ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …
Read More »ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್
ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …
Read More »ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್ ಬಳಿಕ ರಾಜ್ಯದಲ್ಲಿ ಅನ್‍ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ …
Read More »ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?
ಬೆಳಗಾವಿ : ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ. ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …
Read More »ಬೆಳಗಾವಿ| 18 ವರ್ಷದ ಎಲ್ಲರಿಗೂ ಇಲ್ಲ, 45 ವರ್ಷ ಮೇಲಿನವರಿಗಷ್ಟೆ ಕೋವಿಡ್ ಲಸಿಕೆ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕಟಿಸಿದಂತೆ ಉಚಿತ ಲಸಿಕಾ ಕಾರ್ಯಕ್ರಮದ ಅನ್ವಯ ಜಿಲ್ಲೆಯಾದ್ಯಂತ ಸೋಮವಾರದಿಂದ ಕೋವಿಡ್ ನಿರೋಧಕ ಲಸಿಕೆ ಮೇಳ ಆರಂಭವಾಗಿದೆ. ಆದರೆ, 45 ವರ್ಷ ಮೇಲಿನವರಿಗಷ್ಟೆ ಕೊಡಲಾಗುತ್ತಿದೆ. 18ರಿಂದ 44 ವರ್ಷದ ಎಲ್ಲರಿಗೂ ಲಸಿಕೆ ದೊರೆಯಲಿಲ್ಲ. ಆದ್ಯತಾ ಗುಂಪಿನಲ್ಲಿರುವ 18ರಿಂದ 44 ವರ್ಷದವರಿಗೆ ಯಥಾಪ್ರಕಾರ ಲಸಿಕಾ ಕಾರ್ಯಕ್ರಮ ನಡೆಯಿತು. ಸರ್ಕಾರದ ಘೋಷಣೆ ಆಧರಿಸಿ ಆಸ್ಪತ್ರೆಗಳಿಗೆ ಬಂದಿದ್ದ 18 ವರ್ಷ ಮೇಲಿನ ಯುವಜನರು ಲಸಿಕೆ ದೊರೆಯದೆ ಬರಿಗೈಲಿ ವಾಪಸಾಗಬೇಕಾಯಿತು. …
Read More »ಸಾರಿಗೆ ಸಂಚಾರ ಯಥಾಸ್ಥಿತಿ – ಡಿಸಿಎಂ ಲಕ್ಷ್ಮಣ್ ಸವದಿ
ಬೆಂಗಳೂರು : ಸದ್ಯಕ್ಕೆ 2 ಡೋಸ್ ಕೊರೋನಾ ಲಸಿಕೆ ಪಡೆದಂತ ಸಿಬ್ಬಂದಿಗಳನ್ನು ಬಳಸಿಕೊಂಡು, ಸಾರಿಗೆ ಸಂಚಾರ ಆರಂಭಿಸಲಾಗಿದೆ. ಈಗ 2 ಡೋಸ್ ಲಸಿಕೆ ಪಡೆದಂತ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿ, ಸಂಚಾರ ಆರಂಭಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆಯಥಾಸ್ಥಿತಿ ಸಂಚಾರ ಆರಂಭ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ವಿಧಾನ ಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು, BMTC ಸ್ಪಲ್ಪ …
Read More »ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10 ರಷ್ಟು ಹೆಚ್ಚು ಲಾಭ: ಸಚಿವ ಗೋಪಾಲಯ್ಯ
ಬೆಂಗಳೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ.10 ರಷ್ಟು ಹೆಚ್ಚು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ 18 ರಿಂದ 44 ವಯಸ್ಸಿನವರಿಗೆ 3 ದಿನಗಳ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಲಾಕ್ ಡೌನ್ ಆದ ಮೇಲೆ ಏಪ್ರಿಲ್ 1 ರಿಂದ ಜೂನ್ 15 ರವರೆಗೆ ಅಬಕಾರಿ ಇಲಾಖೆಗೆ …
Read More »ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಬಿಎಸ್ವೈ ಚಾಲನೆ
ಬೆಂಗಳೂರು: ಇಂದು ಇಡೀ ದೇಶದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ, ಆಯುಷ್ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ನಿವಾಸದಲ್ಲೇ ಯೋಗ ಮಾಡಿದ ಸಿಎಂ ಬಿಎಸ್ವೈ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮನೆಯಲ್ಲೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿ ಎನ್ನುವ ಸಂದೇಶ ನೀಡಿದರು.
Read More »ರಾಜ್ಯದಲ್ಲಿ ತಗ್ಗಿದ ಎರಡನೆ ಅಲೆ, ಶಾಲೆ ಪುನಾರಂಭಕ್ಕೆ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಪುನರಾರಂಭ ಸೂಕ್ತವೆಂಬ ಸಲಹೆ ಕೇಳಿ ಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸುವುದು ಸೂಕ್ತವೆಂದು ಕಾರ್ಯಪಡೆ ಸಲಹೆ ನೀಡಿದೆ. ಸುರಕ್ಷತೆ ಕ್ರಮಗಳೊಂದಿಗೆ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು 17 ಅಂಶಗಳನ್ನೊಳಗೊಂಡ ಮಧ್ಯಂತರ ವರದಿಯನ್ನು ತಜ್ಞರ ಕಾರ್ಯಪಡೆ ಸರ್ಕಾರಕ್ಕೆ ಸಲ್ಲಿಸಿದೆ. ದೀರ್ಘಾವಧಿ ಶಾಲೆಗೆ ಮಕ್ಕಳು ಹೋಗಲು ಸಾಧ್ಯವಾಗದಿದ್ದರೆ ಶೈಕ್ಷಣಿಕವಾಗಿ ಸಮಸ್ಯೆ ಎದುರಿಸಬೇಕಾಗುತ್ತದೆ ಅವರ ಭವಿಷ್ಯದ ಹಿತದೃಷ್ಟಿಯಿಂದ ಸುರಕ್ಷತೆ ಕ್ರಮಗಳೊಂದಿಗೆ ಶಾಲೆ ಆರಂಭಿಸಬಹುದು. ಸೋಂಕಿನ …
Read More »ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ
ಗೋಕಾಕ ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ. • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …
Read More »
Laxmi News 24×7