ಬೆಳಗಾವಿ: ಹಿರಣ್ಯಕೇಶಿ ನದಿ ಪ್ರವಾಹದಿಂದ ಮನೆ ಕುಸಿದು ಬಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿ ಕೊಚ್ಚಿಕೊಂಡು ಹೋಗಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ಬಾಲಕಿಯ ಕಣ್ಣೀರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ನಿಸರ್ಗ ದೇಸಾಯಿ ಎಂಬ ಎಂಟು ವರ್ಷದ ಬಾಲಕಿ ಪುಸ್ತಕ, ಆಟಿಕೆ ಸಾಮಾಗ್ರಿ, ಟಿವಿ ಕಳೆದುಕೊಂಡು ಕಣ್ಣೀರಿಟ್ಟಿದ್ದಳು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬಾಲಕಿಗೆ ಪುಸ್ತಕ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಡುವಂತೆ ಸಿಎಂ …
Read More »ನಾಳೆಯಿಂದಲೇ ಶಾಲೆ ಆರಂಭದ ನಿರ್ಧಾರ ಕೈಬಿಟ್ಟ ರುಪ್ಸಾ
ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ …
Read More »ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ …
Read More »ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ
ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ …
Read More »ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.
*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು. *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ. *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …
Read More »ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ
ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‍ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕ ಸಿಂಗಂ ಅಂತಲೇ ಹೆಸರಾಗಿದ್ದ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. …
Read More »ಸಿಎಂ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ!
ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ವಹಿಸಿಕೊಂಡ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಆಗಲಿದೆ. ನಗರ ಪೊಲೀಸ್ ಆಯುಕ್ತ ಸ್ಥಾನಕ್ಕೇರಲು ನಾಲ್ವರು ಅಧಿಕಾರಿಗಳು ರೇಸ್ ನಲ್ಲಿದ್ದಾರೆ. ಆಗಸ್ಟ್ಗೆ ಪೊಲೀಸ್ ಆಯುಕ್ತರ ಅಧಿಕಾರ ಅವಧಿ ಅಂತ್ಯಗೊಳ್ಳಲಿದೆ. ಹೀಗಾಗಿ ಮುಂದಿನ ಪೊಲೀಸ್ ಆಯುಕ್ತರ ಹುದ್ದೆಗೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪ್ರತಾಪ್ ರೆಡ್ಡಿ, ಗುಪ್ತಚರ ವಿಭಾಗದ ಬಿ. ದಯಾನಂದ್, ಪೊಲೀಸ್ ತರಬೇತಿ ವಿಭಾಗದ ಅಮೃತ್ ಪೌಲ್, ರಾಜ್ಯ …
Read More »ಯಾವುದೇ ಸಂಘದ ಅಭಿವೃದ್ಧಿಯಲ್ಲಿ ಅಧ್ಯಕ್ಷರು, ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ: ಸತೀಶ ಜಾರಕಿಹೊಳಿ
ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳು ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ …
Read More »ಚಿಕ್ಕೋಡಿ: ಕಾಲೇಜು ಕಾಂಪೌಂಡ್ ಗೋಡೆಗೆ ಅಳವಡಿಸಿದ್ದ ಗೇಟ್ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವು
ಚಿಕ್ಕೋಡಿ: ಕಾಲೇಜು ಕಾಂಪೌಂಡ್ ಗೋಡೆಗೆ ಅಳವಡಿಸಿದ್ದ ಗೇಟ್ ಆಕಸ್ಮಿಕವಾಗಿ ಬಿದ್ದ ಕಾರಣ 10 ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಚಿಕ್ಕೋಡಿಯ ಆರ್.ಡಿ ಕಾಲೇಜಿನಲ್ಲಿ ನಡೆದಿದೆ. ಚಿಕ್ಕೋಡಿ ನಗರದ ಇಂದಿರಾನಗರ ನಿವಾಸಿಯಾಗಿದ್ದ ಸೂಫಿಯಾನ್ ರಾಜು ಮುಲ್ಲಾ (10) ಮೃತ ದುರ್ದೈವಿ. ಬಾಲಕ ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »
Laxmi News 24×7