ಬೆಂಗಳೂರು : ಚಿನ್ನ ಗಿರವಿ ಇಟ್ಟು ಸಾಲ ಪಡೆದ ಗ್ರಾಹಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ್ಡಿ ಮನ್ನಾ ಮಾಡುವ ಚಿಂತನೆಯಿದ್ದು, ಈ ಬಗ್ಗೆ ಸದ್ಯದಲ್ಲೇ ವರ್ತಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಆಭರಣ ವರ್ತಕರ ಸಂಘ ತಿಳಿಸಿದೆ. ಬಡ ಮತ್ತು …
Read More »ವಾಹನ ಸವಾರರಿಗೆ ಬಿಗ್ ಶಾಕ್ : 100 ರ ಗಡಿ ಸಮೀಪ ಪೆಟ್ರೋಲ್ ಬೆಲೆ!
ನವದೆಹಲಿ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ಇಂದು ಮತ್ತೆ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಯಾಗಿದೆ . ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 27 ಪೈಸೆ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 29 ಪೈಸೆ ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಈಗ ಲೀಟರ್ ಗೆ 92.85 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 83.51 ರೂ.ಗೆ ಏರಿಕೆಯಾಗಿದೆ. …
Read More »ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಸೋಂಕಿನಿಂದ 476 ಜನರು ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 13,338 ಜನರಿಗೆ ಕೊವಿಡ್ ದೃಢಪಟ್ಟಿದ್ದು, 239 ಜನರು ಅಸುನೀಗಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರನ್ನೂ ಸೇರಿಸಿ ಈವರೆಗೆ ರಾಜ್ಯದ ಕೊವಿಡ್ …
Read More »ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …
Read More »ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್
ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …
Read More »ಹಸಿದ ಹೊಟ್ಟೆಗೆ ಆಸರೆಯಾದ ಶಿವಣ್ಣ ದಂಪತಿ
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್‍ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ. ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು …
Read More »ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ
ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ …
Read More »ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …
Read More »‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್
ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …
Read More »ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್
ಬೆಳಗಾವಿ: ಕೊರೊನಾ ವಿಚಾರದಲ್ಲೂ ಎಂಇಎಸ್ ಪುಂಡಾಟಿಕೆ ಮೆರೆದಿದ್ದು, ಬ್ರಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಬಳಿ ನೀಂತಿ ವೀಡಿಯೋ ಮಾಡಿಕೊಂಡು, ಪೋಸ್ ನೀಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ನುಗ್ಗಿ ಬೆಡ್‍ಗಳ ಪರಿಶೀಲನೆ ನಡೆಸಿದ್ದು, ಬೆಳಗಾವಿ ಲೋಕಸಭಾ ಉಪಚುನಾವಣೆ ಪರಾಜಿತ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ನೇತೃತ್ವದಲ್ಲಿ ಪುಂಡರು ಬಿಮ್ಸ್ ಆಸ್ಪತ್ರೆಗೆ ನುಗ್ಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ನಿರುಪಯುಕ್ತ ಬೆಡ್‍ಗಳ ಬಳಿ ನಿಂತು ವೀಡಿಯೋ ಮಾಡಿಕೊಂಡು ಪೋಸ್ ನಿಡಿದ್ದಾರೆ. ಎಂಇಎಸ್ ಪುಂಡ ಶುಭಂ ಶೆಲ್ಕೆ …
Read More »
Laxmi News 24×7