ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದ್ದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ್ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ …
Read More »ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್ ಮೇಲೆ ದಾಳಿ
ಬೆಳಗಾವಿ: ಸವದತ್ತಿ ತಾಲ್ಲೂಕಿನ ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್ ಮೇಲೆ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿದ್ದ ಕೃಷಿ ಪರಿಕರಗಳನ್ನು ಜಪ್ತಿ ಮಾಡಿ, ಮಾರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸಿಲಾಗಿದೆ ಎಂದು ಜಾಗೃತ ಕೋಶದ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೊಖಾಶಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳಾದ ಆರ್.ಬಿ.ಪಾಟೀಲ್ ಮತ್ತು ಸುಪ್ರೀತಾ ಅಂಗಡಿ ಅವರು ದಾಳಿ ನಡೆಸಿದ್ದಾರೆ. …
Read More »ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ
ಸವದತ್ತಿ– . ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ ರೂ ವೆಚ್ಚದಲ್ಲಿ ಯರಗಟ್ಟಿ, ಮುನವಳ್ಳಿ, ಸವದತ್ತಿ ಸರ್ಕಾರಿ ಆಸ್ಪತ್ರೆಗಳಿಗೆ ೩ ಅಂಬ್ಯುಲೆಸ್ಸ್ ವಾಹನ ಲೋಕಾರ್ಪಣೆಗೊಳಿಸಿದರು. ಸರ್ಕಾರ ಬಡವರ ಜತೆಗಿದ್ದು ಯಾವುದೇ ಬಡ ಕುಟುಂಬಗಳು ಹಸಿವಿನಿಂದ ಮಲಗಬಾರದು ಎಂದು ಪ್ರತಿ ತಿಂಗಳು ಉಚಿತ …
Read More »ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್: ಬೆಳಗಾವಿ ಜಿಲ್ಲಾಧಿಕಾರಿ
ಬೆಳಗಾವಿ-ಬರುವ ಶನಿವಾರ ಮತ್ತು ಭಾನುವಾರ,ಎರಡು ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ,ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರತಿ ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಮಾಡುತ್ತ ಬಂದಿದ್ದು ಬರುವ ಶನಿವಾರ ದಿನಾಂಕ,12 ಹಾಗೂ 13 ರಂದು ಎರಡೂ ದಿನ ಕಂಪ್ಲೀಟ್ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ಡೌನ್ ಮುಂದುವರೆಯಲಿದೆ.
Read More »ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ : ಸಿದ್ದರಾಮಯ್ಯ
ಬೆಂಗಳೂರು: “ಬಿಜೆಪಿ ಸರ್ಕಾರವು ಎಲ್ಲಾ ರಂಗಗಳಲ್ಲೂ ವಿಫಲವಾಗಿದ್ದು, ಈಗ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರು ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಗೆಲ್ಲುವುದು ಖಚಿತ, ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, “ಯಡಿಯೂರಪ್ಪ ಅವರ ವೈಪಲ್ಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಗೊತ್ತಾಗಿದೆ, ರಾಜ್ಯದ ನಾಯಕರಿಗೂ ಗೊತ್ತಿದೆ. ಜನರಿಗೂ ಅವರ ನಾಟಕ ತಿಳಿಸಿದೆ. ಅದಕ್ಕಾಗಿ ಬಿಎಸ್‌ವೈಯವರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ” ಎಂದರು. “ಯಡಿಯೂರಪ್ಪ …
Read More »CD ಕೇಸ್; ಆರೋಪಿಗಳಿಗೆ ಸಿಕ್ತು ನಿರೀಕ್ಷಣಾ ಜಾಮೀನು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ CD ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನಗರದ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್‌ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ಎರಡೂ ಕಡೆ ವಾದ-ಪ್ರತಿವಾದ ಆಲಿಸಿತ್ತು. ಜೂನ್ 2 ರಂದು ವಾದ-ಪ್ರತಿವಾದವನ್ನ ಅಂತಿಮಗೊಳಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪನ್ನ ಕಾಯ್ದಿರಿಸಿತ್ತು.
Read More »ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು.?
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ …
Read More »ಗಂಡನನ್ನ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ತಾಯಿ ಮಕ್ಕಳಿಗೆ ಜೀವಾವಧಿ ಶಿಕ್ಷೆ…
ಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ. ಕರಾವಳೀ ಭಾಗದಲ್ಲಿ ಈ ಕೊಲೆ ಭಾರೀ ಸಂಚಲನ ಸೃಷ್ಟಿಸಿತ್ತು. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ …
Read More »ಡೀಸೆಲ್ ದರ ಹೆಚ್ಚಾದರೂ ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲ್ಲ ; ಸಚಿವ ಸವದಿ
ಬೆಂಗಳೂರು: ಸದ್ಯಕ್ಕೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನಾಲ್ಕೂ ನಿಗಮಗಳು ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿತ್ತು. ಆವಾಗ ಬಿಎಂಟಿಸಿ ದರ ಹೆಚ್ಚಳ ಮಾಡಿಲ್ಲವೆಂದು ಶೇ.15 ರಷ್ಟು ದರ ಹೆಚ್ಚಿಸುವಂತೆ ಸಂಸ್ಥೆ ಕೋರಿದೆ. ಆದರೆ ಕೋವಿಡ್ ಪರಿಸ್ಥಿತಿ, ಲಾಕ್ ಡೌನ್ ನಿಂದ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. …
Read More »ಸಿ.ಟಿ.ರವಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು – ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿನೆ ಮಾಡಿದ್ದ ಆರೋಪ ಸಂಬಂಧ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ. ಸಿ.ಟಿ.ರವಿ ಮತ್ತು ಅವರ ಮೂವರು ಬೆಂಬಲಿಗರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ದತ್ …
Read More »
Laxmi News 24×7