ಬೆಂಗಳೂರು, ಮೇ 21- ಕೊರೋನಾ 2ನೇ ಅಲೆ ಬಹಳ ವೇಗವಾಗಿ ಹರಡುತ್ತಿದೆ. ಮೊದಲನೆ ಅಲೆ ನಗರ ಪ್ರದೇಶದಲ್ಲಿ ಇತ್ತು. ಎರಡನೇ ಅಲೆ ಗ್ರಾಮೀಣ ಪ್ರದೇಶಕ್ಕೂ ಹಬ್ಬಿದೆ. ಸರ್ಕಾರದ ವೈಪಲ್ಯವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ಸರ್ಕಾರ ಎಚ್ಚೆತ್ತುಕೊಂಡು ಪರೀಕ್ಷೆಗಳನ್ನು ಸರಿಯಾಗಿ ಮಾಡುತ್ತಿಲ್ಲ, ವೈದ್ಯಕೀಯ ವ್ಯವಸ್ಥೆ ಸರಿ ಮಾಡಿಲ್ಲ. ಸುಳ್ಳು ಹೇಳುವುದೇ …
Read More »ಬೀದಿ ಬೀದಿಯಲ್ಲಿ ನಿಮಗೆ ಕಲ್ಲು ಹೊಡೀತಾರೆ ಹುಷಾರ್ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ಯಾರಿಗೆ ಗೊತ್ತಾ..?
ಬೆಳಗಾವಿ : ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಕೊರೊನಾ ಮೃತರ ಲೆಕ್ಕವನ್ನು ರಾಜ್ಯದ ಜನರಿಗೆ ತಪ್ಪಾಗಿ ನೀಡುತ್ತಿದ್ದಾರೆ. ಇದೇ ಲೆಕ್ಕವನ್ನು ಚಿಕ್ಕಬಳ್ಳಾಪುರ ಜನರ ಎದುರಿಗೆ ಹೇಳಿದರೆ ಅಲ್ಲಿನ ಜನ ಸಚಿವರನ್ನು ಪೊರಕೆಯಿಂದ ಹೊಡೆಯುತ್ತಾರೆ ಎಂದು ಕೆಪಿಸಿಸಿ ವಕ್ತಾರೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತಾನಾಡಿದ ಅವರು, ಚಿಕ್ಕಬಳ್ಳಾಪುರಕ್ಕೆ ಹೋಗಿ ಡಾ. ಕೆ.ಸುಧಾಕರ್ ಕೋವಿಡ್ ಸಾವಿನ ಲೆಕ್ಕ ಹೇಳಲಿ. ಚಿಕ್ಕಬಳ್ಳಾಪುರ ಜನ ಅವರನ್ನು …
Read More »ಬಿಜೆಪಿಯವರಿಗೆ ಲಸಿಕೆ ಮೇಲೆ ನಂಬಿಕೆ ಇರಲಿಲ್ಲ, ಅದಕ್ಕೆ ಮೊದಲು ಮೋದಿ ಪಡೆದಿಲ್ಲ: ಡಿ.ಕೆ.ಶಿ
ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ …
Read More »ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ
ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …
Read More »ಗಮನಿಸಿ : ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಆರಂಭ : ಈ ಮೂಲಕ ಅರ್ಜಿ ಸಲ್ಲಿಸಿ, 3 ಸಾವಿರ ಪರಿಹಾರ ಪಡೆಯಿರಿ.!
ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರದ ವತಿಯಿಂದ ಹಲವು ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಲಾಗಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನವಾಗಿ 3 ಸಾವಿರ ರೂ. ಗಳನ್ನು ಘೋಷಿಸಲಾಗಿದೆ. ಸರ್ಕಾರದಿಂದ ಘೋಷಿಸಿರುವ ಪರಿಹಾರ ಧನ 3000 ರೂ. ಗಳನ್ನು ಪಡೆಯುವ ಫಲಾನುಭವಿಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಸರ್ಕಾರದ ಪರಿಹಾರವನ್ನು ಸೇವಾ …
Read More »ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದು
ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದುಪಡಿಸಲಾಗಿದೆ ಎಂದು ಪುರಸಭೆ ವತಿಯಿಂದ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ರಣಕೇಕೆಯಿಂದ ಧಾರ್ಮಿಕ ಕೇಂದ್ರಗಳು, ದೇವಸ್ಥಾನಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಲಾಗಿದೆ. ಈ ಕುರಿತು ಮಾತನಾಡಿದ ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಸರಕಾರದ ಆದೇಶದಂತೆ ಜಾತ್ರೆಗಳ ಆಚರಣೆಗೆ ಯಾವುದೇ ಅನುಮತಿ ನೀಡಲಾಗುವುದಿಲ್ಲ. ಈ ಕೊವಿಡ್ ಸಮಯ ಹಾಗೂ ಲಾಕಡೌನ್ ನಿಯಮ ಉಲ್ಲಂಘಿಸಿ …
Read More »ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್
ಬೆಳಗಾವಿ: ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿದ್ದು, ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ ಳನ್ನು ನೀಡಿದ್ದು, ಅವುಗಳನ್ನು ಉಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಅಂಬುಲೆನ್ಸ್ ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೊರೋನಾ …
Read More »ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಔಷಧಿ ಬಿಡುಗಡೆ
ಬೆಂಗಳೂರು, ಮೇ 21- ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಆಯುಷ್ ಸಚಿವಾಲಯ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಕೋವಿಡ್- 19 ರೋಗಿಗಳಿಗೆ ಆಯುಷ್ 64 ಔಷಧಿಯನ್ನು ವಿತರಿಸಲು ಮುಂದಾಗಿದೆ. ಆಯುಷ್ ಸಚಿವಾಲಯವು ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಜೊತೆಗೆ ಆಯುಷ್ 64 ಆಯುರ್ವೇದ ಮಾತ್ರೆಯ ಮೌಲ್ಯಮಾಪನ ಮಾಡಲು ಬಹು-ಕೇಂದ್ರ ಸಂಶೋಧನೆ ನಡೆಸಿತ್ತು. ಈ ಪ್ರಯೋಗದಲ್ಲಿ ಸ್ಟ್ಯಾಂಡರ್ಡ್ ಆರೈಕೆ ಜೊತೆಗೆ …
Read More »ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ
ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಅವರೇ ಹಲ್ಲೆಗೊಳಗಾದ ವ್ಯಕ್ತಿ. ಪಿಡಿಒ ಬುದ್ಧಿವಾದ ಹೇಳಿದ್ದಕ್ಕೆ ಪುಂಡ ಯುವಕನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಲಾಕ್‍ಡೌನ್ ಇದೆ, ಕ್ರಿಕೆಟ್ …
Read More »ಕೋವಿಡ್ನಿಂದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ನಿಧನ
ಬೆಳಗಾವಿ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ರೈತ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ (78) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದವರಾಗಿದ್ದ ಬಾಬಾಗೌಡ ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ. ವಾರದ ಹಿಂದೆ ಬಾಬಾಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಾಬಾಗೌಡ ಅವರು 1989ರಲ್ಲಿ ಬೆಳಗಾವಿ …
Read More »
Laxmi News 24×7