳಗೆ ಶೇ. 7.5 ಮೀಸಲಾತಿ ಘೋಷಣೆ ಮಾಡ್ತೀವಿ; ಸಿಎಂ ಬೊಮ್ಮಾಯಿ
ಬೆಂಗಳೂರು (ಆ.19): ವಾಲ್ಮೀಕಿ ಜಯಂತ್ಯೋತ್ಸವದ ಒಳಗಾಗಿ ಪರಿಶಿಷ್ಟ ವರ್ಗಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ನಾನೇ ಹಲವು ಸಭೆಗಳಲ್ಲಿ ಭಾಗಿಯಾಗಿ ಕೆಲಸ ಮಾಡಿದ್ದೀನಿ. ಆದ್ದರಿಂದ ಮುತುವರ್ಜಿ ವಹಿಸಿ ಕೆಲಸ ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗದ …
Read More »ಲೇಡಿ ಪೊಲೀಸ್ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು
ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ …
Read More »ಈ ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆಯಲ್ಲ ಬೆಂಗಳೂರಿನಲ್ಲಿಯೇ ನಡೆಯಲಿದೆ
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದ್ದು 10 ದಿನಗಳ ಕಾಲ ಮುಂಗಾರು ಅಧಿವೇಶ ನಡೆಯಲಿದೆ. ಸೆ.13ರಿಂದ ಸೆ.24ರ ವರೆಗೆ ವಿಧಾನಮಂಡಲ ಅಧಿವೇಶ ನಡೆಸಲಾಗುವುದು ಎಂದು ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಬಾರಿ ಬೆಂಗಳೂರಿನಲ್ಲಿಯೇ ಹತ್ತುದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದರು. ಸಂಪುಟ ಉಪಸಮಿತಿ ರಚನೆಗೆ ಕ್ಯಾಬಿನೇಟ್ …
Read More »ಕುಡಚಿ ಪೋಲಿಸರ ನವರಂಗಿ ಆಟ, ಎಗ್ಗಿಲ್ಲದೇ ನಡೆಯುತ್ತಿದೆ ಮಟ್ಕಾ ಓಟ
ಬೆಳಗಾವಿ: ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ರಮ ಮಟ್ಕಾ ದಂಧೆ ಎಗ್ಗಿಲ್ಲದೆ ಸಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಗೋಕಾಕ್, ರಾಯಬಾಗ, ಘಟಪ್ರಭಾ, ಮೂಡಲಗಿ, ಕುಡಚಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಮಟಕಾ ಹಾವಳಿ ಮಿತಿ ಮೀರಿದೆ. ಈ ಮಟ್ಕಾ ದಂಧೆಗೆ ಬೀಟ್ ಪೊಲೀಸರ ಮುಖಾಂತರ ಪಿಎಸ್ಐ ಲೆವೆಲ್ ಅಧಿಕಾರಿಗಳು ಬುಕ್ಕಿಗಳ ಸಂಗ ಬೆಳೆಸಿದ್ದು, ಎಂಜಲ ಕಾಸಿಗಾಗಿ ಪೊಲೀಸರ ಕರಿ ನೆರಳಲ್ಲೇ ಈ ಅಕ್ರಮ ಮಟ್ಕಾ ದಂಧೆ ನಡೆಯುತ್ತಿದೆ. ಇನ್ನು ರಾಯಬಾಗ ತಾಲೂಕಿನ …
Read More »ಅಫ್ಘಾನ್ ಪ್ರಜೆಗಳಿಗೆ ಭಯ ಬೇಡ: ಅರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದಲ್ಲಿ 339 ಮಂದಿ ಅಫ್ಘಾನಿಸ್ತಾನದ ಪ್ರಜೆಗಳಿದ್ದಾರೆ. ಈ ಪೈಕಿ 192 ಮಂದಿ ವಿದ್ಯಾರ್ಥಿಗಳಿದ್ದಾರೆ. ಅಫ್ಘಾನ್ ಘಟನೆ ಸಂಬಂಧ ಯಾರು ಭಯ ಪಡುವ ಅಗತ್ಯವಿಲ್ಲ. ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರ ನೆರವಿಗೆ ಬರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಸಿಎಆರ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ನಗರ ಪೊಲೀಸರು ಪತ್ತೆ ಮಾಡಿದ 36 ಕೋಟಿ ರೂ. ಮೌಲ್ಯದ ಕಳವು ಮಾಲುಗಳ ಪ್ರದರ್ಶನ ಮತ್ತು ಮಾಲೀಕರಿಗೆ …
Read More »
Laxmi News 24×7