Breaking News

ಜಿಲ್ಲೆ

ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ

ಚಿಕ್ಕೋಡಿ: ಅನಧಿಕೃತ ಪಾನ್‌ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್‌ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್‌ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್‌ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ …

Read More »

ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆ

ಬೆಳಗಾವಿ:  ಕಾರ್ಯಕರ್ತರ ಸಹನೆ, ಸಹಕಾರ ಹಾಗೂ ಅವರ ನಿಸ್ವಾರ್ಥ ಸೇವೆಯಿಂದ ಬಿಜೆಪಿ ಪಕ್ಷ ಇಂದು ಪ್ರಪಂಚದಲ್ಲಿಯೆ ಅತಿಹೆಚ್ಚು ಕಾರ್ಯಕರ್ತರನ್ನು ಹೊಂದಿದ ಸಮರ್ಥ ಪಕ್ಷ ಎನ್ನುವದು ಜಗಜ್ಜನಿತವಾಗಿದೆ ಎಂದು ಉಪಸಭಾಪತಿ ಆನಂದ ಮಾಮನಿ ಹೇಳಿದರು. ನಗರದ ಗೋಮಟೇಶ್ವರ ಸಭಾ ಭವನದಲ್ಲಿ ಶನಿವಾರ ನಡೆದ ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ವರ್ಚುವಲ್ ಸಭೆಯನ್ನು ಉದ್ಘಾಟಸಿ ಮಾತನಾಡಿ, ಚುನಾವಣೆಗೆ ಮಾತ್ರ ಸೀಮಿತವಾಗದೆ ಜನರ ಸಂಕಷ್ಟಕ್ಕೆ ಸದಾ ಸ್ಪಂದಿಸುವದೆ ಪಕ್ಷದ ಸಿದ್ದಾಂತವಾಗಿದೆ. ಬಿಡುವಿಲ್ಲದೆ ದೇಶದ ಜನರ …

Read More »

ಕೆಆರ್​​ಎಸ್​ ವಾರ್​ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ

ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್​ಎಸ್​ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್​ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು. ಸಂಸದೆ ಸುಮಲತಾ ಅಂಬರೀಶ್​ ಹಾಗೂ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ …

Read More »

ಕಾರ್ಯಕರ್ತನಿಗೆ ಹೊಡೆದ ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್​ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ..? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಎಂದು ರಾಜ್ಯ ಬಿಜಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧ ಕಿಡಿಕಾರಿದೆ. ಡಿ.ಕೆ ಶಿವಕುಮಾರ್​ ಮಾದೇಗೌಡರ ಆರೋಗ್ಯ ವಿಚಾರಿಸಲು ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಗೆ ತೆರಳಿದ್ದರು, ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತರೊಬ್ಬರು ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆದುಕೊಳ್ಳಲು …

Read More »

ಬೆಂಗಳೂರಲ್ಲಿ ಶೇ. 70ರಷ್ಟು ಸೋಂಕಿತರಿಗೆ ರೂಪಾಂತರಿ ವೈರಸ್, ಅಲರ್ಟ್​ ಆದ ಬಿಬಿಎಂಪಿ

ಬೆಂಗಳೂರು: ನಗರದಲ್ಲಿ ದಿನೇ ದಿನೇ ರೂಪಾಂತರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗ್ತಿದೆ. ಲ್ಯಾಬ್​​​ಗೆ ಕಳುಹಿಸಿದ ಬಹುತೇಕ ಸ್ಯಾಂಪಲ್‌ಗಳೆಲ್ಲವೂ ರೂಪಾಂತರಿ ವೈರಸ್ ಅಂತ ದೃಢಪಟ್ಟಿದೆ. ನಗರದ ಶೇಕಡಾ 70ರಷ್ಟು ಸೋಂಕಿತರಿಗೆ ರೂಪಂತರಿ ವೈರಸ್ ತಗುಲಿರೋದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸಾಂಕ್ರಾಮಿಕ ನಿಯಂತ್ರಣಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಫುಲ್ ಆಯಕ್ಟೀವ್ ಆಗಿದ್ದು, ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಹಿಂದೆ ಪಾಸಿಟಿವ್ ಬಂದ ಶೇಕಡಾ 5ರಷ್ಟು ಸ್ಯಾಂಪಲ್ಸ್ ಮಾತ್ರ …

Read More »

ಬೆಳಗಾವಿ: “ಶಾಸಕ‌ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರ ಮುಗಿದು ಹೋದ ಅಧ್ಯಾಯ‌” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಬೆಳಗಾವಿ: “ಶಾಸಕ‌ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರ ಮುಗಿದು ಹೋದ ಅಧ್ಯಾಯ‌” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು‌ ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …

Read More »

ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.

ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ.   ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ.         ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …

Read More »

ಕಾಂಗ್ರೆಸ್‌ ಸೇರಲು ಸಾ.ರಾ. ಗೋವಿಂದು ಒಲವು?

ಬೆಂಗಳೂರು: ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದು, ಪಕ್ಷದ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದೇ 17ರಂದು ಬಸವೇಶ್ವರನಗರದಲ್ಲಿ ಪಡಿತರ ಕಿಟ್‌ ವಿತರಣೆ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಅದರಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲು ತೆರಳಿದ್ದ ಗೋವಿಂದು, ಪಕ್ಷ ಸೇರ್ಪಡೆ ಕುರಿತೂ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ …

Read More »

ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಯಂತ ಕಾಯ್ಕಿಣಿ ಹಾಗೂ ‘ಎ. ಪಂಕಜ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಎಚ್‌.ಎನ್. ಆರತಿ ಆಯ್ಕೆಯಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶುಕ್ರವಾರ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿವೆ ಎಂದು ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:08.07.2021,00:00 ರಿಂದ 23:59 ರವರೆಗೆ) ಯಲ್ಲಿ 2290 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 68 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 09) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 3045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ …

Read More »