ಬಾಗಲಕೋಟೆ: ವಿವಾಹಿತ ಯುವತಿಯ ಸಾವಿಗೆ ಆಕೆಯ ಪ್ರಿಯಕರನೇ ಕಾರಣ ಎಂದು ಆರೋಪಿಸಿದ ಯುವತಿಯ ಪೋಷಕರು ಪ್ರಿಯಕರನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಇಳಕಲ್ ತಾಲೂಕಿನ ಕೆಲೂರ ಗ್ರಾಮದಲ್ಲಿ ನಡೆದಿದೆ. ಕೆಲೂರ ಗ್ರಾಮದ ವಿವಾಹಿತ ಯುವತಿ ಬಸಮ್ಮ ಪ್ರಿಯಕರನ ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಇದನ್ನು ಕಂಡು ಆಕ್ರೋಷಗೊಂಡ ಯುವತಿಯ ಪೋಷಕರು ಯುವತಿಯ ಸಾವಿಗೆ ಪ್ರೀಯಕರ ರಂಜೀತ್ ಕಾರಣ ಎಂದು ಪ್ರಿಯಕರನ ಮನೆಗೆ ಬೆಂಕಿಹಚ್ಚಿ ಆಕ್ರೋಷ ವ್ಯಕ್ತಪಡಿಸಿದ್ದಾರೆ. ರಂಜೀತ್ …
Read More »ಬೆಳಗಾವಿ ಮಹಾನಗರ ಪಾಲಿಕೆಯಿಂದ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿ ಪ್ರಕಟ
ಬೆಳಗಾವಿ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯ 58 ವಾರ್ಡುಗಳ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9 2021ರಂದು ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ ದಿನಾಂಕ: 01-01-2021ರ ಅರ್ಹತಾ ದಿನಾಂಕಕ್ಕೆ ಪರಿಷ್ಕರಣೆ ಯಾದ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ದಿನಾಂಕ 18-01-2021ರ ಮತದಾರರ ಪಟ್ಟಿಯ ಡೇಟಾ ಪಡೆದುಕೊಂಡು ಬೆಳಗಾವಿ ಮಹಾನಗರಪಾಲಿಕೆಯ 58 ವಾರ್ಡಗಳು ವಾರ್ಡವಾರು ಕರಡು ಮತದಾರರ ಪಟ್ಟಿಯನ್ನು ಸಿದ್ದಪಡಿಸಿ ದಿನಾಂಕ 28-06-2021ರಂದು ಮಾನ್ಯ …
Read More »ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ : ಕಿಡಿಕಾರಿದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್
ಬೆಂಗಳೂರು: ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂಬರೀಶ್ ಅಣ್ಣನ ಬಗ್ಗೆ ಯಾರು ಮಾತನಾಡಿಲ್ಲ ಹೇಳಿ? ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ. ಸರ್ಕಾರದ ಗೌರವದೊಂದಿಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಹೇಳ್ತೀರಿ. ಮೊನ್ನೆ ಸಂಚಾರಿ ವಿಜಯ್ ಮೃತಪಟ್ಟಾಗಲೂ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಮಾಡಲಾಗಿದೆ. ನೀವು ಸ್ವಂತವಾಗಿ ಏನು …
Read More »ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ
ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು …
Read More »ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್
ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು. ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ …
Read More »ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
ಬೆಳಗಾವಿ: ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ …
Read More »ಎಪಿಎಂಸಿಗಳಿಗೆ ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು: ತೋಮರ್
ನವದೆಹಲಿ: ನಿಯಂತ್ರಿತ ಮಾರುಕಟ್ಟೆಗಳ ಸಾಮರ್ಥ್ಯ ವೃದ್ಧಿ ಮತ್ತು ರೈತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಕೃಷಿ ಮೂಲಸೌಕರ್ಯ ನಿಧಿಯಿಂದ (ಎಐಎಫ್) ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಗಳು ನೆರವು ಪಡೆಯಲು ಅರ್ಹವಾಗಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಯೋಜನೆಗೆ ಅನುಮೋದನೆ …
Read More »ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಕಾಣೆಯಾಗಿದ್ದಾಳೆ ದಿವ್ಯಶ್ರೀ
ಬೆಳಗಾವಿ : ದತ್ತ ರಾಮ್ ಹರಿಶ್ಚಂದ್ರ ಅನ್ವೇಕರ್ ಅವರ ಮಗಳು ದಿವ್ಯಶ್ರೀ ರಾಜೇಂದ್ರ (ವಯಸ್ಸು ೨೭) ಜೂನ್ ೨೯ ರಂದು ಮಧ್ಯಾಹ್ನ ೧ ಗಂಟೆ ಸುಮಾರಿಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋಗಿ ಕಾಣೆಯಾಗಿದ್ದಾಳೆ ಎಂದು ಜುಲೈ ೮ರಂದು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವ್ಯಶ್ರೀ ಪಾವುಸ್ಕರ (೨೭) ೪ ಅಡಿ ೮ ಇಂಚು ಎತ್ತರವಾಗಿದ್ದು ದುಂಡುಮುಖ, ಗೋಧಿ ಮೈಬಣ್ಣ ಉದ್ದ ಮೂಗು, ಎತ್ತರವಾದ ಹಣೆ, ಮೈಯಿಂದ ಸದೃಢವಾಗಿರುತ್ತಾಳೆ, ಹಾಗೂ …
Read More »ಶ್ರೀ ಲಕ್ಷ್ಮಣ ರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ದಂಪತಿಗಳ 10ನೆಯ ಪುಣ್ಯ ಸ್ಮರಣೆ : ಸದಾ ಸ್ಮರಣೆಯಲ್ಲಿ ಕುಟುಂಬ..
ಇಂದು ಗೋಕಾಕ ನಗರದ ಜನತೆಗೆ ಒಂದು ವಿಶೇಷ ವಾದ ದಿನ ಇಂದು ಗೋಕಾಕ ಸಾಹುಕಾರರ ತಂದೆ ತಾಯಿಯ ಪುಣ್ಯ ಸ್ಮರಣೆಯ ದಿನ ಇಂದಿಗೆ ಹತ್ತು ವರ್ಷಗಳು ಕಳೆದರೂ ನಿಮ್ಮ ನೆನಪು ,ಮಾತ್ರ ಸದಾ ಸ್ಮರಣೀಯ ಎನ್ನುತೆ ಕುಟುಂಬ. ಹೌದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳ ಪುಣ್ಯ ಸ್ಮರಣೆಯ ದಿನವಿದು ಹತ್ತು ವರ್ಷಗಳು ಕಳೆದರೂ ನೀವು ನಿಮ್ಮ ನೆನಪು ಮಾತ್ರ ನಮ್ಮೆಲ್ಲರ ಹೃದಯದಲ್ಲಿ ಶಾಶ್ವತ ಅಂತಾರೆ ಕುಟುಂಬದ ಜನ. ನಿಮ್ಮ ಆದರ್ಶ …
Read More »ಕ್ರಷರ್ ಘಟಕದಲ್ಲಿ ಹಗಲಿನಲ್ಲೇ ಬ್ಲಾಸ್ಟ್: ಕಲ್ಲುಬಡಿದು ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ
ವಿಜಯಪುರ: ಜಲ್ಲಿ ಕಲ್ಲು ಹಾಗೂ ಕ್ರಷರ್ ಘಟಕದಲ್ಲಿ ಬ್ಲಾಸ್ಟ್ ನಡೆಸಿದ ಪರಿಣಾಮ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೂವರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಅಲಿಯಾಬಾದ್ ಕಲ್ಲು ಕ್ರಷರ್ ಘಟಕದ ಬಳಿ ಘಟನೆ ನಡೆದಿದ್ದು ಸಾವಳಗಿ ಕಲ್ಲು ಕ್ರಷರ್ ಘಟಕದಲ್ಲಿನ ಕಲ್ಲಿನ ಕಣಿಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಮೂವರು ಗಾಯಾಳುಗಳನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಈ …
Read More »
Laxmi News 24×7