ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ 10 -12 ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಹಣಕಾಸಿನ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಪರಿಹಾರ ದಿನ ಸಿಗದವರಿಗೆ ಇನ್ನೊಂದು ಪ್ಯಾಕೇಜ್ ನೀಡಲು ಪ್ರಯತ್ನಿಸುತ್ತೇನೆ ಎಂದು …
Read More »ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, : ಅಭಯ್ ಪಾಟೀಲ್
ಬೆಳಗಾವಿ: ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, ಸನಾತನ ಹಿಂದೂ ಸಂಸ್ಕೃತಿ, ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಹೀಗಾಗಿ ಇದೀಗ ಕೊರೊನಾ ಎಲ್ಲ ಕಡೆ ಹೆಚ್ಚಾಗಿದ್ದರಿಂದ ನಮ್ಮ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಗಲ್ಲಿಯಲ್ಲಿ ಆಯಾ ಭಾಗದ ಯುವಕ ಮಂಡಳಿ, ಮಹಿಳಾ ಸಂಘಗಳು ಹಾಗೂ ಅಲ್ಲಿನ ಪ್ರಮುಖರು ತಮ್ಮ ಮನೆ, ಗಲ್ಲಿಗಳಲ್ಲಿ ಹೋಮ ಮಾಡಬೇಕಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ. ಹೊಸೂರಿನಲ್ಲಿ ಸುಮಾರು 50 …
Read More »ವ್ಯರ್ಥವಾಯ್ತು ಸರ್ಕಾರದ ಕೋಟಿ ಕೋಟಿ ಹಣ..!
ಬೆಂಗಳೂರು: ಕರ್ನಾಟಕಕ್ಕೆ ಕೊರೊನಾ ಎರಡನೇ ಅಲೆ ರಾಕ್ಷಸನಂತೆ ಅಪ್ಪಳಿಸಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಸುನಾಮಿಯಂತೆ ಹೆಚ್ಚಳ ಆಗ್ತಿದೆ. ಮತ್ತೊಂದು ಕಡೆ ಸಾವಿನ ಪ್ರಮಾಣ ಭಯ ಹುಟ್ಟಿಸುವಂತೆ ನಿತ್ಯ ಹೆಚ್ಚಾಗುತ್ತಿದೆ. ಜನರಿಗೆ ಕೊರೊನಾ ಆತಂಕ ಒಂದು ಕಡೆಯಾದ್ರೆ ಸರಿಯಾಗಿ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್, ಔಷಧಿ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಆತಂಕ. ಇದೆರಲ್ಲದರ ಮಧ್ಯೆ ಕೊರೊನಾ ಮಣಿಸುವ ಕೆಲಸದಲ್ಲಿ ಸರ್ಕಾರ ಪದೇ ಪದೇ ಎಡವಟ್ಟಿನ ಕೆಲಸಗಳನ್ನೆ ಮುಂದುವರೆಸಿದೆ. ಕೊರೊನಾ ಕೇರ್ ಸೆಂಟರ್ …
Read More »ಕೋವಿಡ್ ಪರೀಕ್ಷೆ ವಿಳಂಬ; ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ
ಬೆಂಗಳೂರು, ಮೇ 25; ಕೋವಿಡ್ ಮಾದರಿಗಳ ಪರೀಕ್ಷೆ ವಿಳಂಬ ಮಾಡಿದ ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ. ಒಟ್ಟು 20.20 ಲಕ್ಷ ದಂಡವನ್ನು ವಿಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 31 ಖಾಸಗಿ ಲ್ಯಾಬ್, 9 ಸರ್ಕಾರಿ ಲ್ಯಾಬ್‌ಗಳು ಸೇರಿ 40 ಪ್ರಯೋಗಾಲಯಗಳಿಗೆ ದಂಡ ಹಾಕಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು …
Read More »ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ: ಬೊಮ್ಮಾಯಿ
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ. ಈ ಹಂತದಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಕಂಟೋನ್ಮೆಂಟ್ ಝೋನ್ ನಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳ ಒಂದು ಸಮಿತಿ ರಚನೆ ಮಾಡುತ್ತೇವೆ. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೋಂಕು ಹರಡದಂತೆ …
Read More »ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ – ಲಾಕ್ ಡೌನ್ ನಿಯಮ ಉಲ್ಲಂಘಿಸಿದ 10 ಅಂಗಡಿಗಳ ವಿರುದ್ಧ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ. ಫ್ರುಟ್ ಮಾರ್ಕೆೆಟ್ ನಲ್ಲಿ 8 ಹಣ್ಣಿನ ಅಂಗಡಿ, ನಾವಿಗಲ್ಲಿಯಲ್ಲಿ 1 ಚಿಕನ್ ಸೆಂಟರ್, ಆಝಾದ್ ನಗರದಲ್ಲಿ ಒಂದು ಮಠನ್ ಶಾಪ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಾಳ ಮಾರುತಿ ಮತ್ತು ಶಹಾಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.
Read More »ಬ್ಲ್ಯಾಕ್ ಫಂಗಸ್ ಚಿಕಿತ್ಸೆ:ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನೆ
ಗಂಗೊಳ್ಳಿ (ಉಡುಪಿ): ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿ ಎನಿಸಿರುವ ‘ಲೈಪೊಸೊಮನ್ ಆಂಪೊಟೆರಿಸಿನ್ ಬಿ ಔಷಧವನ್ನು ಭಾರತ್ ಸೀರಮ್ಸ್ ಆಯಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪನಿ ಸಂಶೋಧಿಸಿದ್ದು, ಕರಾವಳಿ ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನಾ ತಂಡದ ನೇತೃತ್ವ ವಹಿಸಿದ್ದರೆಂಬ ಹೆಮ್ಮೆಯ ವಿಚಾರ ಬೆಳಕಿಗೆ ಬಂದಿದೆ. ಶ್ರೀಕಾಂತ ಪೈ ನೇತೃತ್ವದ ತಂಡವು ವಿಭಿನ್ನ ಪರಿಣಾಮಕಾರಿತ್ವ, ಸುರಕ್ಷತೆ ಮತ್ತು ವಿಷತ್ವ ಪ್ರೊಫೈಲ್ಗಳನ್ನು ಹೊಂದಿರುವ 4 ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದೀಗ ಈ ಉತ್ಪನ್ನಗಳೇ ಬ್ಲಾಯಕ್ ಫಂಗಸ್ …
Read More »ಮೂರನೇ ಆಲೆ ಆತಂಕ: ಪರಿಷತ್ ಸಭಾಪತಿ ಹೊರಟ್ಟಿ ಸಲಹೆ
ಬೆಂಗಳೂರು: ಕರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸುವ ಸಾಧ್ಯತೆ ಬಗ್ಗೆ ಪರಿಣಿತರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧ್ಯಯನ ನಡೆಸಿ ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಮೂರನೇ ಆಲೆಯು ಭವಿಷ್ಯದ ವಾರಸುದಾರರಾದ ಮಕ್ಕಳ ಮೇಲೆ ಬೀರಬಹುದ ಪರಿಣಾಮಗಳ ಬಗ್ಗೆ ತಿಳಿದುಕೊಂಡು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. …
Read More »ಜೂನ್ 7 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ
ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 7 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ.12ರ ರಾತ್ರಿ 9 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡುಬರುತ್ತಿರುವುದರಿಂದ ಮೇ.24 ರ …
Read More »15 ದಿನಗಳಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್; ಇಬ್ಬರಲ್ಲಿ ವೈಟ್ ಫಂಗಸ್
ಬೆಳಗಾವಿ: ಬೆಳಗಾವಿಯಲ್ಲಿ ಕೊರೊನಾ ಆರ್ಭಟದ ನಡುವೆ ಇದೀಗ ಬ್ಲ್ಯಾಕ್ ಫಂಗಸ್ ಹಾಗೂ ವೈಟ್ ಫಂಗಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 15 ದಿನಗಳಲ್ಲಿ ಜಿಲ್ಲೆಯಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದರೆ, ಇಬ್ಬರಲ್ಲಿ ವೈ ಫಂಗಸ್ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಶಿಕಾಂತ, ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವ 9 ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ವೈಟ್ ಫಂಗಸ್ ಪತ್ತೆಯಾದ ಇಬ್ಬರೂ ಸಾವನ್ನಪ್ಪಿದ್ದಾರೆ. …
Read More »
Laxmi News 24×7