Breaking News

ಜಿಲ್ಲೆ

ಕೋವಿಡ್ ಹಿನ್ನೆಲೆಯಲ್ಲಿ ಅನಾಥ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ಧ: ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ

ಬೆಂಗಳೂರು ಮೇ.18 – ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗು ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ. ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು …

Read More »

ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ  ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ  ಸ್ಥಾಪನೆಯಾದಲ್ಲಿ ಸುಮಾರು 50 …

Read More »

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ …

Read More »

ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರ ಕಾರಣ : ಡಿ.ಕೆ.ಶಿವಕುಮಾರ್

ಬೆಂಗಳೂರು : ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರವೇ ಕಾರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಲೇಬೇಕು. ಈ ಕಾಯಿಲೆ ಸರ್ಕಾರ ಕೊಟ್ಟಿದ್ದು, ಹಳ್ಳಿಗಳಲ್ಲೂ ಕೊರೊನಾ ಬರಲು ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು. ಇನ್ನು ಹಳ್ಳಿಗಳಲ್ಲಿ ಕೃಷಿ ಮಾಡ್ತಿದ್ದವರಿಗೂ ಕೊರೊನಾ ಬಂದಿದೆ. ಬೆಳಿಗ್ಗೆ ನನ್ಮ ತೀರ ಆತ್ಮಿಯರು …

Read More »

ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ …

Read More »

ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿ

ಬೆಳಗಾವಿ – ಖ್ಯಾತ ಗುತ್ತಿಗೆದಾರ, ಬೆಳಗಾವಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಎಲ್.ಕುಲಕರ್ಣಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಳೆದ 15 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೋಯುಸಿರೆಳೆದರು. ಹನುಮಾನ್ ನಗರ ನಿವಾಸಿಯಾಗಿದ್ದ ಅವರಿಗೆ ತಂದೆ, ತಾಯಿ, ಪತ್ನಿ, ಮಗ, ಮಗಳು ಇದ್ದಾರೆ.

Read More »

ಕೊರೊನಾ ವೈರಸ್ ಗೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಕೊರೊನಾ ವೈರಸ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟ 12 ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.   ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರನಾ ವೈರಸ್ ಸೋಂಕಿನ …

Read More »

88ನೇ ವಸಂತಕ್ಕೆ ಕಾಲಿಟ್ಟ ಎಚ್‌.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳವಾರ 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಇಂದು ಬೆಳಿಗ್ಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ಇತ್ತ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ ಸುಮಲತಾ ಅಂಬರೀಶ್, ಸಚಿವರಾದ ಡಾ.ಕೆ.ಸುಧಾಕರ್, …

Read More »

ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ: ಹೊರಟ್ಟಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿದ್ದರೂ ಶಿಕ್ಷಕರ ಹಿತ ಕಾಯುವಲ್ಲಿ ಮುಂದಾಗದ ರಾಜ್ಯ ಸರ್ಕಾರ ನಿರ್ಲಕ್ಷಕ್ಕೆ ಕಿಡಿಕಾರಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಇದೇ ವೇಳೆ ಶಿಕ್ಷಕರ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಕೆಲ ಸಲಹೆ ನೀಡಿದ್ದಾರೆ. ಮೊದಲಿನಿಂದಲೂ ಚುನಾವಣೆಗಳು, ಜನಗಣತಿ ಸೇರಿದಂತೆ ಎಲ್ಲ ಆಪತ್ತುಗಳ ಸಂದರ್ಭದಲ್ಲಿ ಸರಕಾರದ ಎಲ್ಲ ಕೆಲಸಗಳಿಗೂ ಶಿಕ್ಷಕರನ್ನು ತೊಡಗಿಸಿಕೊಳ್ಳಲಾಗುತ್ತಿದೆ. ಆದರೆ ಅಂತಹ ಕೆಲಸ ನಿರ್ವಹಣೆಯಲ್ಲಿ ಅವರಿಗೆ ಏನಾದರೂ ತೊಂದರೆ ಅನಾಹುತ …

Read More »

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿ ಫಸ್ಟ್ ಲುಕ್ ನಾಳೆ ರಿಲೀಸ್

ಶರಣ್ ನಟನೆಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್‌ ಲುಕ್ ಅನ್ನು ನಾಳೆ ಬೆಳಿಗ್ಗೆ 11.05ಕ್ಕೆ ರಿವೀಲ್ ಮಾಡಲಿದ್ದಾರೆ. ಈ ಕುರಿತು ಶರಣ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.   ಈ ಚಿತ್ರವನ್ನು ಶರಣ್ ಅವರ ಲಡ್ಡು ಸಿನಿಮಾ ಹೌಸ್ ಮತ್ತು ತರುಣ್ ಸುಧೀರ್ ಅವರ ತರುಣ್ ಸುಧೀರ್ ಕ್ರಿಯೆಟೀವ್ಸ್ ನಿಂದ ನಿರ್ಮಾಣ ಮಾಡಲಾಗುತ್ತಿದೆ. ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ನಟಿ ನಿಶ್ವಿಕಾ ನಾಯ್ಡು …

Read More »