ಬೆಂಗಳೂರು : ದೇಶಾದ್ಯಂತ ಸತತ ಎರಡನೇ ವರ್ಷ ಕೊರೊನಾ ಕಾಡುತ್ತಿದ್ದು, ಇದು ಪ್ರಾಥಮಿಕ ಶಿಕ್ಷಣದ ಮೇಲೆಯೂ ಅಡ್ಡ ಪರಿಣಾಮ ಬೀರಿದೆ. ರಾಜ್ಯದಲ್ಲಿ ಶಾಲಾ ದಾಖಲಾತಿ ಆರಂಭವಾಗಿ ಆಗಲೇ 20 ದಿನ ಕಳೆದರೂ ಇದುವರೆಗೆ ಶೇ. 20ರಷ್ಟೂ ದಾಖಲಾತಿ ಆಗಿಲ್ಲ. ಅಷ್ಟೇ ಅಲ್ಲ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳನ್ನು ಒಟ್ಟಾಗಿ ಸೇರಿಸಿದರೂ ಶೇ. 50ರ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ. ಜು. 5ರ ವರೆಗೆ ರಾಜ್ಯಾದ್ಯಂತ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ದಾಖಲಾತಿಗೆ …
Read More »ವಕೀಲರ ವೇಷದಲ್ಲಿ ಕೋರ್ಟಿಗೆ ಬಂದು ಶರಣಾದ ಕೊಲೆ ಆರೋಪಿಗಳು
ಬೆಂಗಳೂರು: ಹಾಡುಹಗಲೇ ಬನಶಂಕರಿ ದೇವಾಲಯದ ಮುಂದೆ ಫೈನಾನ್ಸಿಯರ್ ಮದನ್ ಎಂಬುವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ 7 ಮಂದಿ ಆರೋಪಿಗಳು ವಕೀಲರ ವೇಷದಲ್ಲಿ ನ್ಯಾಯಾಲಯದ ಮುಂದೆ ಶರಣಾದರು.ವಕೀಲರ ವೇಷದಲ್ಲಿ ಕೋರ್ಟಿಗೆ ಬಂದ ‘ಬನಶಂಕರಿ’ ಹಂತಕರುಬೆಳಗ್ಗೆ 37ನೇ ಎಸಿಎಂಎಂ ಕೋರ್ಟ್ ಆವರಣದಲ್ಲಿ ವಕೀಲರ ಸೋಗಿನಲ್ಲಿ ಏಳು ಮಂದಿ ಆರೋಪಿಗಳು ಪ್ರತ್ಯಕ್ಷರಾಗಿದ್ದಾರೆ. ಜುಲೈ 2 ರಂದು ಬನಶಂಕರಿ ಮೆಟ್ರೋ ಸ್ಟೇಷನ್ ಬಳಿ ಫೈನಾನ್ಸಿಯರ್ ಆಗಿದ್ದ ಲಕ್ಕಸಂದ್ರ ನಿವಾಸಿ ಮದನ್ನನ್ನು ಹಿಂಬಾಲಿಸಿ ಮೂರು …
Read More »ಮಹಾಲಿಂಗಪೂರ ಪುರಸಭೆ ಪ್ರಕರಣ:ಶಾಸಕ ಸಿದ್ದು ಸವದಿ- ತಹಶೀಲ್ದಾರ ಸಿಐಡಿಯಿಂದ ಪ್ರತ್ಯೇಕ ವಿಚಾರಣೆ
ಬನಹಟ್ಟಿ: ಕಳೆದ ವರ್ಷ ನ.9 ರಂದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆ ವೇಳೆ ಮಹಿಳಾ ಸದಸ್ಯೆಯರ ಎಳೆದಾಟದ ಗಲಾಟೆಗೆ ಸಂಬಂಧಿಸಿದಂತೆ ಡಿವೈಎಸ್ಪಿ ಎಸ್. ಸತ್ಯವತಿ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಬನಹಟ್ಟಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಸೋಮವಾರ ರಾತ್ರಿವರೆಗೂ ತೇರದಾಳ ಶಾಸಕ ಸಿದ್ದು ಸವದಿ ಹಾಗು ಅಂದಿನ ರಬಕವಿ-ಬನಹಟ್ಟಿ ತಹಶೀಲ್ದಾರರಾಗಿದ್ದ ಪ್ರಶಾಂತ ಚನಗೊಂಡ ಅವರನ್ನು ಪ್ರತ್ಯೇಕವಾಗಿ ತೀವ್ರ ವಿಚಾರಣೆ …
Read More »ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …
Read More »ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.
ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …
Read More »ಬೆಂಗಳೂರು: ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡ ಪೊಲೀಸರು
ಬೆಂಗಳೂರು: ರಾಜ್ಯಕ್ಕೆ ನೆರೆ ರಾಜ್ಯದಿಂದ ಗಾಂಜಾ ಘಾಟು ಎಗ್ಗಿಲ್ಲದೇ ಕಾಲಿಡುತ್ತಿದೆ. ಕಳೆದ ಮೂರು ವಾರದಿಂದ ಕಣ್ಣಿಟ್ಟಿದ್ದ ಖಾಕಿ ಪಡೆಯಿಂದ ಇಂದು ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಕೆಂಗೇರಿ ಗೇಟ್ ಎಸಿಪಿ ಸ್ಕ್ವಾಡ್‌ನಿಂದ ಈರ್ವರನ್ನು ಬಂಧಿಸಲಾಗಿದ್ದು, ಅವರಿಂದ 50 ಲಕ್ಷ ರೂ. ಮೌಲ್ಯದ 110 ಕೆಜಿ ಶುದ್ಧ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಬಳಿ ಕಾರು ತಡೆದು ಆರೋಪಿಗಳಾದ ಅಪ್ಪಣ್ಣ, ಸುಬ್ರಮಣಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣಂನ ಗುಡ್ಡಗಾಡು ಪ್ರದೇಶದಲ್ಲಿ …
Read More »ಬೆಳಗಾವಿ: ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಿ ಎಂದು ಕರ್ನಾಟಕದಲ್ಲೇ ಪ್ರತಿಭಟನೆ ಮಾಡುವ ಸ್ಥಿತಿ!
ಬೆಳಗಾವಿ: ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಧರಣಿ ಕೈಗೊಂಡಿವೆ. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಕೊರಳಿಗೆ ಹಗ್ಗ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಧ್ವಜಸ್ತಂಭದ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. …
Read More »ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯ; ಅಂತಿಮ ತನಿಖಾ ವರದಿ ಸಿದ್ಧ
ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್ಗೆ ಎಜಿ ಪ್ರಭುಲಿಂಗ್ ನಾವದಗಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಸ್‌ಐಟಿಯಿಂದ ಹೈಕೋರ್ಟ್ಗೆ ಮೆಮೋ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಜುಲೈ 14ರವರೆಗೆ ಅಂತಿಮ ವರದಿ ಸಲ್ಲಿಸದಂತೆ ಎಸ್‌ಐಟಿ ಪೊಲೀಸರಿಗೆ ಸೂಚನೆ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ …
Read More »ಹೆಣ್ಣು ಮಕ್ಕಳನ್ನು ಅಪಮಾನಿಸಿ ಮಾತನಾಡುವುದೇ ಅವರ ಸಂಸ್ಕೃತಿ – ಸಂಸ್ಕಾರ : ಎಚ್ ಡಿಕೆ ಟಾಂಗ್ ನೀಡಿದ ಸಂಸದೆ ಸುಮಲತಾ
ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡುವುದು ಅದು ಅವರ ಸಂಸ್ಕೃತಿ – ಸಂಸ್ಕಾರವನ್ನು ಎತ್ತಿ ತೋರಿಸುತ್ತದೆ. ಮಾಜಿ ಸಿಎಂ ಆಗಿ, ಇಂತಹ ಮಾತುಗಳನ್ನು ಆಡುವುದು ಶೋಭೆತರಲ್ಲ ಎಂದು ಕುಮಾರಸ್ವಾಮಿ ಗೆ ಸಂಸದೆ ಸುಮಲತಾ ಟಾಂಗ್ ನೀಡಿದರು. ವಿಧಾನ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದ ಹೇಳಿಕೆ ಕುಮಾರಸ್ವಾಮಿ ಸಂಸ್ಕೃತಿ, ವ್ಯಕ್ತಿತ್ವನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಕೆ.ಆರ್.ಎಸ್. ಜಲಾಶಯ ರಕ್ಷಣೆ ನನ್ನ ಉದ್ದೇಶ. ನನ್ನ ಮಾಹಿತಿಯಂತೆ ಜಲಾಶಯ …
Read More »ವಿದ್ಯುತ್ ಮಗ್ಗ ನೇಕಾರರಿಗೆ 3 ಸಾವಿರ ಲಾಕ್ ಡೌನ್ ವಿಶೇಷ ದನ ಸಹಾಯಕ್ಕಾಗಿ ಅರ್ಜಿ ಅಹ್ವಾನ
ಬಾಗಲಕೋಟೆ : ಕೋವಿಡ್-19 ರ 2ನೇ ಅಲೆಯಿಂದ ಲಾಕ್‍ಡೌನ್ ಘೋಷಣೆ ಮಾಡಿದ್ದು, ಇದರಿಂದ ಬಾದಿತವಾದ ವಿದ್ಯುತ್ ಮಗ್ಗ ಘಟಕಗಳಲ್ಲಿನ ನೇಕಾರರು ಹಾಗೂ ಮಗ್ಗಪೂರ್ವ ಚಟುವಟಿಕೆಗಳಾದ ಟ್ವಿಸ್ಟಿಂಗ್, ವೈಂಡಿಂಗ್, ಯಾರ್ನಡೈಯಿಂಗ್, ವಾರ್ಪಿಂಗ್, ಝರಿ ವೈಂಡಿಂಗ್ & ವಾರ್ಪಿಂಗ್, ವಾರ್ಪ ನಾಟಿಂಗ್ ಹಾಗೂ ಸೈಜಿಂಗ್ ಕೆಲಸಗಾರರಿಗೆ ತಲಾ 3 ಸಾವಿರ ರೂ.ಗಳಂತೆ ಪರಿಹಾರಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ‘SSLC ವಿದ್ಯಾರ್ಥಿ’ಗಳೇ ಗಮನಿಸಿ : ಶಿಕ್ಷಣ ಇಲಾಖೆಯ ‘ಈ ಆಪ್’ ಹಾಕೊಳ್ಳಿ, ನಿಮ್ಮ ‘ಪರೀಕ್ಷಾ ಸಿದ್ಧತೆ’ಗೆ …
Read More »
Laxmi News 24×7