ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಅಪಘಾತಕ್ಕೀಡಾಗಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಸ್ವರೂಪದ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಘಟನೆ ನಡೆಯುವಾಗ ಮುಖ್ಯಮಂತ್ರಿಯವರ ಕಾರಿನಲ್ಲಿದ್ದರು ಎಂದು ವರದಿಯಾಗಿದೆ. ಘಟನೆಯ ವಿವರ: ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಿವರಾಮ್ ಹೆಬ್ಬಾರ್ ಇದ್ದರು. ವಿಮಾನ ನಿಲ್ದಾಣದಿಂದ …
Read More »ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ
ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸಾರಿಗೆ ಇಲಾಖೆ 4 ನಿಗಮಗಳ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
Read More »ಯಾವ ಖಾತೆ ಕೊಟ್ಟರೂ ಸಹ ಸಮರ್ಥವಾಗಿ ನಿಭಾಯಿಸುತ್ತೇನೆ: ಶಾಸಕ ರೇಣುಕಾಚಾರ್ಯ ಹೇಳಿಕೆ
ಬೆಂಗಳೂರು:ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ರೆ ತಪ್ಪೇನಿಲ್ಲ, ಈಗಲೂ ಯಡಿಯೂರಪ್ಪನವರೇ ನಮ್ಮ ನಾಯಕ ಎಂದು ಎದೆತಟ್ಟಿ ಹೇಳುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು. ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ, ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಆರು ಶಾಸಕರಿದ್ದು, ಜಿಲ್ಲೆಯನ್ನು ಕಡೆಗಣಿಸದಂತೆ ಮನವಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಮ್ಮ ಜಿಲ್ಲೆಗೆ ಒಂದು ಸಚಿವ …
Read More »ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ
ಬೆಂಗಳೂರು: ನಾಳೆ (ಶುಕ್ರವಾರ) ಬೆಳಗ್ಗೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಬಗ್ಗೆ ಚಿಂತನೆಯಿದೆ. ಅಮಿತ್ ಶಾ, ಜೆಪಿ ನಡ್ಡಾ, ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕರೆ ಮಾಡಿ ಶುಭ ಕೋರಿದ್ದಾರೆ. ಉತ್ತಮ ಆಡಳಿತ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ. ದೆಹಲಿ ಭೇಟಿಯ ವೇಳೆ ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರನ್ನು, ಸಚಿವರನ್ನು ಭೇಟಿಯಾಗುತ್ತೇನೆ …
Read More »ಉತ್ತರ ಕನ್ನಡ ಪ್ರವಾಸದತ್ತ ಹೊರಟ ಸಿಎಂ ಬೊಮ್ಮಾಯಿ; ಸಚಿವ ಸ್ಥಾನಕ್ಕೆ ಲಾಬಿ ಜೋರು, ಯಾರೆಲ್ಲಾ ಫೀಲ್ಡ್ಗೆ ಇಳಿದಿದ್ದಾರೆ?
ಬದಲಾಣೆ ಬಡಿದಾಟದಲ್ಲಿ ಗೆದ್ದು, ಸಿಎಂ ಸಿಂಹಾಸನಕ್ಕೇರಿದ ಬಸವರಾಜ್ ಬೊಮ್ಮಾಯಿ ರಾಜ್ಯ ಸುತ್ತೋಕೆ ರೆಡಿಯಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಇವತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರೋ ಸಿಎಂ ಬಸವರಾಜ …
Read More »ರಾಜ್ಯ ಸಚಿವ ಸಂಪುಟ ರಚನೆ: ಹೈಕಮಾಂಡ್ ಆದೇಶಕ್ಕೆ ಕಾದು ಕುಳಿತಿರುವ ಸಿಎಂ ಬೊಮ್ಮಾಯಿ
ಬೆಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಆಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಕೂಡ ಪ್ರಮಾಣ ಸ್ವೀಕರಿಸಿದ್ದಾಗಿದೆ. ಈಗ ಅವರ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಇನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ. ಯಡಿಯೂರಪ್ಪ ಅವರ ಸಂಪುಟದಲ್ಲಿ 33 ಮಂದಿ ಸಚಿವರಿದ್ದರು. ಇದೀಗ ಹೊಸ ಸಂಪುಟ ರಚನೆ ಮಾಡುವ ಅವಕಾಶ ಬೊಮ್ಮಾಯಿಯವರಿಗೆ ಸಿಕ್ಕಿದೆ. ಸಂಪುಟ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬೊಮ್ಮಾಯಿಯವರು ಬಿಜೆಪಿ ಹೈಕಮಾಂಡ್ ಆದೇಶಕ್ಕಾಗಿ ಕಾದು ಕುಳಿತಿದ್ದಾರೆ. ಸಂಪುಟ ರಚನೆ ಕುರಿತು …
Read More »ನಾನೂ ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ಬೆಂಗಳೂರು: ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದು ಸ್ಮಾರ್ಟ್ ಆಗಿದ್ದೇನೆ. ಗಡ್ಡ ಬಿಟ್ಟಾಗ ಶಿವಾಜಿ ಆಗಿದ್ದೆ, ಈಗ ಬಸವಣ್ಣ ಆಗಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ ಪದಗ್ರಹಣದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಯತ್ನಾಳ್, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ತೆಗೆದುಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಾನೂ ಎಂದೂ ಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿ ಯಾರ ಮನೆಯ ಬಾಗಿಲು ತಟ್ಟಿಲ್ಲ. ಈ …
Read More »ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ
ಬೆಂಗಳೂರು, – ಇಂದಿನಿಂದ ರಾಜ್ಯಾದ್ಯಂತ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯೇ ಇತ್ತು. ಸೋಂಕಿನ ಭೀತಿಯ ಮಧ್ಯೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು ಆರಂಭ ಮಾಡಲಾಗಿದೆ. ಕಾಲೇಜುಗಳು ಆರಂಭವಾಗಿದ್ದರೂ, ವಿದ್ಯಾರ್ಥಿಗಳ ಹಾಜರಾತಿ ಅನೇಕ ಕಡೆಗಳಲ್ಲಿ ಶೇಕಡಾ 50 ರಿಂದ 70 ರಷ್ಟು ದಾಖಲಾಗಿದೆ. ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಮತ್ತು ತರಗತಿಗೆ ಹಾಜರಾಗಲು ಬಯಸದ …
Read More »ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ, ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರು: ನಕಲಿ ಕೀ ಬಳಸಿ ನಿರ್ಮಾಪಕನ ಮನೆಗೆ ಕನ್ನ ಹಾಕಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಶೇಖರ್(32), ಅಭಿಷೇಕ್(34) ಬಂಧಿತ ಆರೋಪಿಗಳು. ಆರೋಪಿ ಚಂದ್ರಶೇಖರ್ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಕಾರು ಚಾಲಕನಾಗಿದ್ದ. ಜುಲೈ 10ರಂದು ಆರೋಪಿ ತನ್ನ ಮಾಲೀಕನ ಮನೆಗೆ ಕನ್ನ ಹಾಕಿದ್ದಾನೆ. ಅಭಿಷೇಕ್ ಜೊತೆ ಸೇರಿಕೊಂಡು ಕಳ್ಳತನಕ್ಕೆ ಹೊಂಚು ಹಾಕಿ 3 ಲಕ್ಷ ನಗದು, 710 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬಳಿಕ …
Read More »ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರು
ಬೆಳಗಾವಿ- ರಾಜ್ಯದ 30 ನೇಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಹೊಸ ರಾಜಕೀಯ ಬಿರುಗಾಳಿ ಬೀಸುತ್ತಿದೆ.ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರುವಾಗಿದೆ. ಹೊಸ ಸಿಎಂ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಜೊತೆಗೆ ಬುಡಾ,ಕಾಡಾ,ಅಲ್ಪಸಂಖ್ಯಾತರ ನಿಗಮ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು ಯಡಿಯೂರಪ್ಪ …
Read More »
Laxmi News 24×7