ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ(ವಿದ್ಯಾರ್ಥಿವೇತನ)ಯಡಿ ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ವೆಬ್‌ಸೈಟ್ https://serviceonline.gov.in/karnataka ಇಲ್ಲಿ ಸಲ್ಲಿಸಲು 2021 ರ ಜುಲೈ 15 ಕೊನೆಯ ದಿನವಾಗಿದೆ. ವಾರ್ಷಿಕ …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …
Read More »ಸೋಮವಾರದಿಂದ ಸಾರಿಗೆ ಸಂಚಾರಕ್ಕೆ ಅನುಮತಿ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಬಹುತೇಕ ಕಡಿಮೆಯಾಗುತ್ತಿದ್ದು, ಸೋಮವಾರದಿಂದ ಮತ್ತಷ್ಟು ವಿನಾಯ್ತಿ ಸಿಗುವ ಸಾಧ‍್ಯತೆಯಿದೆ. ಸೋಮವಾರದಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರಕ್ಕೆ ಶೇ. 50 ಪ್ರಯಾಣಿಕರೊಂದಿಗೆ ಅನುಮತಿ ಸಿಗಬಹುದು. ಕಳೆದ 70 ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಸಾವಿರಕ್ಕೂ ಕಡಿಮೆ ಪ್ರಕರಣ ದಾಖಲಾಗಿದೆ. ಈಗ ಜಾರಿಯಲ್ಲಿರುವ ಅನ್ ಲಾಕ್ ನಿಯಮಗಳು ಸೋಮವಾರಕ್ಕೆ ಮುಕ್ತಾಯವಾಗಲಿದೆ. ಅದಾದ ಬಳಿಕ ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾಲ್, …
Read More »ಮುಂದಿನ ವಾರದಿಂದ 11 ಜಿಲ್ಲೆಗಳೂ ಅನ್ ಲಾಕ್ ಸಾಧ್ಯತೆ
ಬೆಂಗಳೂರು: ಪಾಸಿಟಿವಿಟಿ ಅಧಿಕವಿದ್ದ 11 ಜಿಲ್ಲೆಗಳಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಮುಂದಿನ ವಾರ ಈ ಜಿಲ್ಲೆಗಳೂ ಅನ್ ಲಾಕ್ ಆಗುವ ಸಾಧ‍್ಯತೆಯಿದೆ. ಈ ಪೈಕಿ ಬೆಳಗಾವಿಯಲ್ಲಿ ಪಾಸಿಟಿವಿಟಿ ದರ ಶೇ.6, ಶಿವಮೊಗ್ಗದಲ್ಲಿ ಶೇ.5.5, ಮಂಡ್ಯದಲ್ಲಿ ಶೇ.7, ಹಾಸನದಲ್ಲಿ ಶೇ.9 ಇದ್ದರೆ, ಮೈಸೂರಿನಲ್ಲಿ ಈಗಲೂ 13.5 ಶೇ. ಪಾಸಿಟಿವಿಟಿ ದರವಿದೆ. ಇನ್ನು ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಕೊರೋನಾ ಸಂಪೂರ್‌ಐ ಹತೋಟಿಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ …
Read More »ಗ್ರಾಮ ಪಂಚಾಯಿತಿ ಸದಸ್ಯನಿಂದಲೇ ಯುವತಿ ಮೇಲೆ ಅತ್ಯಾಚಾರ! ಬೆಚ್ಚಿಬೀಳಿಸುತ್ತೆ ಇವನ ಕಾಮಪುರಾಣ
ಬೆಂಗಳೂರು: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನ ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಯುವತಿಯ ನಗ್ನ ಫೋಟೋಗಳನ್ನು ತೆಗೆದು ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ಅತ್ಯಾಚಾರ ಆರೋಪಿ. ಈತನಿಗೆ ಫೇಸ್ಬುಕ್ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ …
Read More »ಭಾರೀ ಮಳೆ- ಬೆಳಗಾವಿಯ 3 ಸೇತುವೆಗಳು ಜಲಾವೃತ ,ಗದ್ದೆಗೆ ಉರುಳಿದ ಕ್ರೂಸರ್
ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರಂಭದಲ್ಲೇ ಧಾರಾಕಾರ ಮಳೆಯಾಗುತ್ತಿದೆ. ಮಲೆನಾಡು ಭಾಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂರು ಸೇತುವೆಗಳು ಜಲಾವೃತವಾಗಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ವರ್ಷಧಾರೆಯಿಂದ, ಘಟಪ್ರಭಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಮೂಡಲಗಿ ತಾಲೂಕಿನ ಹಲವು ಸೇತುವೆಗಳು ಜಾಲಾವೃತಗೊಂಡಿವೆ. ತಾಲೂಕಿನ ಸುಣಧೋಳಿ, ಕಮಲದಿನ್ನಿ, ಅವರಾದಿ …
Read More »ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ
ಬಾಗಲಕೋಟೆ: ಬೆಳಗಾವಿ ಜಿಲ್ಲೆಯ ಖಾನಾಪುರ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಘಟಪ್ರಭಾ ನದಿಯಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಜಲದಿಗ್ಬಂಧನ ಎದುರಿಸುವಂತಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚಾದ ಪರಿಣಾಮದಿಂದಾಗಿ ಭಕ್ತರಿಗೆ ದೇವರ ಪೂಜೆ ದರ್ಶನ ಭಾಗ್ಯ ಇಲ್ಲದಂತಾಗಿದ್ದು, ದೇಗುಲದ ಮುಂಭಾಗದ ಮೆಟ್ಟಿಲು, ಕಟ್ಟೆಯವರೆಗೆ ಎರಡು ಅಡಿಯಷ್ಟು ನೀರು ನಿಂತಿದೆ. ಇದೇ ರೀತಿ ನೀರಿನ ಪ್ರಮಾಣ ಹೆಚ್ಚಾದರೆ …
Read More »ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೋವಿಡ್ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ …
Read More »ರಮೇಶ್ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ
ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು’ ಎಂದು ಆಗ್ರಹಿಸಿ ಘಟಪ್ರಭಾದ ಅವರ ಬೆಂಬಲಿಗರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಒಂಟೆಗಳ ಮೇಲೆ ಮೆರವಣಿಗೆ ನಡೆಸಿ ಗುರುವಾರ ಪ್ರತಿಭಟನೆ ನಡೆಸಿದರು. ‘ನಮ್ಮ ನಾಯಕರ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ಅವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಕೆಲಸಗಳು ತೆರೆ-ಮರೆಯಲ್ಲಿ ನಡೆಯುತ್ತಿವೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಹೆಸರು ಕೆಡಿಸುವಂತಹ ಪ್ರಯತ್ನಗಳನ್ನು ಕೆಲವರು …
Read More »ಬಸವಣ್ಣನವರ ವಚನದ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ ಹೆಚ್‌ಡಿಕೆ
ಬೆಂಗಳೂರು: ಬಿಜೆಪಿಯಲ್ಲಿ ನಾಯಕತ್ವ ಕಿತ್ತಾಟ ವಿಚಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಸರಣಿ ಟ್ವೀಟ್ ಮಾಡಿ, ಬಸವಣ್ಣನವರ ವಚನದ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟೇ ಅಲ್ಲ ನಾಯಕತ್ವವೇ ಇಲ್ಲದ ಸರ್ಕಾರ ವಿಸರ್ಜನೆ ಅಂತ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಸರ್ಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಹೊಸ್ತಿಲಲ್ಲಿ ಹುಲ್ಲು ಹುಟ್ಟಿ ಮನೆಯೊಳಗೆ ರಜ ತುಂಬಿ ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ ಕೂಡಲ …
Read More »
Laxmi News 24×7