Breaking News

ಜಿಲ್ಲೆ

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

ಬೆಂಗಳೂರು: ಖಾಸಗಿ ಹೋಟೆಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಬಲಿಗ ಶಾಸಕರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮೇಖ್ರಿ ಸರ್ಕಲ್ ಬಳಿ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಲಾಗಿದೆ. ಒತ್ತಡ ಹೆಚ್ಚಿಸಲು ಡಿಕೆಶಿ ಬೆಂಬಲಿಗರ ಸಭೆ ನಡೆಸಿದ್ದಾರೆನ್ನಲಾಗಿದೆ. ಶಾಸಕ ಹೆಚ್.ಸಿ.ಬಾಲಕೃಷ್ಣ ಬರ್ತ್ ಡೇ ಪಾರ್ಟಿ ನೆಪದಲ್ಲಿ ಶಾಸಕರು ಸಭೆ ಸೇರಿದ್ದರು. ಸಿ.ಪಿ.ಯೋಗೇಶ್ವರ್, ಕುಣಿಗಲ್ ರಂಗನಾಥ್, ಆನೇಕಲ್ ಶಿವಣ್ಣ, ಪಾವಗಡ ವೆಂಕಟೇಶ್, ಮದ್ದೂರು ಉದಯ್ ಗೌಡ, ಮಂಥರ್ ಗೌಡ, ಬಸವರಾಜ ಶಿವಗಂಗಾ, ಶರತ್ ಬಚ್ಚೇಗೌಡ, ಗಣಿಗ …

Read More »

ಎಪಿಎಂಸಿ, ಜೈ ಕಿಸಾನ್ ಮಾರುಕಟ್ಟೆ ವರ್ತಕರ ಸಮಸ್ಯೆ ನಿವಾರಣೆಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಆಯೋಜನೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆಗೆ ದೇಶದಲ್ಲಿಯೇ ಒಳ್ಳೆಯ ಹೆಸರು ಇದ್ದು, ಈ ಹೆಸರನ್ನು ಉಳಿಸುವ ಜವಾಬ್ದಾರಿ ಎಪಿಎಂಸಿ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ಮೇಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ವಿವಾದ ಬಗೆಹರಿಸಲು …

Read More »

ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್

ಬೆಂಗಳೂರು: ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು ಅಂತ ಗೃಹ ಸಚಿವ ಪರಮೇಶ್ವರ್ ಪುನರುಚ್ಚಾರ ಮಾಡಿದ್ದಾರೆ. ಪರಮೇಶ್ವರ್ ಸಿಎಂ ಆಗಬೇಕು ಎಂಬ ಅಭಿಮಾನಿಗಳು ಕೂಗಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಕುರ್ಚಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಆಗಿದೆ. ನಾನು ಅದಕ್ಕೆ ಹೆಚ್ಚು ಗೊಂದಲ ಮಾಡೋದಕ್ಕೆ ತಯಾರಿಲ್ಲ. ಅನೇಕರು ನನ್ನನ್ನ ಪ್ರಶ್ನೆ ಮಾಡ್ತಾರೆ, ಅಭಿಮಾನಿಗಳು ಅಲ್ಲಲ್ಲಿ ಸಿಎಂ  ಅಗಬೇಕು ಅಂತ ಅವರ ಭಾವನೆ ವ್ಯಕ್ತಪಡಿಸುತ್ತಾರೆ. ಸಿಎಂ ಆಗಬೇಕು …

Read More »

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ ) ಸಮಾವೇಶ ಆಯೋಜನೆ ಮಾಡಲಾಗಿದೆ. ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ  ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ …

Read More »

ಅಕ್ರಮವಾಗಿ ಗೋವಾ ಮದ್ಯ ಮಾರಾಟ: ಆರೋಪಿ ವಶಕ್ಕೆ

ಬೆಳಗಾವಿ: ಬೆಳಗಾವಿ ನಗರದ ಉದ್ಯಮಬಾಗದ ಅರುಣ ಇಂಜಿನಿಯರಿಂಗ್ ಫ್ಯಾಕ್ಟರಿ ಎದುರಿಗೆ,  ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ  ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಕಂಪನಿಯ ರಮ್, ವೋಡಾ, ವಿಸ್ಕಿ ಒಟ್ಟು 16 ಸರಾಯಿ ಬಾಟಲಿಗಳನ್ನು ಕೈಚೀಲದಲ್ಲಿಟ್ಟುಕೊಂಡು ಮಾರಾಟದಲ್ಲಿ ತೊಡಗಿದ್ದಾಗ ಉದ್ಯಮಬಾಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪರಮೇಶ್ವರ ದೇವಪ್ಪ ನಾಯಿಕ (50) ಬಂದಿತ ಆರೋಪಿ. ಉದ್ಯಮಬಾಗ ಪೊಲೀಸ್ ಠಾಣೆಯ ಪಿಎಸ್‌ಐ ಕಿರಣ ಸಿ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಒಟ್ಟು …

Read More »

ಸಂಕೇಶ್ವರ: ಹಿಂದೂ ಸಂಘಟನೆ ಕಾರ್ಯಕರ್ತರಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ಕೊಲೆ ಯತ್ನ!

24 ಗಂಟೆಗಳಲ್ಲಿ 7 ಆರೋಪಿಗಳನ್ನು ಬಂಧಿಸಿದ ಸಂಕೇಶ್ವರ ಪೊಲೀಸರು ಹುಕ್ಕೇರಿ: ಸಂಕೇಶ್ವರ ಪಟ್ಟಣದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲೆ ನಡೆದ ತಲವಾರ್ ದಾಳಿಯ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಕೇವಲ 24 ಗಂಟೆಗಳೊಳಗಾಗಿ ಬೇಧಿಸಿ ಏಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಕೇಶ್ವರ ಪಟ್ಟಣದ ಸಾಯಿ ಕಾರ್ಯಾಲಯದ ಸಮೀಪ ಸೋಮವಾರ ರಾತ್ರಿ ಅನಾಮಿಕ ಗುಂಪೊಂದು ಕಾರಿನಲ್ಲಿ ಬಂದು ಆರ್‌ಎಸ್‌ಎಸ್ ಕಾರ್ಯಕರ್ತ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ದತ್ತಾ ಥೋರವತ್ ಅವರ ಮೇಲೆ ತಲವಾರ್‌ನಿಂದ ಕುತ್ತಿಗೆ …

Read More »

ಕಿತ್ತೂರು ಹಿರೇನಂದಿಹಳ್ಳಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು: ಪತ್ನಿ–ಪುತ್ರ ಸೇರಿ ನಾಲ್ವರ ಬಂಧನ

ಬೆಳಗಾವಿ, ಫೆಬ್ರವರಿ 26: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದ ಅಮಾನುಷ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆಗೈದ ಪ್ರಕರಣದಲ್ಲಿ ಮೃತನ ಪತ್ನಿ ಹಾಗೂ ಪುತ್ರನೇ ಸಂಚಿನಲ್ಲಿ ಭಾಗಿಯಾಗಿದ್ದರೆಂಬ ಅಂಶ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ಮೃತರನ್ನು ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ …

Read More »

ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ -ಆಸ್ಪತ್ರೆಗೆ ದಾಖಲು

ಚಿಕ್ಕೋಡಿ:ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ. ಅನಾಮಧೇಯ ವ್ಯಕ್ತಿಗಳ ಗುಂಪಿನಿಂದ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಸಂಕೇಶ್ವರ ಪಟ್ಟದಲ್ಲಿ ತಡರಾತ್ರಿ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದತ್ತಾ ಥೋರವಾತ್ 40 ಯುವಕನ ಮೇಲೆ ಹಲ್ಲೆ ಯುವಕನ ಕೈ ಹಾಗೂ ಕುತ್ತಿಗೆಯ ಭಾಗಕ್ಕೆ ತಲವಾರದಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿ. ಮಹಾರಾಷ್ಟ್ರ ರಾಜ್ಯದ ಗಡಹಿಂಗ್ಲಜ್ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನೆ …

Read More »

ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ನಾನು ಒಂದೇ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಂಘ- ಸಂಸ್ಥೆ ವಿಚಾರ ಬಂದಾಗ ಎ. ಬಿ. ಪಾಟೀಲ ಹಾಗೂ ನಾವು ಬೇರೆ ಬೇರೆ, ಆದರೆ ಪಕ್ಷದ ವಿಚಾರ ಬಂದಾಗ ನಾವು ಅವರು ಒಂದೇ ಎಂದು ಲೋಕೋಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿ ಸಂಘ-ಸಂಸ್ಥೆಗಳ ಚುನಾವಾಣೆ ಬಂದಾಗ ಮಾಜಿ ಸಚಿವ ಎ.ಬಿ.ಪಾಟೀಲ ಅವರು ಬೇರೆ ಬೇರೆಯಾಗಿದ್ದೇವೆ ಹೊರತು ಪಕ್ಷದ ವಿಚಾರ ಬಂದಾಗ ನಾವು ಅವರು ಕೂಡಿ ಪ್ರಚಾರ ಮಾಡುತ್ತೇವೆ. ಈ ಕುರಿತು …

Read More »

ಅಥಣಿ:ಡಯಾಬಿಟಿಸ್‌ಗೆ ಬಲಿಯಾದ 9ನೇ ತರಗತಿ ವಿದ್ಯಾರ್ಥಿನಿ

ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತಡರಾತ್ರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟ ದುರ್ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಂಜಲಿ ಮಂಜುನಾಥ್ ಗುಜ್ಜರ್ (14) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಅಂಜಲಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಪ್ರತಿದಿನವೂ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಳು ಎನ್ನಲಾಗಿದೆ. ನಿನ್ನೆ ಏಕಾಏಕಿ ಅಂಜಲಿ ಪ್ರಜ್ಞಾಹೀನ …

Read More »