ಬೆಳಗಾವಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿ ಆದೇಶ ಹೊರಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹರ್ಷವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ, ಹೈದ್ರಾಬಾದ್-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣವಾದ ಮೇಲೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆಯ ಹೆಸರನ್ನು ಬದಲಾಯಿಸಿ ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ಮರುನಾಮಕರಣ ಮಾಡಿರುವುದು ಅತ್ಯಂತ ಸೂಕ್ತವೆನಿಸಿದೆ. ಈ ಭಾಗದ ಜನತೆಯ …
Read More »ಪ್ರಧಾನಿ ಮೋದಿಯೇ ವಿಫಲವಾಗಿರುವಾಗ ಹೊಸ ಸಚಿವರೇನು ಮಾಡಿಯಾರು?: ಸತೀಶ್ ಜಾರಕಿಹೊಳಿ
ಬೆಳಗಾವಿ: ‘ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿರುವಾಗ ಸಚಿವರು ಏನು ಮಾಡಿಯಾರು?’. ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಗಂಟೆಗೆ 50 ಕಿ.ಮೀ. ವೇಗದಲ್ಲಿ ಓಡುತ್ತಿತ್ತು. ಈಗ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ಮುಂದೆ ಗಂಟೆಗೆ 30 ಕಿ.ಮೀ. ವೇಗದಲ್ಲಿ ಹೋಗಲಿದೆ. ಮೀರಜ್‌ನಿಂದ ಪಂಢರಪುರಕ್ಕೆ ಮೆರವಣಿಗೆ …
Read More »ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಖಾಸಗಿ ಕಂಪನಿಯೊಂದರಿಂದ ₹12 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದರು. ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಾಹಂ ಮನವಿ ಸಲ್ಲಿಸಿದ್ದರು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂಷನ್ಗೆ ಗವರ್ನರ್ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ವೈ ಮತ್ತು ಇತರರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು …
Read More »ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದಮ್ ಇಲ್ಲ : ಸಿದ್ದರಾಮಯ್ಯ
ಬೆಂಗಳೂರು: 15ನೇ ಹಣಕಾಸು ಆಯೋಗ 5,495 ಕೋಟಿ ರೂ ವಿಶೇಷ ಅನುದಾನ ಕೊಡಬೇಕು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ. ಇದರ ಬಗ್ಗೆ ಕೇಳೋಕೆ ಸಿಎಂ ಯಡಿಯೂರಪ್ಪಗೆ ದಮ್ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬರಬೇಕಿದ್ದ 5,495 …
Read More »ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಕಾಂಗ್ರೆಸ್ ಸೈಕಲ್ ರ‍್ಯಾಲಿ
ಬೆಳಗಾವಿ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ಸೈಕಲ್ ರ‍್ಯಾಲಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಮೊದಲು ದಿನ ಬಳಕೆ ವಸ್ತುಗಳ ಬೆಲೆ ಹಾಗೂ ಇಂಧನ ಬೆಲೆ ಏರಿಕೆ ಕೂಡಲೇ ಕಡಿಮೆ ಮಾಡಬೇಕೆಂದು ಆಗ್ರಹಿಸಿ, …
Read More »ಕರ್ನಾಟಕ ಸರ್ಕಾರದಿಂದ ಮಹತ್ತರ ಹೆಜ್ಜೆ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 1ರಷ್ಟು ಮೀಸಲಾತಿ
ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯದಲ್ಲಿ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಬೇಕಾದ ಯಾವುದೇ ಸೇವೆ ಅಥವಾ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (transgenders ) ಒಂದು ಶೇಕಡಾ ಮೀಸಲಾತಿ ನೀಡುವಂತೆ ಅಧಿಸೂಚನೆ ಹೊರಡಿಸಿದೆ. ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಈ ಆಂತರಿಕ ಮೀಸಲಾತಿ ಲಭ್ಯವಿರುತ್ತದೆ. 1977 ರ ಕರ್ನಾಟಕ ನಾಗರಿಕ ಸೇವೆಗಳ …
Read More »ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ ೧೫ ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್‌ಡಿಪಿಆರ್ ಇಲಾಖೆಯ ೨೫ ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ …
Read More »IMA: ಐಎಂಎ ಪ್ರಕರಣ- ಮಾಜಿ ಸಚಿವ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡಿದ ಸರ್ಕಾರ
ಬೆಂಗಳೂರು: ಐಎಂಎ ಪ್ರಕರಣದಲ್ಲಿ ಕೇಳಿಬಂದಿದ್ದ ಪ್ರಮುಖ ಹೆಸರುಗಳಲ್ಲಿ ಮಾಜಿ ಸಚಿವ ರೋಷನ್ ಬೇಗ್ ಕೂಡ ಒಬ್ಬರು. ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ 2020ರ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ …
Read More »80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ
ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …
Read More »ಸಬ್ ಇನ್ಸ್‌ಪೆಕ್ಟರ್ ನ್ನೇ ದರೋಡೆ ಮಾಡಲು ಯತ್ನ ; ಹೆಲ್ಮೆಟ್ ನೋಡಿ ಪರಾರಿ ; ಮೂವರ ಬಂಧನ
ಬೆಂಗಳೂರು, : ಕೊರೊನಾ ಲಾಕ್ ಡೌನ್ ಮುಗಿಯುತ್ತಿದ್ದಂತೆ ದರೋಡೆಕೋರರು ಫೀಲ್ಡ್‌ಗೆ ಇಳಿದಿದ್ದಾರೆ. ರಾತ್ರಿ ವೇಳೆ ಮನೆಗೆ ಹೋಗುತ್ತಿದ್ದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅಡ್ಡಗಟ್ಟಿ ಮೂವರು ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಪಿಎಸ್‌ಐ ಧರಿಸಿದ್ದ ಪೊಲೀಸ್ ಹೆಲ್ಮೆಟ್ ನೋಡಿ ಪರಾರಿಯಾಗಿದ್ದ ಮೂವರು ದರೋಡೆಕೋರರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ರವಿಕುಮಾರ್, ಬಾಲು ಮತ್ತು ಅಶೀತ್ ಗೌಡ ಬಂಧಿತ ಆರೋಪಿಗಳು. ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಎಚ್.ಎಲ್. ಕೃಷ್ಣ ಜು. 3 ರಂದು …
Read More »
Laxmi News 24×7