ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »BSY ಜತೆ ಸಮುದಾಯ : ಬದಲಾವಣೆ ಕೆಂಡಕ್ಕೆ “ಆಡಿಯೋ’ ತುಪ್ಪ : ಬಿಎಸ್‌ವೈ ಮೌನ
ಬೆಂಗಳೂರು : ಒಂದು ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಿದರೆ ಬಿಜೆಪಿ ಮೇಲೆ ಅಡ್ಡ ಪರಿಣಾಮ ಉಂಟಾದೀತು! ಇದು ಲಿಂಗಾಯತ ನಾಯಕರು ಮತ್ತು ಮಠಾಧೀಶರು ನೀಡಿರುವ ನೇರ ಎಚ್ಚರಿಕೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರದು ಎನ್ನಲಾದ ಆಡಿಯೋ ಬಹಿರಂಗವಾದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಇನ್ನಷ್ಟು ಬಿಸಿ ಪಡೆದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಯಡಿಯೂರಪ್ಪ, ವಲಸಿಗ ಸಚಿವರು ಮತ್ತು ಸಿಎಂ ಬೆಂಬಲಿಗರು ಮೌನಕ್ಕೆ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, …
Read More »ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ
ಬೆಳಗಾವಿ– ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ, (ಅಭಿವೃದ್ಧಿ) …
Read More »6 ಬ್ಯಾಗ್ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್‌ಡಿಕೆ
ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ಬಾಗಲಕೋಟೆ: ಶಾಲೆಯಲ್ಲಿ ಕಳ್ಳತನ; ಕಂಪ್ಯೂಟರ್ ಕದ್ದೋಯ್ದ ಖದೀಮರು
ಬಾಗಲಕೋಟೆ: ತಾಲೂಕಿನ ತುಳಸಿಗೇರಿ ಗ್ರಾಮದ ಸರ್ಕಾರಿ ಮಾದರಿ ಕುವೆಂಪು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನವಾಗಿದೆ. ಶಾಲೆಯಲ್ಲಿನ ಒಟ್ಟು ನಾಲ್ಕು ಕಂಪ್ಯೂಟರ್ ಮತ್ತು ಒಂದು ಪ್ರಿಂಟರ್ನ ಕದ್ದೊಯ್ದಿದ್ದಾರೆ. ಕಂಪ್ಯೂಟರ್ ಎಜ್ಯುಕೇಶನ್ ಕೊಠಡಿಯಲ್ಲಿದ್ದ ಒಟ್ಟು 11 ಕಂಪ್ಯೂಟರ್ಗಳ ಪೈಕಿ ಮೂರು ಕಂಪ್ಯೂಟರ್, ಶಾಲೆ ಕಾರ್ಯಾಲಯದಲ್ಲಿದ್ದ ಒಂದು ಕಂಪ್ಯೂಟರ್, ಒಂದು ಪ್ರಿಂಟರ್ನ ಕಳ್ಳತನ ಮಾಡಿದ್ದಾರೆ. ಶಾಲೆಯಲ್ಲಿ ಇಂದು (ಜುಲೈ 19) ಬೆಳಿಗ್ಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿದೆ. ಎಲ್ಲ ಪರೀಕ್ಷಾ ಕೊಠಡಿಗಳನ್ನು ಓಪನ್ ಮಾಡಿದ್ದಾರೆ. ಕಚೇರಿ ಕೊಠಡಿಯಲ್ಲಿದ್ದ …
Read More »ಬೆಳಗಾವಿ ವಿವಾಹಿತೆಯ ಜೀವ ತೆಗೆಯಿತು ಯುವಕನ ಆ ಒಂದು ವಾಟ್ಸ್ಆಯಪ್ ಸ್ಟೇಟಸ್!
ಬೆಳಗಾವಿ: ವಿವಾಹಿತೆಯೊಬ್ಬಳನ್ನು ಪ್ರೀತಿಸುವುದಾಗಿ ತನ್ನ ಸ್ಟೇಟಸ್ನಲ್ಲಿ ಯುವಕನೊಬ್ಬ ಬರೆದುಕೊಂಡಿದ್ದು, ಇದರಿಂದ ಹೆದರಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ನಡೆದಿದೆ. ಸುತಗಟ್ಟಿ ಗ್ರಾಮದ ಅಕ್ಷತಾ ಪೂಜಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುತಗಟ್ಟಿ ಗ್ರಾಮದ ಸಂತೋಷ ತನ್ನ ವಾಟ್ಸ್ಆಯಪ್ ಸ್ಟೇಟಸ್ಗೆ ಅಕ್ಷತಾರ ಫೋಟೋ ಹಾಕಿಕೊಂಡು ಅದರಲ್ಲಿ ಮೆಸೇಜ್ ಬರೆದಿದ್ದ. ಇದನ್ನು ನೋಡಿ ಗಾಬರಿಯಿಂದ ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಳು ತಿಂಗಳ …
Read More »
Laxmi News 24×7