ಮಾಸ್ಕ್ ಇಲ್ಲದೇ ಕೊರೊನಾ ಟ್ರೀಟ್ಮೆಂಟ್ ಕೊಡುತ್ತಾರೆಂಬ ಕಾರಣಕ್ಕೆ ಬಂದ್ ಆಗಿದ್ದ ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್ ಇಂದಿನಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಡಾ. ರಾಜು ಕೃಷ್ಣಮೂರ್ತಿ ಬೆಂಗಳೂರಿನ ಮೂಡಲಪಾಳ್ಯದಲ್ಲಿ ನಡೆಸುತ್ತಿದ್ದ ಸಾಗರ್ ಕ್ಲಿನಿಕ್ನಲ್ಲಿ ಮಾಸ್ಕ್ ಹಾಕಿಕೊಳ್ಳದೇ ಇರೋದು, ಸಾಮಾಜಿಕ ಅಂತರ ಪಾಲನೆ ಮಾಡದಿರೋದು ಸೇರಿದಂತೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದಾದ ಬಳಿಕ ಸಾಗರ್ ಕ್ಲಿನಿಕ್ ಬಂದ್ ಆಗಿತ್ತು. ಡಾ. ರಾಜು ಕೃಷ್ಣಮೂರ್ತಿ …
Read More »ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.
ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ಓಟ ನಿಲ್ಲುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಬುಧವಾರ ಜಿಲ್ಲೆಯಲ್ಲಿ 2234 ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಹಳೆಯ ದಾಖಲೆಗಳನ್ನೆಲ್ಲ ಮುರಿದಿದೆ. ಇದೇ ವೇಳೆ ಒಂದೇ ದಿನ 11 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 34281 ಜನರಿಗೆ ಬುಧವಾರ ಸೋಂಕು ಪತ್ತೆಯಾಗಿದೆ. 49953 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 468 ಜನರು ಸಾವಿಗೀಡಾಗಿದ್ದಾರೆ. ಪಾಸಿಟಿವಿಟಿ …
Read More »ಮಕ್ಕಳ ಮೇಲೆ ಅಪ್ಪಳಿಸಬಹುದಾದ ಕೊರೋನಾ 3ನೇ ಅಲೆ: ಕೆಎಲ್ಇ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ
ಬೆಳಗಾವಿ – ಜಗತ್ತಿನಾದ್ಯಂತ ವಿಶೇಷವಾಗಿ ಭಾರತವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕೋವಿಡ್ -೧೯ ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರಿಸರ್ಚ್, ಡೀಮ್ಡ್ ವಿಶ್ವವಿದ್ಯಾಲಯ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ಈ ಭಾಗದ ಜನರಿಗೆ ಸಕಲ ಸೇವೆ ನೀಡಲು ಬದ್ದವಾಗಿದ್ದು, ಗರ್ಭಿಣಿ ಮತ್ತು ಮಕ್ಕಳ ಆರೈಕೆಗಾಗಿ ೪೦ ಹಾಸಿಗೆಗಳನ್ನು ಮೀಸಲಿಟ್ಟು ಚಿಕಿತೆಗ್ಸೆ …
Read More »ಸೋಂಕಿತರಿಗೆ ಆಪತ್ಬಾಂಧವ ಸರಕಾರಿ ಆಸ್ಪತ್ರೆ
ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲವೊಂದಿತ್ತು. ಆದರೆ, ಕೊರೊನಾ ಮೊದಲ ಅಲೆ ಮತ್ತು ಎರಡನೇ ಅಲೆ ಕಾಲಿಟ್ಟಿದ್ದೇ ತಡ, ಬಡವರು-ಶ್ರೀಮಂತರೆನ್ನದೇ ಸರ್ಕಾರಿ ಆಸ್ಪತ್ರೆಯನ್ನೇ ಸ್ಮರಿಸುತ್ತಿದ್ದಾರೆ. ಸದ್ಯ ಇಡೀ ಜಿಲ್ಲೆಯ ಏಕೈಕ ದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಖ್ಯಾತಿ ಪಡೆದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಕೊರೊನಾ ಸಂಕಷ್ಟದ ಕಾಲದಲ್ಲಿ ಸಾವಿರಾರು ಜನರಿಗೆ ಆಪತ್ಭಾಂದವ ಆಗಿದೆ. ಹೌದು. ಸದ್ಯ ಜಿಲ್ಲಾಸ್ಪತ್ರೆಗೆ ಎಲ್ಲಿಲ್ಲದ ಬೇಡಿಕೆ. ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಶ್ರೀಮಂತರು, ಗಣ್ಯರು, …
Read More »ಪ್ರತಿ ನಿಮಿಷಕ್ಕೆ ಸುಮಾರು ೧೫೦೦ಲೀಟರ್ ಆಮ್ಲಜನಕ ತಯಾರಾಗಿ ಸರಬರಾಜು ಮಾಡುವ ವಿಶೇಷ ಘಟಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿಕ
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು ೧೦೪೦ ರಷ್ಟು ಹಾಸಿಗೆಗಳಿದ್ದು, ಅದರಲ್ಲಿ ೮೨೨ ಆಮ್ಲಜನಕ ೭೬ ವೆಂಟಿಲೇಟರ್ ೩೫ ಎಚ್‌ಎಪ್‌ಎನ್‌ಸಿ ಹಾಸಿಗೆಗಳು. ಪ್ರಸ್ತುತ ಇಲ್ಲಿ ೧೩ಕೆಎಲ್ ಸಾಮರ್ಥ್ಯದ ಆಮ್ಲಜನಕ ತಯಾರಿಕಾ ಘಟಕ ಇದ್ದು, ಇದು ಈಗಿನ ಪರಿಸ್ಥಿತಿಗೆ ಸಮರ್ಪಕವಾಗುತ್ತಿಲ್ಲ. ಇದನ್ನು ಗಮನಿಸಿ, ಶಾಸಕ ಅಭಯ ಪಾಟೀಲ ಹೆಚ್ಚುವರಿಯಾಗಿ ಆಮ್ಲಜನಕ ಘಟಕದ ಸ್ಥಾಪನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ವಿನಂತಿಸಿದ್ದರು. ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಮಾರು ೨.೮೫ ಕೋಟಿ …
Read More »ಕೋವಿಡ್ ಟೈಮಲ್ಲಿ 25ಸಾವಿರ ಕೋಟಿ ರಸ್ತೆ ಯೋಜನೆ ಬೇಕಾ? ನಿಮಗೆಷ್ಟು ಕಮಿಷನ್ ಸಿಗುತ್ತೆ?ʼ
ಬೆಂಗಳೂರು: ಕೋವಿಡ್ ಪ್ರೇರಿತ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ನಷ್ಟಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಕುರಿತು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮಾಂತರ ಪ್ರದೇಶಗಳಿಗೆ ಕೋವಿಡ್ ಎರಡನೇ ಅಲೆ ತಗುಲಿ ಜನ ವಿಲವಿಲ ಒದ್ದಾಡ್ತಿದ್ದಾರೆ. ಮಾನ್ಯ ಯಡಿಯೂರಪ್ಪನವರೇ ನಿನಗೆ ಒಂದು ಪ್ರಶ್ನೆ ಕೇಳ್ತೇನೆ. ಕಳೆದ ಒಂದು ವಾರದಿಂದ ನಗರದ ರಿಂಗ್ ರಸ್ತೆಗಳಿಗೆ 25 ಸಾವಿರ ಕೋಟಿ ಯೋಜನೆ ಕೈಗೆತ್ತಿಕೊಂಡಿದ್ದೀರಿ. ಸಾಲ ಸೋಲಮಾಡಿ ಈ ಯೋಜನೆ ಮಾಡ್ತಿದ್ದೀರಾ..? …
Read More »ಕೊರೊನಾ ವಿಶೇಷ ಪ್ಯಾಕೇಜ್ ಗೆ ರಾಜ್ಯ ರೈತ ಸಂಘದ ಆಕ್ರೋಶ
ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ಹೊರಹಾಕಿದೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಆರ್ಥಿಕ ಪ್ಯಾಕೇಜ್ ಮೂಲಕ ಸಿಎಂ ಯಡಿಯೂರಪ್ಪ ಬಡವರ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಹೇಳಿದ್ರು. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯಾವುದೇ ಅಂಶ ಈ ಪ್ಯಾಕೇಜ್ನಲ್ಲಿಲ್ಲ. ಯಡಿಯೂರಪ್ಪ ಘೋಷಣೆ ಮಾಡಿದ ಈ …
Read More »ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗೋವರೆಗೆ ಲಾಕ್ಡೌನ್ ಮುಂದುವರೆಸಿ; ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು (ಮೇ 19): ಕರ್ನಾಟಕದಲ್ಲಿ ಲಾಕ್ಡೌನ್ ಮುಂದುವರಿಸಿ ಬಡವರಿಗೆ ಆಹಾರ ಹಾಗೂ ದುಡ್ಡು ಕೊಡಬೇಕು. ರಾಜ್ಯದಲ್ಲಿ ಕೊರೋನಾ ಟೆಸ್ಟ್ ಕಡಿಮೆ ಮಾಡಿದಾರೆ, ಪಾಸಿಟಿವ್ ರೇಟ್ ಜಾಸ್ತಿ ಆಗಿದೆ. ರಾಜ್ಯದ ಎರಡು ಜಿಲ್ಲೆಗಳಲ್ಲಿ ಶೇ. 55 ಪಾಸಿಟಿವಿಟಿ ರೇಟ್ ಇದೆ. ಅದು ಕಂಟ್ರೋಲ್ ಗೆ ಬರಬೇಕು ಅಂದರೆ 5%ಗಿಂತ ಕಡಿಮೆ ಇರಬೇಕು. ಕರ್ನಾಟಕದಲ್ಲಿ ಲಾಕ್ಡೌನ್ ಮುಂದುವರೆಸಿ. ಪಾಸಿಟಿವ್ ರೇಟ್ ಶೇ. 5ಕ್ಕಿಂತ ಕಡಿಮೆ ಬರೊ ತನಕ ಲಾಕ್ಡೌನ್ ಮಾಡಿ. ನಾನು ಸರ್ಕಾರಕ್ಕೆ …
Read More »ಸ್ಮಶಾನ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ನಟ ಚೇತನ್ ಮನವಿ
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ …
Read More »ಬೆಂಗಳೂರು: ಮಾರ್ಗಸೂಚಿ ಉಲ್ಲಂಘಿಸಿದ 20 ಸಾವಿರಕ್ಕೂ ಅಧಿಕ ವಾಹನಗಳ ಜಪ್ತಿ
ಬೆಂಗಳೂರು, ಮೇ 18: ಕೋವಿಡ್ ಸಂಬಂಧ ರಾಜ್ಯ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ ಆರೋಪ ಸಂಬಂಧ 20 ಸಾವಿರಕ್ಕೂ ಹೆಚ್ಚು ವಾಹನಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದಾರೆ. 20,895 ಜಪ್ತಿಯಾದ ವಾಹನಗಳ ಪೈಕಿ 19,056 ಬೈಕ್‍ಗಳಿದ್ದು, 879 ಆಟೊ ರಿಕ್ಷಾಗಳಿವೆ. ಇನ್ನು, 960 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Read More »
Laxmi News 24×7