ಬೆಳಗಾವಿ: ಜಾಗತಿಕವಾಗಿ ವಿಸ್ತರಿಸಿರುವ ಗಡಿಭಾಗದಲ್ಲಿ ಹತ್ತು ಹಲವಾರು ಕನ್ನಡ ಮಾಧ್ಯಮ ಶಾಲೆಗಳನ್ನು ಹುಟ್ಟುಹಾಕಿ ಕನ್ನಡ ಸೇವೆಯನ್ನು ನಿಸ್ವಾರ್ಥವಾಗಿ ಮಾಡಿದೆ. ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಕೆಎಲ್ಇ ಸಂಸ್ಥೆಯ ಕೊಡುಗೆ ಅನನ್ಯ ಎಂದು ಕಾಶಿ ಪೀಠದ ಪೂಜ್ಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜೀ ನುಡಿದರು. ಅವರು ಯಡೂರಿನಲ್ಲಿ ಕೆಎಲ್ಇ ಕನ್ನಡ ಮಾಧ್ಯಮ ಶಾಲೆ ಕಟ್ಟಡದ ಭೂಮಿ ಪೂಜೆಯನ್ನು ನೆರವೇರಿಸಿ ಆಶೀರ್ವಚನ ನೀಡಿದರು. ಕೆಎಲ್ಇ ಸಂಸ್ಥೆಯು ಶಿಕ್ಷಣ ಆರೋಗ್ಯ …
Read More »ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅಭಿವೃದ್ಧಿಯ ಬಜೆಟ್: ಸಂಸದೆ ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಜನಪರವಾದ ಮತ್ತು ರಾಜ್ಯದ ಅಭಿವೃದ್ಧಿ ಯ ಬಜೆಟ್ ಆಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದ ಸರ್ವತೋಮುಖ ಅಭಿವೃದ್ಧಿ ಯ ದೃಷ್ಟಿಯಿಂದ ನಾಡಿನ ಜನಪರವಾದ ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆಗೂ ಉತ್ತಮ ಆದ್ಯತೆ ನೀಡಿರುವುದು ಶ್ಲಾಘನೀಯವಾಗಿದೆ. ಸರ್ವರಿಗೂ ಸಮಪಾಲು ಎಂಬಂತೆ ಎಲ್ಲಾ ಕ್ಷೇತ್ರಕ್ಕೂ ಸಿಎಂ ಸಿದ್ದರಾಮಯ್ಯ ಅವರು ಆದ್ಯತೆ …
Read More »ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗು -ಹೊಸಕೋಟಿ ಗ್ರಾಮದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ …
Read More »ಯುಪಿಎಸ್ಸಿ : ಗಿರಿ ಜಿಲ್ಲೆಗೆ ಮೂಡಿದ ಹೆಮ್ಮೆಯ ಗರಿ ಯುಪಿಎಸ್ಸಿ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆ
ಯಾದಗಿರಿ :ಯುಪಿಎಸ್ಸಿ (ಯೂನಿಯನ್ ಪಬ್ಲಿಕ್ ಸರ್ವೀಸ್ ಕಮೀಶನ್) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷಾ (ಸಿವಿಲ್ ಸರ್ವೀಸ್) ಪರೀಕ್ಷೆಯ ಅಂತಿಮ ಫಲಿತಾಂಶ ಇಂದು ಶುಕ್ರವಾರ (ಮಾ.6) ಪ್ರಕಟಗೊಂಡಿದ್ದು, ಅಖಿಲ ಭಾರತ ಮಟ್ಟದಲ್ಲಿ ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆಯಾಗಿ, ಹೆಮ್ಮೆಗೆ ಪಾತ್ರರಾಗಿದ್ದಾರೆ. ಯಾದಗಿರಿಯ ಸಂದೀಪ್ ಬಾಡದ್ ರಾಜ್ಯದಲ್ಲಿ 2ನೇ ಹಾಗೂ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್, ವೈದ್ಯೆ ಡಾ. ನಿವೇದಿತಾ ಭಾವಿಮನಿ 469ನೇ ರ್ಯಾಂಕ್, ಬಸವರಾಜ್ ಜವಳಿ 664ನೇ …
Read More »ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕದ್ದೇನು?
ಬೆಳಗಾವಿ: ಆರ್ಧಕ್ಕೆ ನಿಂತ 7 ಏತನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಹಾಗೂ 8 ಶ್ರಮಿಕ ವಸತಿ ಶಾಲೆಗಳನ್ನು ನಿರ್ಮಿವುಸುವುದು; ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಿಕ್ಕ ಮಹತ್ವದ ಕೊಡುಗೆಗಳು. ಸವದತ್ತಿ ತಾಲ್ಲೂಕಿನ ಚಚಡಿ, ಮುರಗೋಡ, ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ, ಅಥಣಿ ತಾಲ್ಲೂಕಿನ ಬಸವೇಶ್ವರ (ಕೆಂಪವಾಡ) ಏತ ನೀರಾವರಿ, ಗೋಕಾಕ ತಾಲ್ಲೂಕಿನ ಅಡವಿಸಿದ್ದೇಶ್ವರ ಏತ ನೀರಾವರಿ, ಶಂಕರಲಿಂಗ, ರಾಮದುರ್ಗ ತಾಲ್ಲೂಕಿನ ಸಾಲಾಪುರ ಏತ ನೀರಾವರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ …
Read More »ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯವು 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ತಾಲ್ಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ ಬೋಸಲೆ (22) ಶಿಕ್ಷೆಗೆ ಒಳಗಾದವ. 2025ರ ಏಪ್ರಿಲ್ 10ರಂದು ಬಾಲಕಿಗೆ ಲಡ್ಡು ಕೋಡುತ್ತೆನೆ ಬಾ ಎಂದು ಪುಸಲಾಯಿಸಿ ಮನೆಗೆ ಕರೆದುಕೊಂಡು, ಹಗ್ಗದಿಂದ ಕಟ್ಟಿಹಾಕಿ ಹೋಗಿ ಅತ್ಯಾಚಾರ ಎಸಗಿದ್ದ. ಅಲ್ಲದೇ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ, ನಿನ್ನಂತೆಯೇ ನಿನ್ನ …
Read More »ಯುಪಿಎಸ್‌ಸಿ: ಬೆಳಗಾವಿಯ ರಾಹುಲ್‌ಗೆ 224ನೇ ರ್‍ಯಾಂಕ್
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹತ್ತರವಾಟ ಗ್ರಾಮದ ಯುವಕ ಕಿರಣ ಸಣ್ಣಪ್ಪ ಕಮತೆ (29) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 53ನೇ ರ್‍ಯಾಂಕ್ ಹಾಗೂ ರಾಜ್ಯಕ್ಕೆ ಮೊದಲ ರ್‍ಯಾಂಕ್ ಪಡೆದಿದ್ದಾರೆ. ಬೆಳಗಾವಿ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದಾರೆ. ಐದು ಬಾರಿ ಪ್ರಿಲಿಮ್ಸ್ ಪಾಸಾಗಿದ್ದರೂ ಮೇನ್ಸ್ ಪರೀಕ್ಷೆಯಲ್ಲಿ ವಿಫಲವಾಗಿದ್ದರು. ಆರನೇ ಬಾರಿಗೆ ಯಶಸ್ಸು …
Read More »ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ, ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ. 1.32 ಲಕ್ಷ ಕೋಟಿ …
Read More »ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂ.ಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. …
Read More »ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಅನುಭವಿ ಮುಖ್ಯಮಂತ್ರಿಗಳಿದ್ದು, 17ನೇ ಬಜೆಟ್ ಮಂಡಿಸುವ ಸುವರ್ಣಾವಕಾಶ ಅವರಿಗೆ ಸಿಕ್ಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಿನಲ್ಲಿ ಹೋಮ ಮಾಡುವ ಕೆಲಸವನ್ನು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ …
Read More »
Laxmi News 24×7