ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
Read More »ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆಇಂದು ಮುಂಜಾನೆ ತೀರಿಕೊಂಡರು.
ಬೆಳಗಾವಿ: ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಹಾಗೂ ಚಿಕ್ಕೋಡಿ ಜಿಲ್ಲಾ ಕೆಪಿಸಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆ ತೇಜಸ್ವಿನಿ ಅರ್ಜುನ ನಾಯಿಕವಾಡಿ (51) ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮ್ಮ ಮೃದು ಸ್ವಭಾವದದ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ರಾಯಬಾಗ ತಾಲೂಕು ಕಂಕಣವಾಡಿ ಮೂಲದವರಾದ ತೇಜಸ್ವಿನಿ ಅವರು, ಕೆಲವು ದಿನಗಳ ಹಿಂದಷ್ಟೆ ಕೋವಿಡ್ ನಿಂದ ಗುಣಮುಖರಾಗಿದ್ದರು. ಆದರೆ ಕಡಿಮೆ ರಕ್ತದೊತ್ತಡದ ಕಾರಣಕ್ಕೆ ಆಕಸ್ಮಿಕವಾಗಿ ಇಂದು ಮುಂಜಾನೆ ತೀರಿಕೊಂಡರು. ಇಂದು ಮಧ್ಯಾಹ್ನ ಕಂಕಣವಾಡಿಯಲ್ಲಿ ಅಂತ್ಯಕ್ರಿಯೆ …
Read More »ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್ ಕುಮಾರ್
ಬೆಂಗಳೂರು: ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಜುಲೈ 31ರೊಳಗೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳ 12ನೇ ತರಗತಿ ಮಕ್ಕಳಿಗೆ ಜು.31ರೊಳಗೆ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾಜ್ಯದಲ್ಲೂ ಅಷ್ಟರೊಳಗೆ ಫಲಿತಾಂಶ ನೀಡುತ್ತೇವೆ’ ಎಂದು ಹೇಳಿದರು. ‘ಶೀಘ್ರದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ …
Read More »ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿದ, ಎಸ್.ಆರ್. ಪಾಟೀಲ
ಬೆಳಗಾವಿ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿ, ಸದ್ಯದ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಎಸ್.ಆರ್. ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಧಿಕಾರಿಗಳು ಅನೇಕ ಮಾಹಿತಿ ನೀಡಿದರು. ಮೂರನೇ ಅಲೆಗೆ ತಯಾರಿ ಬಗ್ಗೆ ಮಾಹಿತಿ: ಸಭೆಯ ನಂತರ ಸುದ್ದಿಗಾರರೊಂದಿಗೆ …
Read More »ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ
ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್‍ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …
Read More »ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣ
ಬೆಂಗಳೂರು, ಜೂನ್ 25; ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪ್ರತಿಮೆ ನಿರ್ಮಾಣವಾಗಲಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. 9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆ. 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ …
Read More »ಕ್ವೇಕರ್‌ನಿಂದ ಬೆಂಗಳೂರಿನ ಆಸ್ಪತ್ರೆಗಳಿಗೆ 10,000 ಓಟ್‌ಮೀಲ್ಸ್ ವಿತರಣೆ
ಬೆಂಗಳೂರು, ಜೂ 24, 2021: ಸ್ಥಳೀಯ ಆರೋಗ್ಯ ಸಮುದಾಯದ ಸ್ಫೂರ್ತಿ, ಧೈರ್ಯ ಮತ್ತು ಬದ್ಧತೆಗೆ ಗೌರವ ಸೂಚಿಸಲು ಮುಂದಾಗಿರುವ ಕ್ವೇಕರ್, ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ 10,000 ಓಟ್‌ಮೀಲ್ಸ್ ಅನ್ನು ವಿತರಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಉಪಸ್ಥಿತಿಯಲ್ಲಿ ಓಟ್‌ಮೀಲ್‌ಗಳನ್ನು ಆಸ್ಪತ್ರೆಗೆ ವಿತರಿಸಲಾಯಿತು. ವೈದ್ಯರು, ದಾದಿಯರು ಮತ್ತು ಸಂಪೂರ್ಣ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಸಮುದಾಯದ ಪ್ರತಿಯೊಬ್ಬ ಸದಸ್ಯರು ಹಲವಾರು ಕುಟುಂಬಗಳನ್ನು ಸುರಕ್ಷಿತವಾಗಿಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿದ್ದಾರೆ. …
Read More »ಸರ್ಕಾರದ ವಿರುದ್ಧ ಗಂಭೀರ ಆರೋಪ; ರಾಜ್ಯಪಾಲರಿಗೆ ಎಚ್‌ಡಿಕೆ ಪತ್ರ
ಬೆಂಗಳೂರು, ಜೂನ್ 25; ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಹಲವು ಬಾರಿ ಅವರು ಸರ್ಕಾರವನ್ನು ಅಧಿವೇಶನ ಕರೆಯಲು ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಕೋವಿಡ್ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ಕನ್ನಡ, ಕನ್ನಡಿಗ, ಕರ್ನಾಟಕದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕು ಎಂದು …
Read More »ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್!
ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ …
Read More »ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ದೆಹಲಿಗೆ ತೆರಳಿದ್ದಾರೆ. ಅವರ ದಿಢೀರ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆಕಾರಣವಾಗಿದೆ. ಇತ್ತೀಚೆಗೆ ನಾಯಕತ್ವ ಬದಲಾವಣೆಯ ಕುರಿತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇದೇ ಬೆಳವಣಿಗೆಗಳ ಕುರಿತು ಸಿಎಂ ಯಡಿಯೂರಪ್ಪ …
Read More »
Laxmi News 24×7